‘ಟೀಮ್ ಇಂಡಿಯಾ’ ನಾಯಕತ್ವಕ್ಕೆ ರಾಜೀನಾಮೆ ನೀಡಲು ರೋಹಿತ್ ನಿರ್ಧಾರ…!

Date:

ಭಾರತೀಯ ಕ್ರಿಕೆಟ್‌ನ ಟೆಸ್ಟ್‌ ಮತ್ತು ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಿಸಿಸಿಐದ ಉನ್ನತ ಅಧಿಕಾರಿಗಳು ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಕ್ರಿಕೆಟ್‌ ಟೂರ್ನಿಗಳ ಫಲಿತಾಂಶಗಳು, ಅದರಲ್ಲೂ ವಿಶೇಷವಾಗಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ (1-3) ಸೋಲು ಮತ್ತು ನ್ಯೂಜಿಲೆಂಡ್ ವಿರುದ್ಧ ಸ್ವದೇಶದಲ್ಲೇ 0-3 ಅಂತರದ ಹೀನಾಯ ಸೋಲಿನ ಬಗ್ಗೆ ಚರ್ಚೆಗಳು ನಡೆದಿವೆ. ಸಭೆಯಲ್ಲಿ, ಇನ್ನೂ ಕೆಲವು ‘ತಿಂಗಳು’ ತಂಡದ ನಾಯಕನಾಗಿ ಉಳಿಯುವ ಉದ್ದೇಶವನ್ನು ವ್ಯಕ್ತಪಡಿಸಿರುವ ರೋಹಿತ್, ಶೀಘ್ರದಲ್ಲೇ ತಂಡದ ನಾಯಕತ್ವ ತೊರೆಯುವ ಮುನ್ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ನಡೆಯುತ್ತಿದ್ದ ಸಮಯದಲ್ಲಿ, ಟೆಸ್ಟ್‌ ತಂಡದಲ್ಲಿ ರೋಹಿತ್ ಅವರ ಭವಿಷ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ತೀವ್ರಗೊಂಡಿದ್ದವು. ವಿಶೇಷವಾಗಿ ಅವರು ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡಿದ್ದಾರೆ ಎಂಬುದು ಕಾಣಿಸುತ್ತಿತ್ತು. ಪರಿಣಾಮ, ಸರಣಿಯ ಅಂತಿಮ ಪಂದ್ಯದಿಂದ ರೋಹಿತ್ ಹೊರಗುಳಿಯಲು ನಿರ್ಧರಿಸಿದರು. ಆದರೂ, ಭಾರತ ತಂಡ ಆ ಪಂದ್ಯವನ್ನೂ ಸೋತಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬಿಸಿಸಿಐ ಜೊತೆಗಿನ ಸಭೆಯಲ್ಲಿ, ಅಗರ್ಕರ್ ಮತ್ತು ಗಂಭೀರ್ ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ರೋಹಿತ್ ಅವರು ಇನ್ನೂ ಕೆಲವು ತಿಂಗಳು ತಂಡದ ನಾಯಕನಾಗಿ ಮುಂದುವರೆಯುವ ಇಚ್ಛೆ ಹೊಂದಿದ್ದಾರೆ. ಜೊತೆಗೆ, ಹೊಸ ನಾಯಕನ ಆಯ್ಕೆಗಾಗಿ ಪ್ರಕ್ರಿಯೆಗಳನ್ನು ಮುಂದುವೆಸುವಂತೆ ರೋಹಿತ್ ಬಿಸಿಸಿಐಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಭಾರತದ ನಾಯಕನಾಗಿ ತಂಡವನ್ನು ಮುನ್ನಡೆಸಲು ಬಯಸಿದ್ದಾರೆ. ಆ ಬಳಿಕ, ಅವರು ನಾಯಕತ್ವ ತೊರೆಯುವ ಸಾಧ್ಯತೆ ಇದೆ.

ಈ ವರದಿ ಓದಿದ್ದೀರಾ?: ‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?

ವರದಿಗಳ ಪ್ರಕಾರ, ರೋಹಿತ್ ನಂತರದ ನಾಯಕತ್ವಕ್ಕೆ ಬುಮ್ರಾ ವರ ಹೆಸರನ್ನು ಪ್ರಸ್ತಾಪಿಸಲಾಗಿದೆ. ಆದರೆ, ಅವರ ವಿಚಾರದಲ್ಲಿ ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಅವರು ಟೆಸ್ಟ್‌ ಸರಣಿಗಳಲ್ಲಿ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದು ಹಲವರಲ್ಲಿ ಪ್ರಶ್ನೆಯಾಗಿ ಉಳಿದಿದೆ.

ಬುಮ್ರಾ ಕೂಡ ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ತಂಡದ ಭಾಗವಾಗಿದ್ದರು. ಎಲ್ಲ 5 ಪಂದ್ಯಗಳ ಪೈಕಿ, 2 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದಾಗ್ಯೂ, ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್‌ನಲ್ಲಿ ಅವರಿಗೂ ಬೆನ್ನುನೋವು ಎದುರಾಗಿತ್ತು. ಹೀಗಾಗಿ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಬೌಲಿಂಗ್ ಕೂಡ ಮಾಡಲಿಲ್ಲ.

ಭಾರತದ ಉತ್ತಮ ವೇಗಿ ಬೌಲರ್‌ ಈ ರೀತಿಯ ಫಿಟ್‌ನೆಸ್ ಸಮಸ್ಯೆಗಳನ್ನು ಎದುರಿಸುತ್ತಿರುವುದು ದೀರ್ಘಾವಧಿಯ ನಾಯಕನಾಗಿ ತಂಡವನ್ನು ಮುನ್ನಡೆಸಲು ಸಾಧ್ಯವೇ ಎಂಬ ಬಗ್ಗೆ ಬಿಸಿಸಿಐ ಉನ್ನತ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...