ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.
ಈ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 17 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಫ್ ಪ್ರವೇಶಿಸುವ ಆಸೆ ಕೊಂಚ ದೂರ ಸರಿದಿದೆ. ಒಂದು ವಾರಗಳ ಬಳಿಕ ಐಪಿಎಲ್ ಮತ್ತೆ ಆರಂಭವಾಗಿದೆ.
ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 8 ಜಯ, 3 ಸೋಲು ಕಂಡಿದ್ದು, 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಅಂಕವನ್ನು ಹಂಚಿಕೊಳ್ಳುವ ಮೂಲಕ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವ ಕನಸು ಇನ್ನು ಹತ್ತಿರವಾಗಿದೆ. ಆರ್‌ಸಿಬಿ ಇನ್ನು 2 ಪಂದ್ಯಗಳನ್ನು ಆಡಲಿದ್ದು, ಈ 2 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದರೂ ಪ್ಲೇ ಆಫ್ ಪ್ರವೇಶಿಸುವ ಆಸೆ ಫಲಿಸುತ್ತದೆ.
ಈ ಸುದ್ದಿ ಓದಿದ್ದೀರಾ? ಸ್ಲಿಪ್ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್ ನೀಡಿದ ಅಂಪೈರ್; ಏನಿದು ಹೊಸ ನಿಯಮ?
ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ಇತ್ತೀಚಿಗೆ ಟೆಸ್ಟ್ ಪಂದ್ಯಗಳಿಗೆ ವಿದಾಯ ಹೇಳಿದ್ದರು. ವಿರಾಟ್ ವಿದಾಯದಿಂದ ಅಭಿಮಾನಿಗಳು ಬೇಸರವಾಗಿದ್ದಾರೆ. ಇನ್ನು ಇವರಿಗೆ ವಿಶೇಷ ಗೌರವ ಸೂಚಿಸಲು ಅಭಿಮಾನಿಗಳು ಆರ್‌ಸಿಬಿ ಹಾಗೂ ಕೆಕೆಆರ್ ನಡುವಣ ಪಂದ್ಯದ ವೇಳೆ ಬಿಳಿ ಬಣ್ಣದ ಜೆರ್ಸಿ ಹಾಕಿಕೊಂಡು ಮೈದಾನಕ್ಕೆ ಬಂದಿದ್ದರು. ಈ ಮೂಲಕ ಆರ್‌ಸಿಬಿ ಅಭಿಮಾನಿಗಳು ವಿಶೇಷ ಗೌರವ ನೀಡಿದರು.
ಹಾಲಿ ಚಾಂಪಿಯನ್ ಕೆಕೆಆರ್ ತಂಡದ ಪ್ಲೇ ಆಫ್ ಪ್ರವೇಶಿಸುವ ಆಸೆ ಕಷ್ಟವಾಗಿದೆ. ಕೆಕೆಆರ್ ಆಡಿದ 13 ಪಂದ್ಯಗಳಲ್ಲಿ 5 ಜಯ, 6 ಸೋಲು ಕಂಡಿದೆ. ಅಲ್ಲದೆ 2 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಕೆಕೆಆರ್ ಮುಂದಿನ ಒಂದು ಪಂದ್ಯವನ್ನು ಗೆದ್ದರೆ 14 ಅಂಕಗಳನ್ನು ಕಲೆ ಹಾಕಬಹುದು. ಈ ಮೂಲಕ ಕೆಕೆಆರ್ ಬೇರೆ ತಂಡಗಳ ಫಲಿತಾಂಶವನ್ನು ಕಾದು ನೋಡಬೇಕಿದೆ.
ಕೆಕೆಆರ್ ಪ್ಲೇ ಆಫ್ ಪ್ರವೇಶಿಸುವುದು ಕೊಂಚ ಕಷ್ಟವಾಗಿದೆ. ಮೇಲಿರುವ ಮುಂಬೈ, ಡೆಲ್ಲಿ ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು, ರನ್ ರೇಟ್‌ನಲ್ಲಿ ಹಿಂದಿರಬೇಕಾಗುತ್ತದೆ. ಅಂದಾಗ ಮಾತ್ರ ಕೆಕೆಆರ್ ಮುಂದಿನ ಹಂತ ಪ್ರವೇಶಿಸುವ ಆಸೆ ಫಲಿಸುತ್ತದೆ.