ರೋಹಿತ್ ಶರ್ಮಾ ಇತಿಹಾಸ ನಿರ್ಮಾಣ; 38ರ ವಯಸ್ಸಿನ ವಿಶ್ವದ ನಂ.1 ಬ್ಯಾಟ್ಸ್‌ಮನ್

Date:

ಭಾರತದ ಸ್ಟಾರ್ ಕ್ರಿಕೆಟಿಗ, ಮಾಜಿ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಮ್ಮ ಬ್ಯಾಟ್‌ನಿಂದ ಇತಿಹಾಸ ನಿರ್ಮಿಸಿದ್ದಾರೆ. ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ ಶತಕ ಬಾರಿಸಿದ ಬಳಿಕ, ರೋಹಿತ್ ವಿಶ್ವದ ನಂ.1 ಏಕದಿನ ಬ್ಯಾಟ್ಸ್‌ಮನ್ ಆಗಿದ್ದಾರೆ. 38 ವರ್ಷ 182 ದಿನ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಅವರು, ಹಿರಿಯ ವಯಸ್ಸಿನ ನಂ.1 ODI ಬ್ಯಾಟ್ಸ್‌ಮನ್ ಎಂಬ ಹೊಸ ದಾಖಲೆಯನ್ನೂ ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

- Advertisement -

ರೋಹಿತ್ ಈ ಮೂಲಕ ಯುವ ನಾಯಕ ಶುಭಮನ್‌ ಗಿಲ್ ಅವರನ್ನು ಹಿಂದಿಕ್ಕಿದ್ದಾರೆ. ಸಿಡ್ನಿ ಪಂದ್ಯದಲ್ಲಿ 121 ಅಜೇಯ ರನ್ ಬಾರಿಸಿ ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟರು. ಮೂರು ಪಂದ್ಯಗಳ ಸರಣಿಯಲ್ಲಿ ಅವರು ಒಟ್ಟು 202 ರನ್‌ಗಳನ್ನು 101 ಸರಾಸರಿಯಲ್ಲಿ ಗಳಿಸಿ “ಪಂದ್ಯ ಹಾಗೂ ಸರಣಿ ಶ್ರೇಷ್ಠ” ಪ್ರಶಸ್ತಿಯನ್ನೂ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಇತ್ತೀಚಿನ ICC ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ 781 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅವರ ಹಿಂದೆ ಅಫ್ಘಾನಿಸ್ತಾನದ ಇಬ್ರಾಹಿಂ ಜಾದ್ರಾನ್ (764) ಮತ್ತು ಶುಭಮನ್‌ ಗಿಲ್ (745) ಇದ್ದಾರೆ. ವಿರಾಟ್ ಕೊಹ್ಲಿ 725 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ಇದನ್ನು ಓದಿದ್ದೀರಾ? IND vs AUS | ಟಾಸ್‌ ಗೆದ್ದ ಆಸೀಸ್: ಆಸ್ಟ್ರೇಲಿಯಾದಲ್ಲಿ ಕೊಹ್ಲಿ–ರೋಹಿತ್‌ಗೆ ಕೊನೆಯ ಪಂದ್ಯ?

ಈ ಸಾಧನೆಯಿಂದ ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್, ಎಂ.ಎಸ್. ಧೋನಿ, ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್‌ ಅವರ ನಂತರ ನಂ.1 ಸ್ಥಾನಕ್ಕೇರಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದಾರೆ.

ಮುಂಬೈ ಜನ್ಮದ ಈ ಹಿಟ್‌ಮ್ಯಾನ್ ಕಳೆದ ದಶಕದಿಂದಲೂ ನಿರಂತರವಾಗಿ ಶ್ರೇಯಾಂಕ ಪಟ್ಟಿಯ ಟಾಪ್‌ 10ರಲ್ಲಿ ಇದ್ದರೂ, ಇದೀಗ ಮೊದಲ ಬಾರಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅವರ ಅನುಭವ ಮತ್ತು ನಿರಂತರ ಪ್ರದರ್ಶನದಿಂದ ಅವರು ಇನ್ನೂ ವಿಶ್ವದ ಅತ್ಯುತ್ತಮ ಆರಂಭಿಕರಲ್ಲಿ ಒಬ್ಬರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

image 66 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...