IPL 2025 | ದಾಖಲೆಯ 27 ಕೋಟಿಗೆ ಹರಾಜು ಆಗಿದ್ದರೂ ಶೂನ್ಯಕ್ಕೆ ಔಟಾಗುತ್ತಿರುವ ಲಖನೌ ಆಟಗಾರ

Date:

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯ ಕಾಣುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದ್ದಾರೆ. ಇಲ್ಲಿಯವರೆಗೂ ಲಖನೌ ಪರವಾಗಿ 9 ಇನಿಂಗ್ಸ್‌ಗಳನ್ನು ಆಟವಾಡಿದ್ದು ರಿಷಭ್‌ ಪಂತ್ ಅವರಿಂದ ಒಂದೇ ಉತ್ತಮ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ. ಏಕಾನಾ ಸ್ಟೇಡಿಯಂನಲ್ಲಿ ನಡೆದ ನಿನ್ನೆ(ಏ.22) ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್ ಶೂನ್ಯಕ್ಕೆ ಔಟಾಗಿದ್ದಾರೆ.

- Advertisement -

ರಿಷಭ್ ಪಂತ್ ಐಪಿಎಲ್ 2025 ಆವೃತ್ತಿಯಲ್ಲಿ ತಮ್ಮ ಮಾಜಿ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಶೂನ್ಯಕ್ಕೆ ಔಟಾಗಿರುವುದು ಇದು ಎರಡನೇ ಬಾರಿ. ರಿಷಭ್ ಪಂತ್ ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 7 ಬಾರಿ ಬ್ಯಾಟಿಂಗ್ ಮಾಡಿದ್ದು, ಒಟ್ಟು 106 ರನ್ ಗಳಿಸಿದ್ದಾರೆ. ಸತತ ಅವಕಾಶಗಳು ಸಿಕ್ಕರೂ ಅವರು ರನ್ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ರಿಷಭ್ ಪಂತ್ ಈ ಹಿಂದೆ 8 ಆವೃತ್ತಿಗಳ ಐಪಿಎಲ್‌ನಲ್ಲಿ ಡೆಲ್ಲಿ ತಂಡದೊಂದಿಗೆ ಇದ್ದರು. ಅವರು ಡೆಲ್ಲಿ ಪರ 111 ಪಂದ್ಯಗಳಲ್ಲಿ 3284 ರನ್ ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಅವಧಿಯಲ್ಲಿ ಅವರು 1 ಶತಕ ಮತ್ತು 18 ಅರ್ಧಶತಕಗಳನ್ನು ಗಳಿಸಿದರು. ಕಳೆದ ವರ್ಷ ಐಪಿಎಲ್ ಮೆಗಾ ಹರಾಜಿಗೂ ಮುನ್ನ, ಡೆಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಪಂತ್ ನಡುವಿನ ಮಾತುಕತೆ ಯಾವುದೇ ತೀರ್ಮಾನಕ್ಕೆ ಬರದಿದ್ದಾಗ, ತಂಡವು ಅವರನ್ನು ಬಿಡುಗಡೆ ಮಾಡಿತು. ಅವರು ಮೆಗಾ ಹರಾಜಿನಲ್ಲಿ ಭಾಗವಹಿಸಿದರು. ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಲಖನೌ ಸೂಪರ್ ಜೈಂಟ್ಸ್ ಅವರನ್ನು ದಾಖಲೆಯ 27 ಕೋಟಿ ರೂ.ಗೆ ಖರೀದಿಸಿತು. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರರಾದರು. ಈಗ ನಿರಂತರವಾಗಿ ವಿಫಲರಾಗುವ ಮೂಲಕ ಅವರು ಕ್ರಿಕೆಟ್‌ ಅಭಿಮಾನಿಗಳಿಗೆ ಬೇಸರ ತರಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದೆಹಲಿ ನಾಯಕ ಅಕ್ಸರ್ ಪಟೇಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಲಖನೌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 159 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಎಲ್‌ಎಸ್‌ಜಿ ತಂಡಕ್ಕೆ ಐಡೆನ್ ಮಾರ್ಕ್ರಾಮ್ ಮತ್ತು ಮಿಚೆಲ್ ಮಾರ್ಷ್ ಉತ್ತಮ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 10 ಓವರ್‌ಗಳಲ್ಲಿ 87 ರನ್‌ಗಳ ಜೊತೆಯಾಟ ಆಡಿದರು. ಮಾರ್ಕ್ರಾಮ್ 33 ಎಸೆತಗಳಲ್ಲಿ 52 ರನ್ ಗಳಿಸಿದರೆ, ಮಾರ್ಷ್ 36 ಎಸೆತಗಳಲ್ಲಿ 45 ರನ್ ಗಳಿಸಿದರು.

ಆಯುಷ್ ಬದೋನಿ ಕೊನೆಯ ಓವರ್‌ಗಳಲ್ಲಿ 21 ಎಸೆತಗಳಲ್ಲಿ 36 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 15 ಎಸೆತಗಳಲ್ಲಿ 14 ರನ್ ಗಳಿಸಿ ಅಜೇಯರಾಗುಳಿದರು. ನಿಕೋಲಸ್ ಪೂರನ್ 9 ರನ್ ಗಳಿಸಿ ಔಟಾದರೆ, ಅಬ್ದುಲ್ ಸಮದ್ 2 ರನ್ ಗಳಿಸಿ ಪೆವಿಲಿಯನ್‌ಗೆ ತೆರಳಿದರು.

ಆಯುಷ್ ಬಡೋನಿ ಔಟಾದ ನಂತರ, ನಾಯಕ ರಿಷಭ್ ಪಂತ್ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಬ್ಯಾಟಿಂಗ್‌ಗೆ ಬಂದರು. ಮುಖೇಶ್ ಕುಮಾರ್ ಎಸೆದ ಐದನೇ ಎಸೆತದಲ್ಲಿ ಅವರಿಗೆ ಒಂದೇ ಒಂದು ರನ್ ಗಳಿಸಲು ಸಾಧ್ಯವಾಗಲಿಲ್ಲ. 20ನೇ ಓವರ್‌ನ ಕೊನೆಯ ಎಸೆತದಲ್ಲಿ ರಿವರ್ಸ್ ಸ್ವೀಪ್ ಮೂಲಕ ಸಿಕ್ಸರ್ ಬಾರಿಸಲು ಪ್ರಯತ್ನಿಸುವಾಗ ಅವರು ಕ್ಲೀನ್ ಬೌಲ್ಡ್ ಆದರು. ಇದಕ್ಕೂ ಮೊದಲು, ಮಾರ್ಚ್ 24 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್‌ನ ಮೊದಲ ಪಂದ್ಯದಲ್ಲಿ ಅವರು ಶೂನ್ಯಕ್ಕೆ ಔಟಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...