ಭಾರತ – ನ್ಯೂಜಿಲೆಂಡ್ ಟೆಸ್ಟ್: ಬೃಹತ್‌ ಮುನ್ನಡೆಯತ್ತ ಕಿವೀಸ್

Date:

ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್‌ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್‌ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ. ಅರ್ಧ ಶತಕ ಬಾರಿಸಿದ ನಾಯಕ ಟಾಮ್‌ ಲೇಥಮ್‌ (81) ನ್ಯೂಜಿಲೆಂಡ್‌ಗೆ ರಕ್ಷಣೆ ಒದಗಿಸಿದರು.

- Advertisement -

ಎರಡನೇ ಇನಿಂಗ್ಸ್‌ನಲ್ಲೂ ಕೂಡ ಸ್ಪಿನ್ನರ್ ವಾಷಿಂಗ್ಟನ್‌ ಸುಂದರ್‌ ತಮ್ಮ ಕೈಚಳಕ ತೋರಿ 5 ವಿಕೆಟ್‌ಗಳಲ್ಲಿ 4 ಅನ್ನು ತಮ್ಮ ಖಾತೆಗೆ ಇಳಿಸಿಕೊಂಡಿದ್ದಾರೆ. ಮತ್ತೊಂದು ವಿಕೆಟ್‌ಅನ್ನು ಆರ್‌ ಅಶ್ವಿನ್‌ ಕಬಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಮಿಂಚಿದ ಮಿಚೆಲ್ ಸ್ಯಾಂಟನರ್

ಎರಡನೇ ದಿನದಾಟದಲ್ಲಿ ನ್ಯೂಜಿಲೆಂಡ್‌ನ ಸ್ಪಿನ್ನರ್‌ ಮಿಚೆಲ್ ಸ್ಯಾಂಟನರ್‌ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ ಮಿಚೆಲ್ ಸ್ಯಾಂಟನರ್‌ ಸ್ಪಿನ್‌ಗೆ ಸವಾಲು ಒಡ್ಡಲಾಗದೆ 45.3 ಓವರ್‌ಗಳಲ್ಲಿ 156 ರನ್‌ಗಳಿಗೆ ಆಲೌಟ್‌ ಆಯಿತು.

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ಇದರೊಂದಿಗೆ ಮೊದಲ ಇನಿಂಗ್ಸ್‌ನಲ್ಲಿ 103 ರನ್‌ಗಳ ಹಿನ್ನಡೆ ಅನುಭವಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ ನೀಡಿದ 259 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕಿವೀಸ್‌ನ ಮಿಚೆಲ್ ಸ್ಯಾಂಟನರ್‌ ದಾಳಿಯನ್ನು ಎದುರಿಸಲು ಸಾಧ್ಯವಾಗಲಿಲ್ಲ.

ಯಶಸ್ವಿ ಜೈಸ್ವಾಲ್‌(30), ಶುಭಮನ್‌ ಗಿಲ್‌ (30) ಹಾಗೂ ರವೀಂದ್ರ ಜಡೇಜಾ (38) ಹೊರತುಪಡಿಸಿದರೆ ಉಳಿದ ಆಟಗಾರರಿಂದ ಪ್ರತಿರೋಧ ವ್ಯಕ್ತವಾಗಲಿಲ್ಲ.

ಅದ್ಭುತ ಬೌಲಿಂಗ್‌ ಮಾಡಿದ ಮಿಚೆಲ್ ಸ್ಯಾಂಟನರ್‌ 53 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿದರು. ಇನ್ನುಳಿದಂತೆ ಗ್ಲೆನ್‌ ಫಿಲಿಪ್ಸ್ 26/2 ಹಾಗೂ ಟಿಮ್‌ ಸೌಥಿ 18/1 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಆಲೌಟ್‌ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...