ತಂದೆಯ ಆರೋಗ್ಯ ಗಂಭೀರ: ವಿಶ್ವಕಪ್‌ ನಡುವೆಯೇ ದಿಢೀರ್ ತವರಿಗೆ ಮರಳಿದ ರಿಂಕು ಸಿಂಗ್

Date:

ಕುಟುಂಬದಲ್ಲಿ ಎದುರಾದ ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ, ಭಾರತ ಕ್ರಿಕೆಟ್ ತಂಡದ ಬ್ಯಾಟರ್ ರಿಂಕು ಸಿಂಗ್ ಅವರು ದಿಢೀರನೆ ತಮ್ಮ ಊರಿಗೆ ಮರಳಿದ್ದಾರೆ.

- Advertisement -

​ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರ ತಂದೆಯ ಆರೋಗ್ಯ ಸ್ಥಿತಿ ಕಳೆದ ಕೆಲವು ದಿನಗಳಿಂದ ತೀರಾ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ತವರಿಗೆ ತೆರಳಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

​ಇಂದು ಸಂಜೆ 5:30ರ ಸುಮಾರಿಗೆ ಚೆನ್ನೈನಲ್ಲಿ ಭಾರತ ತಂಡವು ಅಭ್ಯಾಸ ನಡೆಸಿತು. ಆದರೆ, ಅಭ್ಯಾಸದ ಕಣದಲ್ಲಿ ರಿಂಕು ಗೈರುಹಾಜರಿ ಎದ್ದು ಕಾಣುತ್ತಿತ್ತು. ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಆದರೂ, ತಂದೆಯ ಜೊತೆಗಿರಲು ರಿಂಕು ಅವರು ಈಗಾಗಲೇ ಚೆನ್ನೈನಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ.

​ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ರಿಂಕು ಸಿಂಗ್ ಅವರು ಭಾರತದ ‘ಆಡುವ ಹನ್ನೊಂದರ’ ಬಳಗದಲ್ಲಿ ಕಾಯಂ ಸ್ಥಾನ ಪಡೆದುಕೊಂಡಿದ್ದರು. ಆದರೆ, ಈ ಎಡಗೈ ಬ್ಯಾಟರ್‌ಗೆ ಈ ಟೂರ್ನಿಯು ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಟ್ಟಿಲ್ಲ. ಅವರು ಮತ್ತೆ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಸದ್ಯಕ್ಕೆ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅವರ ಗೈರಿನ ಹಿನ್ನೆಲೆಯಲ್ಲಿ ತಂಡದ ಆಡಳಿತ ಮಂಡಳಿಯು ಬೇರೆ ಆಟಗಾರರ ಆಯ್ಕೆಯನ್ನು ಪರಿಗಣಿಸುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ
​
ರಿಂಕು ಗೈರುಹಾಜರಿಯ ನಡುವೆಯೂ ತಂಡದ ಇತರ ಆಟಗಾರರು ನೆಟ್ಸ್‌ನಲ್ಲಿ ತಮ್ಮ ಎಂದಿನ ಅಭ್ಯಾಸದಲ್ಲಿ ನಿರತರಾಗಿದ್ದರು. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ದೀರ್ಘಕಾಲ ಬ್ಯಾಟಿಂಗ್ ಕೌಶಲ ಸಾಣೆ ಹಿಡಿದರು. ಯುವ ಆಟಗಾರ ಅಭಿಷೇಕ್ ಶರ್ಮಾ ಅವರು ದೀರ್ಘಕಾಲದ ಬೌಲಿಂಗ್ ಸ್ಪೆಲ್ ಬಳಿಕ ಬ್ಯಾಟಿಂಗ್‌ಗಿಳಿದರು.

​ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಬೌಲಿಂಗ್ ಕೋಚ್ ಮೊರ್ನೆ ಮಾರ್ಕೆಲ್ ಅವರ ಮಾರ್ಗದರ್ಶನದಲ್ಲಿ ಕೌಶಲ ಆಧಾರಿತ ಅಭ್ಯಾಸ ನಡೆಸಿದರು. ಮತ್ತೊಂದೆಡೆ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಅವರು ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಗೆ ಬೌಲಿಂಗ್ ಮಾಡುವ ಮೂಲಕ ಬೆವರು ಹರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...