ಐಪಿಎಲ್ 2023 |ಟಾಸ್‌ ಗೆದ್ದ ಆರ್‌ಆರ್; ಸಂಜು ಸ್ಯಾಮ್ಸನ್ ಬಳಗಕ್ಕೆ ಎರಡನೇ ಗೆಲುವಿನ ನಿರೀಕ್ಷೆ

Date:

ಐಪಿಎಲ್‌ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

- Advertisement -

ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಐಪಿಎಲ್‌ನ ಚೊಚ್ಚಲ ಪಂದ್ಯ ಆರಂಭಗೊಂಡಿದ್ದು, ಪಂದ್ಯದ ಆರಂಭಕ್ಕೂ ಮುನ್ನ ಲೇಸರ್‌ ಶೋ, ಜಾನಪದ ನೃತ್ಯದ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಸ್ಸಾಂ ಕ್ರಿಕೆಟ್‌ ಮಂಡಳಿ ಆಯೋಜಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿವೆ.

ಐಪಿಎಲ್‌ನಲ್ಲಿ ಇದುವರೆಗೂ ಪಂಜಾಬ್‌ ವಿರುದ್ಧ ಅತಿಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ರಾಯಲ್ಸ್‌ ತಂಡದ್ದಾಗಿದೆ. ಒಟ್ಟು 24 ಪಂದ್ಯಗಳಲ್ಲಿ 14 ಬಾರಿ ರಾಜಸ್ಥಾನ ಗೆಲುವಿನ ನಗೆ ಬೀರಿದೆ.

ಐಪಿಎಲ್ 2022ರ ಫೈನಲಿಸ್ಟ್ ಸಂಜು ಸಾರಥ್ಯದ ರಾಯಲ್ಸ್‌, ತನ್ನ ಆರಂಭಿಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 72 ರನ್‌ಗಳಿಂದ ಸೋಲಿಸಿತ್ತು. ಮತ್ತೊಂದೆಡೆ ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ಶಿಖರ್‌ ಧವನ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌, ಕೆಕೆಆರ್‌ ವಿರುದ್ಧ 7 ರನ್‌ಗಳ ರೋಚಕ ಗೆಲುವು ಕಂಡಿತ್ತು.

ಬ್ಯಾಟಿಂಗ್‌‌ ಮತ್ತು ಬೌಲಿಂಗ್‌ನಲ್ಲಿ ರಾಯಲ್ಸ್‌ ಬಲಿಷ್ಠ ಪಡೆಯನ್ನು ಹೊಂದಿದೆ. ಆರಂಭಿಕರಾದ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ , ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್ ಯುಜ್ವೇಂದ್ರ ಚಾಹಲ್, ಆರ್‌ ಅಶ್ವಿನ್‌ ಪಂದ್ಯವನ್ನು ಗೆಲ್ಲಿಸಿಕೊಡಬಲ್ಲ ಆಟಗಾರರಾಗಿದ್ದಾರೆ.

ಆಟವಾಡುವ ಹನ್ನೊಂದರ ಬಳಗ

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್ (ವಿಕೆಟ್‌ ಕೀಪರ್), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.

ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್‌ ಕೀಪರ್), ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಝಾ, ಸ್ಯಾಮ್ ಕರ್ರನ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಹರ್ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...