ಐಪಿಎಲ್ 2025 | ಮಳೆಯಿಂದ ಆರ್‌ಸಿಬಿ – ಕೆಕೆಆರ್‌ ಪಂದ್ಯ ರದ್ದು

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್‌ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.

- Advertisement -

ಈ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 17 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕೊಂಚ ದೂರ ಸರಿದಿದೆ. ಒಂದು ವಾರಗಳ ಬಳಿಕ ಐಪಿಎಲ್‌ ಮತ್ತೆ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 8 ಜಯ, 3 ಸೋಲು ಕಂಡಿದ್ದು, 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಅಂಕವನ್ನು ಹಂಚಿಕೊಳ್ಳುವ ಮೂಲಕ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸುವ ಕನಸು ಇನ್ನು ಹತ್ತಿರವಾಗಿದೆ. ಆರ್‌ಸಿಬಿ ಇನ್ನು 2 ಪಂದ್ಯಗಳನ್ನು ಆಡಲಿದ್ದು, ಈ 2 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದರೂ ಪ್ಲೇ ಆಫ್‌ ಪ್ರವೇಶಿಸುವ ಆಸೆ ಫಲಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್‌ ವಿರಾಟ್‌ ಕೊಹ್ಲಿ ಇತ್ತೀಚಿಗೆ ಟೆಸ್ಟ್‌ ಪಂದ್ಯಗಳಿಗೆ ವಿದಾಯ ಹೇಳಿದ್ದರು. ವಿರಾಟ್‌ ವಿದಾಯದಿಂದ ಅಭಿಮಾನಿಗಳು ಬೇಸರವಾಗಿದ್ದಾರೆ. ಇನ್ನು ಇವರಿಗೆ ವಿಶೇಷ ಗೌರವ ಸೂಚಿಸಲು ಅಭಿಮಾನಿಗಳು ಆರ್‌ಸಿಬಿ ಹಾಗೂ ಕೆಕೆಆರ್‌ ನಡುವಣ ಪಂದ್ಯದ ವೇಳೆ ಬಿಳಿ ಬಣ್ಣದ ಜೆರ್ಸಿ ಹಾಕಿಕೊಂಡು ಮೈದಾನಕ್ಕೆ ಬಂದಿದ್ದರು. ಈ ಮೂಲಕ ಆರ್‌ಸಿಬಿ ಅಭಿಮಾನಿಗಳು ವಿಶೇಷ ಗೌರವ ನೀಡಿದರು.

ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡದ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕಷ್ಟವಾಗಿದೆ. ಕೆಕೆಆರ್‌ ಆಡಿದ 13 ಪಂದ್ಯಗಳಲ್ಲಿ 5 ಜಯ, 6 ಸೋಲು ಕಂಡಿದೆ. ಅಲ್ಲದೆ 2 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಕೆಕೆಆರ್‌ ಮುಂದಿನ ಒಂದು ಪಂದ್ಯವನ್ನು ಗೆದ್ದರೆ 14 ಅಂಕಗಳನ್ನು ಕಲೆ ಹಾಕಬಹುದು. ಈ ಮೂಲಕ ಕೆಕೆಆರ್‌ ಬೇರೆ ತಂಡಗಳ ಫಲಿತಾಂಶವನ್ನು ಕಾದು ನೋಡಬೇಕಿದೆ.

ಕೆಕೆಆರ್‌ ಪ್ಲೇ ಆಫ್‌ ಪ್ರವೇಶಿಸುವುದು ಕೊಂಚ ಕಷ್ಟವಾಗಿದೆ. ಮೇಲಿರುವ ಮುಂಬೈ, ಡೆಲ್ಲಿ ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು, ರನ್‌ ರೇಟ್‌ನಲ್ಲಿ ಹಿಂದಿರಬೇಕಾಗುತ್ತದೆ. ಅಂದಾಗ ಮಾತ್ರ ಕೆಕೆಆರ್‌ ಮುಂದಿನ ಹಂತ ಪ್ರವೇಶಿಸುವ ಆಸೆ ಫಲಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...