ಐಪಿಎಲ್ | ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ: ಚೆನ್ನೈಗೆ ಬೃಹತ್ ಗುರಿ ನೀಡಿದ ಆರ್‌ಸಿಬಿ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್‌ನ ಇಂದಿನ ಪಂದ್ಯದಲ್ಲಿ ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ ಹಾಗೂ ಕೊಹ್ಲಿ, ಬೆತೆಲ್ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ 214 ರನ್‌ಗಳ ಬೃಹತ್‌ ಗುರಿ ನೀಡಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿಗೆ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಬೆಥೆಲ್ ಅವರು ಉತ್ತಮ ಆರಂಭವನ್ನೇ ಒದಗಿಸಿದರು. ಈ ಜೋಡಿಯು ಮೊದಲ ವಿಕೆಟ್‌ಗೆ 97 ರನ್ ಕಲೆ ಹಾಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಥೆಲ್ ಔಟಾಗುವುದಕ್ಕೂ ಮುನ್ನ 33 ಎಸೆತಗಳಲ್ಲಿ 8 ಆಕರ್ಷಕ ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್‌ನ ನೆರವಿನಿಂದ 55 ರನ್ ಗಳಿಸಿದರು. ಆ ಬಳಿಕ ವಿರಾಟ್ ಕೊಹ್ಲಿ ಭರ್ಜರಿ 5 ಸಿಕ್ಸ್ ಹಾಗೂ 5 ಬೌಂಡರಿಯ ನೆರವಿನಿಂದ 33 ಎಸೆತಗಳಲ್ಲಿ 66 ರನ್ ಗಳಿಸಿದರು.

ಆದರೆ, ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ರಜತ್ ಪಾಟೀದಾರ್(11 ರನ್), ದೇವದತ್ ಪಡಿಕ್ಕಲ್(17 ರನ್) ಹಾಗೂ ಜಿತೇಶ್ ಶರ್ಮಾ (7 ರನ್) ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಒಂದು ಹಂತದಲ್ಲಿ 200+ ರನ್ ಗುರಿ ನೀಡುವುದು ಅಸಾಧ್ಯ ಎಂಬ ವಾತಾವರಣ ನಿರ್ಮಾಣವಾಯಿತು. ಆದರೆ, ಕೊನೆಯ ಘಳಿಗೆಯಲ್ಲಿ ಕ್ರೀಸ್‌ಗೆ ಬಂದ ವೆಸ್ಟಿಂಡೀಸ್‌ನ ದೈತ್ಯ ಆಟಗಾರ ರೊಮಾರಿಯೋ ಶೆಫರ್ಡ್ ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದರು.

ಕೇವಲ 14 ಎಸೆತಗಳನ್ನು ಎದುರಿಸಿದ ರೊಮಾರಿಯೋ ಶೆಫರ್ಡ್, 6 ಭರ್ಜರಿ ಸಿಕ್ಸರ್ ಹಾಗೂ ನಾಲ್ಕು ಬೌಂಡರಿಯ ನೆರವಿನಿಂದ 53 ರನ್ ಚಚ್ಚುವ ಮೂಲಕ ಐಪಿಎಲ್ ಪಂದ್ಯದಲ್ಲಿ ಅತಿವೇಗದ ಎರಡನೇ ಅರ್ಧಶತಕ ಬಾರಿಸಿ, ಇತಿಹಾಸದ ಪುಟದಲ್ಲಿ ತಮ್ಮ ಹೆಸರನ್ನು ಸೇರಿಸಿಕೊಂಡರು.

ರೊಮಾರಿಯೋ ಶೆಫರ್ಡ್ ಅವರ ಈ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲುವಿಗೆ 214 ರನ್‌ಗಳ ಗುರಿಯನ್ನು ನೀಡಿತು.

ಚೆನ್ನೈ ಪರವಾಗಿ 19ನೇ ಓವರ್ ಎಸೆದ ಖಲೀಲ್ ಅವರ ಓವರ್‌ನಲ್ಲಿ 33 ರನ್ ಚಚ್ಚಲಾಯಿತು. ಖಲೀಲ್ ಅವರು 3 ಓವರ್‌ನಲ್ಲಿ 65 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದರು.

ಚೆನ್ನೈ ಪರವಾಗಿ ಬೌಲಿಂಗ್‌ನಲ್ಲಿ ಪತಿರಾಣಾ ಮೂರು ವಿಕೆಟ್ ಪಡೆದರೆ, ಸ್ಯಾಮ್ ಕರನ್ ಹಾಗೂ ನೂರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...