ಪಂತ್‌ ಸತತ ವೈಫಲ್ಯಕ್ಕೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ಮಾಲೀಕ ಸಂಜೀವ್ ಗೋಯೆಂಕಾ

Date:

ದಾಖಲೆಯ ಮೊತ್ತ ಪಡೆದು ಲಖನೌ ಸೂಪರ್‌ಜೈಂಟ್ಸ್ ತಂಡ ಸೇರಿದ್ದ ನಾಯಕ ರಿಷಭ್ ಪಂತ್ ನಿರ್ಣಾಯಕ ಪಂದ್ಯದಲ್ಲೂ ನಿರಾಶೆ ಮೂಡಿಸಿದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ರಿಷಭ್ ಪಂತ್ ಕೇವಲ 7 ರನ್ ಗಳಿಸಿ ಔಟಾದರು.

- Advertisement -

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದ ಪಂತ್, ಎಹ್ಸಾನ್ ಮಾಲಿಂಗ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಪಂತ್ ವಿಕೆಟ್ ಪತನದ ನಂತರ ಲಖನೌ ಮೈದಾನದಲ್ಲಿ ಕಂಡುಬಂದ ದೃಶ್ಯ ಸ್ವಲ್ಪ ಆಶ್ಚರ್ಯಕರವಾಗಿತ್ತು. ಲಖನೌ ಸೂಪರ್‌ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ, ಪಂತ್ ಔಟಾದ ನಂತರ ಲಖನೌ ಕ್ರೀಡಾಂಗಣದ ಬಾಲ್ಕನಿಯಿಂದ ಬೇಸರದಿಂದ ತೆರಳಿದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಲಖನೌ ನಾಯಕ ಪಂತ್ ಔಟಾದ ತಕ್ಷಣ, ಬಾಲ್ಕನಿಯಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಸಂಜೀವ್ ಗೋಯೆಂಕಾ ಅಲ್ಲಿಂದ ಕೋಪದಿಂದ ಹೊರಟುಹೋಗಿದ್ದಾರೆಂದು ಹೇಳಲಾಗುತ್ತಿದೆ.

ಇದನ್ನು ಓದಿದ್ದೀರಾ? 90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

ರಿಷಭ್ ಪಂತ್ ವಿರುದ್ಧ ಸಂಜೀವ್ ಕೋಪ ಮಾಡಿಕೊಳ್ಳುವುದಕ್ಕೂ ಕಾರಣವಿದೆ. ಕೇವಲ ಒಂದು ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದನ್ನು ಹೊರತುಪಡಿಸಿ, ಪಂತ್ 9 ಇನಿಂಗ್ಸ್‌ಗಳಲ್ಲಿ ವಿಫಲರಾಗಿದ್ದಾರೆ. ಈ ಆವೃತ್ತಿಯಲ್ಲಿ ಪಂತ್ 11 ಇನಿಂಗ್ಸ್‌ಗಳಲ್ಲಿ 135 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ ಕೇವಲ 12.27 ಮತ್ತು ಸ್ಟ್ರೈಕ್ ರೇಟ್ ಕೂಡ ಕೇವಲ 100. ಪಂತ್ ಅವರ ಬ್ಯಾಟಿಂಗ್‌ಅನ್ನು ಬದಿಗಿಟ್ಟರೆ, ಅವರ ನಾಯಕತ್ವವೂ ತುಂಬಾ ಕಳಪೆಯಾಗಿದೆ. ಎಲ್‌ಎಸ್‌ಜಿ ತಂಡ ಪ್ಲೇಆಫ್‌ನಿಂದ ಹೊರಬಿದ್ದಿದೆ.

‘‘ಗಾಯಗಳಿಂದಾಗಿ ನಾವು ಕೆಲವು ನ್ಯೂನತೆಗಳನ್ನು ತುಂಬಬೇಕು ಎಂದು ನಮಗೆ ತಿಳಿದಿತ್ತು. ಒಂದು ತಂಡವಾಗಿ ನಾವು ಅದರ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೆವು. ಆದರೆ ಅದರ ಉದ್ದೇಶ ನ್ಯೂನತೆಗಳನ್ನು ನಿವಾರಿಸುವುದಾಗಿತ್ತು. ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು. ಕೆಲವೊಮ್ಮೆ ವಿಷಯಗಳು ನಾವು ಅಂದುಕೊಂಡ ರೀತಿ ನಡೆಯುತ್ತೆ, ಕೆಲವೊಮ್ಮೆ ಹಾಗಾಗುವುದಿಲ್ಲ’’ ಎಂದಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಲ್ಪಟ್ಟ ನಂತರ ಲಖನೌ ತಂಡ 7 ವಿಕೆಟ್‌ಗೆ 205 ರನ್‌ಗಳ ಮೊತ್ತವನ್ನು ಗಳಿಸಿತು. ಆದರೆ ಹೈದರಾಬಾದ್ 18.2 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ ಕಳೆದುಕೊಂಡು ಗುರಿಯನ್ನು ತಲುಪಿತು. ಈ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟಿದ ತಂಡ 200 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗೆಲುವು ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...