ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ. ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡುವುದನ್ನು ಮುಂದುವರಿಸಲಿದ್ದೇನೆ” ಎಂದು ತಿಳಿಸಿದ್ದಾರೆ.
ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.
#RohitSharma has announced his retirement from Test cricket! 🥺
— Star Sports (@StarSportsIndia) May 7, 2025
End of an era! See you in the ODIs, Rohit 🙌 pic.twitter.com/rpuQsz1IeV
ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.
