ಸದ್ಯಕ್ಕಂತೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ: ವದಂತಿಗಳಿಗೆ ಸ್ಪಷ್ಟ ತೆರೆ ಎಳೆದ ರೋಹಿತ್ ಶರ್ಮಾ

Date:

“ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕಂತೂ ನಿವೃತ್ತಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ವದಂತಿಗಳು ಹರಡದಿರಲು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ”…. ಈ ರೀತಿಯ ಹೇಳಿಕೆ ನೀಡಿದ್ದು ಟೀಮ್ ಇಂಡಿಯಾ ನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮಾ.

- Advertisement -

ಹೌದು.‌ ಈ ರೀತಿಯ ಸ್ಪಷ್ಟವಾದ ಹೇಳಿಕೆಯನ್ನು ಬಹಿರಂಗವಾಗಿಯೇ ಹೇಳುವ ಮೂಲಕ ತಮ್ಮ ನಿವೃತ್ತಿ ವದಂತಿಗಳಿಗೆ ನಾಯಕ ತೆರೆ ಎಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಅಂತರದಿಂದ ಸೋಲಿಸಿ, ಚಾಂಪಿಯನ್‌ ಪಟ್ಟ ಅಲಂಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಸುದ್ದಿಗೋಷ್ಠಿಯ ಮುಗಿಸುವುದಕ್ಕೂ ಮುನ್ನ ಈ ರೀತಿಯ ಹೇಳಿಕೆ ನೀಡಿದ್ದಾರೆ.

ತಮ್ಮ ಕುರ್ಚಿಯಿಂದ ಏಳುವುದಕ್ಕೂ ಮುನ್ನ, “ಇನ್ನೊಂದು ವಿಷಯ. ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಪಡೆಯುತ್ತಿಲ್ಲ. ಮುಂದೆ ಯಾವುದೇ ವದಂತಿಗಳು ಹರಡಲ್ಲ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಹೇಳುತ್ತಿದ್ದೇನೆ. ಧನ್ಯವಾದಗಳು” ಎಂದು ರೋಹಿತ್ ಹೇಳಿದರು.

ಹಿಟ್‌ಮ್ಯಾನ್‌ ನಿರ್ಧಾರವು ಆಘಾತಕಾರಿ ಅಂತೂ ಅಲ್ಲ. ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯವು ಸಕ್ರಿಯ ಭಾರತೀಯ ಕ್ರಿಕೆಟಿಗನಾಗಿ ರೋಹಿತ್ ಅವರ ಕೊನೆಯ ಪಂದ್ಯ ಎಂಬ ವದಂತಿಗಳು ಹರಡಿತ್ತು. ಆದರೂ, 38 ವರ್ಷದ ಆಟಗಾರನ ಫಿಟ್‌ನೆಸ್‌, ಫಾರ್ಮ್‌ ನೋಡಿದರೆ ಅವರ ನಿವೃತ್ತಿಗೆ ಇನ್ನೂ ಸ್ವಲ್ಪ ಸಮಯವಿದೆ ಎಂಬುವುದು ಸ್ಪಷ್ಟವಾಗಿದೆ‌.

1003730297

ಇತ್ತೀಚೆಗೆ ಅಂತ್ಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ, ಸಿಡ್ನಿ ಟೆಸ್ಟ್‌ ಪಂದ್ಯಕ್ಕೂ ಮುಂಚಿತವಾಗಿ ರೋಹಿತ್ ಆಡುವ ಬಳಗದಿಂದ ಹೊರಗುಳಿದಾಗ ನಿವೃತ್ತಿ ವದಂತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಡಿತ್ತು. ಬಾಕ್ಸಿಂಗ್ ಡೇ ಟೆಸ್ಟ್ ಮುಗಿದ ಬಳಿಕ ರೋಹಿತ್ ನಿವೃತ್ತಿ ಘೋಷಿಸುತ್ತಾರೆ ಎಂದು ವರದಿಯಾಗಿತ್ತು. ಆದರೆ, ರೋಹಿತ್ ತಾನು ಟೀಮ್ ಇಂಡಿಯಾಕ್ಕಾಗಿ ಆಡುವುದನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

1003730326

ಸದ್ಯ ತಾನು ಏಕದಿನ ಮಾದರಿಯ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುವುದಾಗಿ ರೋಹಿತ್‌ ಪ್ರತಿಜ್ಞೆ ಮಾಡಿದ್ದರೂ, ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 2027ರ ವಿಶ್ವಕಪ್‌ನಲ್ಲಿ ಆಡುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ. ಏಕೆಂದರೆ ಟೂರ್ನಿಗೆ ಇನ್ನೂ ಎರಡು ವರ್ಷಗಳಿವೆ. ಹಾಗಾಗಿ, ಈ ನಡುವೆ ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಅವರು ಈ ಹಿಂದೆ ಎಂಎಸ್ ಧೋನಿ ಮಾಡಿದ ಸಾಧನೆಯನ್ನು ಮಾಡಿದ್ದಾರೆ. ಒಂದಕ್ಕಿಂತ ಹೆಚ್ಚು ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕೇವಲ ಒಂಬತ್ತು ತಿಂಗಳ ಅವಧಿಯಲ್ಲಿ ಭಾರತವನ್ನು ಟಿ20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಮುನ್ನಡೆಸಿದ್ದಾರೆ.

ಒಂದು ವೇಳೆ 2023ರ ನವೆಂಬರ್ 19ರಂದು ಆಸ್ಟ್ರೇಲಿಯಾ ವಿರುದ್ಧ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್ ಪಂದ್ಯದಲ್ಲಿ ವಿಶ್ವಕಪ್‌ ಗೆಲ್ಲುತ್ತಿದ್ದರೆ ವಿಶ್ವ‌ ಅದು ದಾಖಲೆಯಾಗುತ್ತಿತ್ತು. ಎರಡು ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಎಲ್ಲಾ ಮೂರು ಪ್ರಮುಖ ಐಸಿಸಿ ಪ್ರಶಸ್ತಿಗಳನ್ನು ಗೆದ್ದ ದಾಖಲೆ ರೋಹಿತ್ ಹೆಸರಿನಲ್ಲಿ ದಾಖಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...