ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

Date:

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ ಮೂವರು ಆಟಗಾರರ ಎ+ ಗುತ್ತಿಗೆಯನ್ನು ಅಂತಿಮಗೊಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

- Advertisement -

ಬಿಸಿಸಿಐನಿಂದ ಎ+ ಶ್ರೇಣಿ ಗುತ್ತಿಗೆಯ ಮಾನದಂಡ ಪಡೆಯಬೇಕಾದರೆ ಏಕದಿನ, ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್‌ಗಳಲ್ಲಿ ಅತ್ಯುತ್ತಮವಾಗಿ ಆಟವಾಡುತ್ತಿರಬೇಕು. ಆದರೆ ಈ ಮೂವರು ಆಟಗಾರರು ಟಿ20ಯಿಂದ ಕಳೆದ ವರ್ಷ ನಿವೃತ್ತರಾಗಿದ್ದಾರೆ. ಸಾಮಾನ್ಯವಾಗಿ ಬಿಸಿಸಿಐನ ಕೇಂದ್ರೀಯ ಗುತ್ತಿಗೆಯನ್ನು ಐಪಿಎಲ್‌ಗೂ ಮುನ್ನ ಪ್ರಕಟಿಸಲಾಗುತ್ತದೆ. ಆದರೆ ಮೂಲಗಳ ಪ್ರಕಾರ ಬಿಸಿಸಿಐ ಚಾಂಪಿಯನ್ಸ್‌ ಟ್ರೋಫಿ ಅಂತ್ಯಗೊಂಡ ನಂತರ ನಿರ್ಧರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆದಾಗ್ಯೂ, ಚಾಂಪಿಯನ್ಸ್‌ ಟ್ರೋಫಿಯಲ್ಲಿ ಈ ಮೂವರು ಉತ್ತಮ ಪ್ರದರ್ಶನದಿಂದ ಈ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮುಂದುವರಿಸಬಹುದು ಎಂದು ಹೇಳಲಾಗುತ್ತಿದೆ. ಸದ್ಯದ ಪ್ರಕಾರ ಮೂರು ಶ್ರೇಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾಗೆ ಯಾವುದೇ ಸಮಸ್ಯೆಯಿಲ್ಲದೆ ಎ+ ಶ್ರೇಣಿ ಮುಂದುವರಿಸಲಾಗುವ ಸಾಧ್ಯತೆ ಹೆಚ್ಚಾಗಿದೆ.
ಇನ್ನೊಂದು ವರದಿಗಳ ಪ್ರಕಾರ, ಶಿಸ್ತಿನ ಕಾರಣದಿಂದ ಕಳೆದ ವರ್ಷ ಗುತ್ತಿಗೆಯಿಂದ ರದ್ದುಗೊಂಡಿದ್ದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್‌ ಅಯ್ಯರ್‌ ಅವರನ್ನು ಈ ಬಾರಿ ಗುತ್ತಿಗೆಗೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಚಾಂಪಿಯನ್ಸ್‌ ಟ್ರೊಫಿ ಮಾತ್ರವಲ್ಲದೆ ದೇಶೀಯ ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿರುವುದರಿಂದ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

“ಚಾಂಪಿಯನ್ಸ್‌ ಟ್ರೋಫಿಯ ನಂತರ ರೋಹಿತ್‌ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿರುವುದರಿಂದ ಬಿಸಿಸಿಐ ಅಲ್ಲಿಯವರೆಗೂ ಕಾಯುತ್ತಿದೆ. ಒಂದು ವೇಳೆ ನಿವೃತ್ತಿ ಪ್ರಕಟಿಸಿದರೆ, ನಂತರ ಮಂಡಳಿ ಏನು ಮಾಡಬೇಕೆಂದು ಯೋಚಿಸಲಿದೆ. ಟಿ20 ವಿಶ್ವಕಪ್‌ ಗೆಲ್ಲಿಸುವುದರ ಜೊತೆ ಚಾಂಪಿಯನ್ಸ್‌ ಟ್ರೋಫಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಆತನ ಸಾಮರ್ಥ್ಯವನ್ನು ಕಡೆಗಣಿಸುವಂತಿಲ್ಲ” ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾದ ಸ್ಟಾರ್‌ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಆರ್‌ಸಿಬಿಯನ್ನು ಪ್ರತಿನಿಧಿಸಿರುವ ಎಬಿಡಿ ವಿಲಿಯರ್ಸ್ ಅವರು ವಿರಾಟ್‌ ಕೊಹ್ಲಿಯ ಸ್ಟ್ರೈಕ್‌ ರೇಟ್‌ ಕಡಿಮೆಯಾಗಿದೆ ಎಂಬುದು ಹಾಸ್ಯಾಸ್ಪದ ಎನ್ನುತ್ತಾರೆ.

ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, “ಇತ್ತೀಚಿನ ದಿನಗಳಲ್ಲಿ ವಿರಾಟ್‌ ಸ್ಟ್ರೈಕ್‌ ರೇಟ್‌ ಕಡಿಮೆಯಾಗಿದೆ ಎಂದು ಟೀಕೆಮಾಡುವುದು ಹಾಸ್ಯಾಸ್ಪದ. ತಂಡಕ್ಕೆ ಏನು ಬೇಕೊ ಅದನ್ನು ಕೊಹ್ಲಿ ನೀಡುತ್ತಾ ಬಂದಿದ್ದಾರೆ. ಎಲ್ಲವೂ ಪರಿಸ್ಥಿತಿಯ ಆಧಾರದ ಮೇಲೆ ನಿರ್ದಾರವಾಗುತ್ತದೆ. ಮತ್ತೊಂದು ತುದಿಯಲ್ಲಿ ಜೊತೆಗಾರ ಆಟಗಾರನಿದ್ದರೆ ಆತನನ್ನು ನಂಬುವ ಜೊತೆಗೆ ಪ್ರಯೋಗಾತ್ಮಕ ಆಟದ ಜೊತೆ ಸ್ವತಂತ್ರವಾಗಿ ಆಟವಾಡುತ್ತಾರೆ. ಜೊತೆಗಾರನ ಆಟವು ನಿಧಾನವಾದಾಗ ಇನಿಂಗ್ಸ್‌ಗೆ ಬೇಕಾದ ಆಟವನ್ನು ಸಹಜವಾಗಿಯೆ ವಿರಾಟ್‌ ಮುಂದುವರಿಸುತ್ತಾರೆ” ಎಂದು ಪ್ರಶಂಸಿಸಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...