ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ರಿಷಬ್ ಪಂತ್ ಸಂಪೂರ್ಣ ಸದೃಢತೆ ಹೊಂದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಕಳೆದ ವರ್ಷದ ಅಪಘಾತಗೊಂಡ ನಂತರ 14 ತಿಂಗಳಿನಿಂದ ಚೇತರಿಸಿಕೊಳ್ಳುತ್ತಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಸೇರಿಕೊಳ್ಳಲಿದ್ದಾರೆ.
ಬಿಸಿಸಿಐ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಫಿಟ್‌ನೆಸ್ ಸಮಸ್ಯೆಯಿಂದಾಗಿ ವೇಗದ ಬೌಲರ್‌ಗಳಾದ ಮೊಹಮದ್ ಶಮಿ ಹಾಗೂ ಪ್ರಸಿದ್ಧ ಕೃಷ್ಣ ಮಾ.22 ರಂದು ಆರಂಭವಾಗುವ ಐಪಿಎಲ್ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ.
ಉತ್ತರಖಂಡದ ರೋರ್‌ಕೆಯಲ್ಲಿ ಡಿಸೆಂಬರ್ 30, 2022ರಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ರಿಷಬ್ ಪಂತ್ ಸಂಪೂರ್ಣ ಸುಧಾರಿಸಿದ್ದು, ಮುಂಬರುವ ಟಾಟಾ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಐದನೇ ಟೆಸ್ಟ್ | ಭಾರತಕ್ಕೆ 255 ರನ್‌ಗಳ ಮುನ್ನಡೆ; ಮೊದಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ ಕನ್ನಡಿಗ ಪಡಿಕ್ಕಲ್
ಫೆ.23 2023ರಂದು ಎಡಗಾಲಿನ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪ್ರಸಿದ್ಧ ಕೃಷ್ಣ ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಬಿಸಿಸಿಐನ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ.
ಮತ್ತೊಬ್ಬ ಪ್ರಮುಖ ವೇಗದ ಬೌಲರ್ ಮೊಹಮದ್ ಶಮಿ ಕೂಡ ಫೆ.26 ರಂದು ಬಲಗಾಲಿನ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಇವರು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.
