ಐಪಿಎಲ್ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಐಪಿಎಲ್‌ನ ಚೊಚ್ಚಲ ಪಂದ್ಯ ಆರಂಭಗೊಂಡಿದ್ದು, ಪಂದ್ಯದ ಆರಂಭಕ್ಕೂ ಮುನ್ನ ಲೇಸರ್ ಶೋ, ಜಾನಪದ ನೃತ್ಯದ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಸ್ಸಾಂ ಕ್ರಿಕೆಟ್ ಮಂಡಳಿ ಆಯೋಜಿಸಿತ್ತು.
ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿವೆ.
ಐಪಿಎಲ್‌ನಲ್ಲಿ ಇದುವರೆಗೂ ಪಂಜಾಬ್ ವಿರುದ್ಧ ಅತಿಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ರಾಯಲ್ಸ್ ತಂಡದ್ದಾಗಿದೆ. ಒಟ್ಟು 24 ಪಂದ್ಯಗಳಲ್ಲಿ 14 ಬಾರಿ ರಾಜಸ್ಥಾನ ಗೆಲುವಿನ ನಗೆ ಬೀರಿದೆ.
ಐಪಿಎಲ್ 2022ರ ಫೈನಲಿಸ್ಟ್ ಸಂಜು ಸಾರಥ್ಯದ ರಾಯಲ್ಸ್, ತನ್ನ ಆರಂಭಿಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 72 ರನ್‌ಗಳಿಂದ ಸೋಲಿಸಿತ್ತು. ಮತ್ತೊಂದೆಡೆ ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್, ಕೆಕೆಆರ್ ವಿರುದ್ಧ 7 ರನ್‌ಗಳ ರೋಚಕ ಗೆಲುವು ಕಂಡಿತ್ತು.
ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ರಾಯಲ್ಸ್ ಬಲಿಷ್ಠ ಪಡೆಯನ್ನು ಹೊಂದಿದೆ. ಆರಂಭಿಕರಾದ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ , ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್ ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್ ಪಂದ್ಯವನ್ನು ಗೆಲ್ಲಿಸಿಕೊಡಬಲ್ಲ ಆಟಗಾರರಾಗಿದ್ದಾರೆ.
ಆಟವಾಡುವ ಹನ್ನೊಂದರ ಬಳಗ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.
ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಝಾ, ಸ್ಯಾಮ್ ಕರ್ರನ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಹರ್ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್