ಐಪಿಎಲ್‌ 2023 | ಶೂನ್ಯ ಸುತ್ತಿ ದಾಖಲೆ ಬರೆದ ರೋಹಿತ್‌ ಶರ್ಮಾ!

Date:

  • ಅತಿ ಹೆಚ್ಚು ಬಾರಿ ಶೂನ್ಯ ರನ್‌ಗೆ ವಿಕೆಟ್‌ ಒಪ್ಪಿಸಿದ ರೋಹಿತ್‌
  • ಕ್ರಮಾಂಕ ಬದಲಿಸಿದರೂ ಬದಲಾಗದ ರೋಹಿತ್ ಶರ್ಮಾ ಲಕ್!‌

ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ಐಪಿಎಲ್‌ನಲ್ಲಿ ಅನಗತ್ಯ ದಾಖಲೆ ಬರೆದಿದ್ದಾರೆ. ಐಪಿಎಎಲ್‌ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ (16) ಶೂನ್ಯ ರನ್ನಿಗೆ ವಿಕೆಟ್‌ ಒಪ್ಪಿಸಿದ ಬ್ಯಾಟರ್‌ ಎಂಬ ಕೆಟ್ಟ ದಾಖಲೆ ರೋಹಿತ್‌ ಶರ್ಮಾ ಪಾಲಾಗಿದೆ.

- Advertisement -

ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬಂದ ರೋಹಿತ್‌, ತಾನೆದುರಿಸಿದ ಮೂರನೇ ಎಸೆತವನ್ನು ಸ್ಕೂಪ್‌ ಮಾಡುವ ಯತ್ನದಲ್ಲಿ, ಚಾಹರ್‌ ಬೌಲಿಂಗ್‌ನಲ್ಲಿ ಜಡೇಜಾಗೆ ಕ್ಯಾಚಿತ್ತು ನಿರ್ಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆ ಮೂಲಕ ಐಪಿಎಲ್‌ನಲ್ಲಿ 16ನೇ ಬಾರಿಗೆ ಖಾತೆ ತೆರೆಯುವ ಮುನ್ನವೇ ವಿಕೆಟ್‌ ಒಪ್ಪಿಸಿದ ಮೊದಲ ಬ್ಯಾಟರ್‌ ಎಂಬ ʻದಾಖಲೆʼ ಬರೆದರು.

ವಿಶೇಷವೆಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲೂ ಅತಿಹೆಚ್ಚು ಬಾರಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್‌ ಶರ್ಮಾ ಹೆಸರಿನಲ್ಲಿದೆ.

ಕ್ರಮಾಂಕ ಬದಲಿಸಿದರೂ ಬದಲಾಗದ ಲಕ್!‌

ಬುಧವಾರ ನಡೆದ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲೂ ರೋಹಿತ್‌ ಶರ್ಮಾ ಮೂರು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ದರು.

ಈ ಹಿನ್ನೆಲೆಯಲ್ಲಿ ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರೋಹಿತ್‌, ಆರಂಭಿಕನ ಬದಲು ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದಿದ್ದರು. ಆದರೂ ಸಹ ರೋಹಿತ್‌ ಲಕ್‌ ಬದಲಾಗಲಿಲ್ಲ. ಮತ್ತೆ ಶೂನ್ಯ ಸುತ್ತಿದರು.  

ಐಪಿಎಲ್‌ನಲ್ಲಿ 5 ವರ್ಷ, 62 ಇನ್ನಿಂಗ್ಸ್‌ಗಳ ಬಳಿಕ ರೋಹಿತ್‌ ಶರ್ಮಾ ಇದೇ ಮೊದಲ ಬಾರಿಗೆ  ಶನಿವಾರ ತಮ್ಮ ಬ್ಯಾಟಿಂಗ್‌ ಕ್ರಮಾಂಕ ಬದಲಾಯಿಸಿದ್ದರು.

ನಾಯಕನಾಗಿ ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಶೂನ್ಯಕ್ಕೆ ನಿರ್ಗಮಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್‌ ಶರ್ಮಾ ಮೊದಲ (11) ಮತ್ತು ಗೌತಮ್‌ ಗಂಭೀರ್‌ (10) ದ್ವಿತೀಯ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಲಿಯೋನೆಲ್‌ ಮೆಸ್ಸಿಯನ್ನು ಅಮಾನತುಗೊಳಿಸಿದ ಪಿಎಸ್‌ಜಿ!

ಐಪಿಎಲ್‌ನಲ್ಲಿ ಅತಿಹೆಚ್ಚು ಶೂನ್ಯ ಸುತ್ತಿದ ಬ್ಯಾಟರ್‌ಗಳ ಪಟ್ಟಿ

  • ರೋಹಿತ್ ಶರ್ಮಾ – 16
  • ದಿನೇಶ್ ಕಾರ್ತಿಕ್ – 15
  • ಮನದೀಪ್ ಸಿಂಗ್ – 15
  • ಸುನಿಲ್ ನರೈನ್ – 15
  • ಅಂಬಟಿ ರಾಯುಡು – 14
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...