ಐಪಿಎಲ್ | ನಾಯಕನ ಆಟವಾಡಿದ ಸಂಜು ಸ್ಯಾಮ್ಸನ್: ಲಕ್ನೋಗೆ ಗೆಲ್ಲಲು 194 ರನ್‌ಗಳ ಗುರಿ ನೀಡಿದ ರಾಜಸ್ಥಾನ

Date:

ಐಪಿಎಲ್ 2024ರ ನಾಲ್ಕನೇ ಪಂದ್ಯವು ರಾಜಸ್ಥಾನ್ ರಾಯಲ್ಸ್, ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಡುವೆ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು.

- Advertisement -

ತನ್ನ ನಿರ್ಧಾರಕ್ಕೆ ತಕ್ಕಂತೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಸಂಜು ಸ್ಯಾಮ್ಸನ್, ತಮ್ಮ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕೂಡಿ ಹಾಕುವಲ್ಲಿ ಯಶಸ್ವಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಂಜು ಸ್ಯಾಮ್ಸನ್ 52 ಎಸೆತಗಳನ್ನು ಎದುರಿಸಿ 6 ಸಿಕ್ಸ್ ಹಾಗೂ 3 ಬೌಂಡರಿಯ ನೆರವಿನೊಂದಿಗೆ 82 ರನ್ ಗಳಿಸಿ, ಔಟಾಗದೆ ಉಳಿದರು. ಟೀಮ್ ಇಂಡಿಯಾಕ್ಕೆ ತಮ್ಮನ್ನು ಕಡೆಗಣಿಸುತ್ತಿರುವ ಆಯ್ಕೆಗಾರರಿಗೆ ಐಪಿಎಲ್‌ನ ಆರಂಭಿಕ ಪಂದ್ಯದಲ್ಲೇ ಮಿಂಚಿದ್ದು, ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿ, ಗಮನ ಸೆಳೆದಿದ್ದಾರೆ.

ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ರಾಜಸ್ಥಾನ ಪರ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ, ಲಕ್ನೋ ವೇಗಿ ನವೀನ್ ಉಲ್ ಹಕ್ ಅವರು ಎಸೆದ ಎರಡನೇ ಓವರ್‌ನಲ್ಲಿ 11 ರನ್ ಗಳಿಸಿದ್ದ ಜೋಸ್ ಬಟ್ಲರ್, ವಿಕೆಟ್ ಕೀಪರ್ ಕೆ ಎಲ್ ರಾಹುಲ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಆ ಬಳಿಕ ಯಶಸ್ವಿ ಜೈಸ್ವಾಲ್ 12 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದ ರಿಯಾನ್ ಪರಾಗ್ ನಾಯಕ ಸ್ಯಾಮ್ಸನ್‌ ಜೊತೆಗೆ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಮುರಿಯದ ಮೂರನೇ ವಿಕೆಟ್‌ಗೆ 59 ಎಸೆತಗಳಲ್ಲಿ 93 ರನ್‌ಗಳ ಜೊತೆಯಾಟ ನಡೆಸಿತು. ರಿಯಾನ್ ಪರಾಗ್ 29 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 43 ರನ್ ಗಳಿಸಿ, ನವೀನ್ ಉಲ್ ಹಕ್‌ಗೆ ವಿಕೆಟ್ ಒಪ್ಪಿಸಿದರು.

ಉಳಿದಂತೆ ಶಿಮ್ರಾನ್ ಹೆಟ್ಮಾಯರ್ 7 ರನ್ ಗಳಿಸಿದರೆ, ಇನ್ನಿಂಗ್ಸ್‌ನ ಕೊನೆಯಲ್ಲಿ ನಾಯಕ ಸ್ಯಾಮ್ಸನ್‌ಗೆ ಸಾಥ್ ನೀಡಿದ ಧ್ರುವ್ ಜುರೆಲ್, 12 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 1 ಸಿಕ್ಸರ್‌ನ ನೆರವಿನಿಂದ 20 ರನ್ ದಾಖಲಿಸಿ, ತಂಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕೂಡಿ ಹಾಕುವಲ್ಲಿ ಯಶಸ್ವಿಯಾಯಿತು.

ಲಕ್ನೋ ಸೂಪರ್ ಜೈಂಟ್ಸ್ ಪರ ಬೌಲಿಂಗ್‌ನಲ್ಲಿ ನವೀನ್ ಉಲ್ ಹಕ್ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ ಹಾಗೂ ಮೊಹ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಗಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...