ರೋಹಿತ್ ಶರ್ಮಾ ಏಕದಿನ, ಟೆಸ್ಟ್ ನಾಯಕತ್ವ ಕೊನೆ ಯಾವಾಗ?: ಜಯ್ ಶಾ ಮಾಹಿತಿ

Date:

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಇಂದು ರೋಹಿತ್‌ ಶರ್ಮಾ ಅವರ ಏಕದಿನ, ಟೆಸ್ಟ್‌ ನಾಯಕತ್ವದ ಭವಿಷ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

- Advertisement -

ಈ ಬಗ್ಗೆ ಬಿಸಿಸಿಐ ವೆಬ್‌ಸೈಟ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಜಯ್‌ ಶಾ, ರೋಹಿತ್ ಶರ್ಮಾ ನಾಯಕರಾಗಿ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಚಾಂಪಿಯನ್ಸ್‌ ಟ್ರೋಫಿಯ ತನಕ ಮುಂದುವರಿಯಲಿದ್ದಾರೆ. ಭಾರತವು ಮುಂದಿನ ವರ್ಷ ಎರಡು ಐಸಿಸಿ ಟೂರ್ನಮೆಂಟ್‌ಗಳನ್ನು ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

2024ರ ಟಿ20 ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿದ ಟೀಂ ಇಂಡಿಯಾವನ್ನು ಶ್ಲಾಘಿಸಿದ ಜಯ್‌ ಶಾ ಇನ್ನು ಒಂದು ವರ್ಷ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

“ಕಳೆದ ವರ್ಷ ನವೆಂಬರ್‌ 23ರಂದು 10 ಪಂದ್ಯಗಳನ್ನು ಗೆದ್ದ ನಂತರ ನಾವು ಹೃದಯಗಳನ್ನು ಗೆದ್ದೆವು ಆದರೆ ಏಕದಿನ ವಿಶ್ವಕಪ್‌ ಜಯಿಸಲು ಸಾಧ್ಯವಾಗಲಿಲ್ಲ. ಜೂನ್‌ 29ರಂದು ನಾವು ಹೃದಯಗಳನ್ನು, ಟ್ರೋಫಿಯನ್ನು ಗೆದ್ದಿದ್ದೇವೆ. ಬಾರ್ಬೊಡೊಸ್‌ನಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿದ್ದೇವೆ. ನಮ್ಮ ನಾಯಕ ಅಲ್ಲಿ ಭಾರತದ ಧ್ವಜವನ್ನು ನೆಟ್ಟಿದ್ದಾರೆ” ಎಂದು ಜಯ್‌ ಶಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಸಿಸಿ ಟಿ20 ರ‍್ಯಾಂಕಿಂಗ್: ಆಲ್‌ರೌಂಡರ್‌ಗಳಲ್ಲಿ ಮೊದಲ ಸ್ಥಾನಕ್ಕೇರಿದ ಹಾರ್ದಿಕ್ ಪಾಂಡ್ಯ

“ ಗೆಲುವಿನ ನಂತರ ಮುಂದಿನ ಐಸಿಸಿ ಟೂರ್ನಿಗಳಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಷ್ ಹಾಗೂ ಚಾಂಪಿಯನ್‌ಶಿಪ್ ಟ್ರೋಫಿಗಳನ್ನು ಜಯಿಸುವ ವಿಶ್ವಾಸದಲ್ಲಿ ನಮ್ಮ ತಂಡವಿದೆ. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ನಾವು ಚಾಂಪಿಯನ್‌ಗಳಾಗುತ್ತೇವೆ” ಎಂದು ತಿಳಿಸಿದ್ದಾರೆ.

ಈಗಾಗಲೇ ಟಿ20 ವಿಶ್ವಕಪ್ ಮಾದರಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ಈ ಮೂವರು ಹಿರಿಯ ಆಟಗಾರರು ಚಾಂಪಿಯನ್ಸ್‌ ಟ್ರೋಫಿಯ ತನಕ ಇರಲಿದ್ದಾರೆ ಎಂದು ಜಯ್‌ ಶಾ ಮಾಹಿತಿ ನೀಡಿದ್ದಾರೆ.

ಭಾರತದ ವಿಶ್ವಕಪ್‌ ವಿಜೇತ ಆಟಗಾರರು ಮುಂಬರುವ ಶ್ರೀಲಂಕಾ ವಿರುದ್ಧದ ಪ್ರವಾಸಕ್ಕೆ ಪುನಃ ಮರಳಲಿದ್ದು, ಜುಲೈ ಅಂತ್ಯದ ವೇಳೆಗೆ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಹಿರಿಯ ಆಟಗಾರರೆಲ್ಲಲೂ ಮುಂದಿನ 12 ತಿಂಗಳುಗಳ ಕಾಲ ಟೆಸ್ಟ್‌ ಹಾಗೂ ಏಕದಿನ ಪಂದ್ಯಗಳ ಮೇಲೆ ಹೆಚ್ಚು ಗಮನ ನೀಡಲಿದ್ದಾರೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಪಟ್ಟಿಯಲ್ಲಿ ಭಾರತವು ಪ್ರಸ್ತುತ 9ರಲ್ಲಿ 6 ಗೆದ್ದು ಮೊದಲ ಸ್ಥಾನದಲ್ಲಿದೆ. ಈ ವರ್ಷ ಸ್ವದೇಶದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್‌ ವಿರುದ್ದ ಟೆಸ್ಟ್, ಆಸ್ಟ್ರೇಲಿಯಾದಲ್ಲಿ ಆಸೀಸ್ ವಿರುದ್ಧ 5 ಟೆಸ್ಟ್ ಆಡಲಿದೆ. 2025ರ ಫೆಬ್ರವರಿ-ಮಾರ್ಚ್‌ನಲ್ಲಿ ಏಕದಿನ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...