ಐಪಿಎಲ್‌ಗೆ ರಿಷಬ್ ಪಂತ್ ಲಭ್ಯ, ಶಮಿ, ಪ್ರಸಿದ್ಧ ಔಟ್: ಬಿಸಿಸಿಐ

Date:

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಆಡಲು ರಿಷಬ್‌ ಪಂತ್‌ ಸಂಪೂರ್ಣ ಸದೃಢತೆ ಹೊಂದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.

- Advertisement -

ಕಳೆದ ವರ್ಷದ ಅಪಘಾತಗೊಂಡ ನಂತರ 14 ತಿಂಗಳಿನಿಂದ ಚೇತರಿಸಿಕೊಳ್ಳುತ್ತಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಸೇರಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಬಿಸಿಸಿಐ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಫಿಟ್‌ನೆಸ್ ಸಮಸ್ಯೆಯಿಂದಾಗಿ ವೇಗದ ಬೌಲರ್‌ಗಳಾದ ಮೊಹಮದ್‌ ಶಮಿ ಹಾಗೂ ಪ್ರಸಿದ್ಧ ಕೃಷ್ಣ ಮಾ.22 ರಂದು ಆರಂಭವಾಗುವ ಐಪಿಎಲ್‌ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ.

ಉತ್ತರಖಂಡದ ರೋರ್‌ಕೆಯಲ್ಲಿ ಡಿಸೆಂಬರ್‌ 30, 2022ರಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್‌ ರಿಷಬ್ ಪಂತ್ ಸಂಪೂರ್ಣ ಸುಧಾರಿಸಿದ್ದು, ಮುಂಬರುವ ಟಾಟಾ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಐದನೇ ಟೆಸ್ಟ್ | ಭಾರತಕ್ಕೆ 255 ರನ್‌ಗಳ ಮುನ್ನಡೆ; ಮೊದಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ ಕನ್ನಡಿಗ ಪಡಿಕ್ಕಲ್

ಫೆ.23 2023ರಂದು ಎಡಗಾಲಿನ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪ್ರಸಿದ್ಧ ಕೃಷ್ಣ ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಬಿಸಿಸಿಐನ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ.

ಮತ್ತೊಬ್ಬ ಪ್ರಮುಖ ವೇಗದ ಬೌಲರ್ ಮೊಹಮದ್ ಶಮಿ ಕೂಡ ಫೆ.26 ರಂದು ಬಲಗಾಲಿನ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಇವರು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ...