ಆರ್‌ಸಿಬಿ 2ನೇ IPL ಕಪ್ ಗೆಲ್ಲಲು 156 ರನ್ ಗುರಿ: ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ಸಾಧಾರಣ ಮೊತ್ತ

Date:

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿರುವ ಆರ್‌ಸಿಬಿ, ತನ್ನ 2ನೇ ಕಪ್ ಗೆಲ್ಲಲು 156 ರನ್‌ಗಳ ಗುರಿ ಪಡೆದಿದೆ. ಬೌಲರ್‌ಗಳ ಸಂಘಟಿತ ಹಾಗೂ ಶಿಸ್ತುಬದ್ಧ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂದ್ಯದ ಮೊದಲಾರ್ಧದಲ್ಲಿಯೇ ಬಿಗಿಯಾದ ಹಿಡಿತ ಸಾಧಿಸಿದೆ.

- Advertisement -

ಮಹತ್ವದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲು ಬೌಲಿಂಗ್ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿತು. ನಾಯಕನ ಈ ತಂತ್ರವನ್ನು ಸಂಪೂರ್ಣವಾಗಿ ಸಮರ್ಥಿಸಿಕೊಂಡ ಆರ್‌ಸಿಬಿ ಬೌಲರ್‌ಗಳು, ಆರಂಭದಿಂದಲೇ ಗುಜರಾತ್ ಟೈಟನ್ಸ್ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಿದರು. ರನ್ ಗಳಿಸಲು ಪರದಾಡಿದ ಗುಜರಾತ್, ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧರಣ ಮೊತ್ತ ಮಾತ್ರ ಗಳಿಸಿದೆ. ಈ ಹಂತದಲ್ಲಿ ಜವಾಬ್ದಾರಿಯುತ ಆಟವಾಡಿದ ವಾಷಿಂಗ್ಟನ್ ಸುಂದರ್, 37 ಎಸೆತಗಳಲ್ಲಿ 50 ರನ್ ಗಳಿಸಿ ಅಜೇಯರಾಗುಳಿಯುವ ಮೂಲಕ ತಂಡದ ಮೊತ್ತವನ್ನು ಗೌರವಾನ್ವಿತ ಸ್ಥಿತಿಗೆ ತರುವ ಪ್ರಯತ್ನ ಮಾಡಿದರು.

ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಭುವನೇಶ್ವರ್ 29/2, ಜೋಷ್ ಹೇಝಲ್‌ವುಡ್ 37/2, ರಸಿಖ್ ಸಲಾಮ್ ದಾರ್ 27/3, ಗುಜರಾತ್ ಪಡೆಯ ರನ್ ವೇಗಕ್ಕೆ ಸಂಪೂರ್ಣ ಬ್ರೇಕ್ ಹಾಕಿದರು. ಇವರ ನಿಖರ ದಾಳಿಗೆ ಗುಜರಾತ್ ತಂಡದ ಬ್ಯಾಟರ್‌ಗಳು ತಬ್ಬಿಬ್ಬಾದರು.

ಇದೀಗ ತಮ್ಮ 2ನೇ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಸುವರ್ಣಾವಕಾಶ ಆರ್‌ಸಿಬಿ ಮುಂದಿದೆ. ಕೇವಲ 156 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಲಿರುವ ಆರ್‌ಸಿಬಿ, ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರೆ ಅಭಿಮಾನಿಗಳ ಬಹುದಿನಗಳ ಕನಸು ನನಸಾಗುವುದು ನಿಶ್ಚಿತ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ...