ಮಹಿಳಾ ಟೆಸ್ಟ್ ಕ್ರಿಕೆಟ್ | ಅತ್ಯಂತ ವೇಗದ ದ್ವಿಶತಕ ದಾಖಲಿಸಿದ ಶಫಾಲಿ ವರ್ಮಾ

Date:

ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈನಲ್ಲಿ ಇಂದು ಆರಂಭಗೊಂಡಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಟಗಾರ್ತಿ ಶಫಾಲಿ ವರ್ಮಾ, ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ದ್ವಿಶತಕ ಬಾರಿಸುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದ್ದಾರೆ.

- Advertisement -

ಟೆಸ್ಟ್​ ಪಂದ್ಯದ ಮೊದಲ ದಿನವೇ ಭಾರತ ಮೇಲುಗೈ ಸಾಧಿಸಿದೆ. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನ ಸೆಳೆದರು. ಈ ಪಂದ್ಯದಲ್ಲಿ ಶಫಾಲಿ ಬಿರುಸಿನ ಶತಕ ಬಾರಿಸುವ ಮೂಲಕ 40 ವರ್ಷಗಳ ಹಿಂದಿನ ಟೆಸ್ಟ್​ ದಾಖಲೆಯೊಂದನ್ನು ಮುರಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಶಫಾಲಿ 113 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಮೊದಲ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಆಟಗಾರ್ತಿ ಜಾನೆಟ್ ಬ್ರಿಟಿನ್ ಹೆಸರಿನಲ್ಲಿತ್ತು. 1984 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 137 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಈ 40 ವರ್ಷಗಳ ಹಳೆಯ ದಾಖಲೆಯನ್ನು ಶಫಾಲಿ ವರ್ಮಾ ಮುರಿದಿದ್ದಾರೆ.

ಬಲಗೈ ಬ್ಯಾಟರ್ ಆಗಿರುವ ಶಫಾಲಿ ವರ್ಮಾ, ತನ್ನ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸುವ ಮೂಲಕ ಭಾರತ ಪರ ದ್ವಿಶತಕ ಬಾರಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟೀಮ್ ಇಂಡಿಯಾ ಮಾಜಿ ಮಹಿಳಾ ಆಟಗಾರ್ತಿ ಮಿಥಾಲಿ ರಾಜ್​ ಅವರು ಭಾರತ ಪರ ಟೆಸ್ಟ್​ನಲ್ಲಿ ದ್ವಿಶತಕ ಬಾರಿಸಿದ ಮೊದಲ ಆಟಗಾರ್ತಿಯಾಗಿದ್ದಾರೆ. 2002ರಲ್ಲಿ ಇಂಗ್ಲೆಂಡ್​ ವಿರುದ್ಧ 214 ರನ್​ ಬಾರಿಸಿದ್ದರು.

ಅತ್ಯಂತ ವೇಗದ ದ್ವಿಶತಕ

ಮಹಿಳೆಯರ ಟೆಸ್ಟ್‌ ಪಂದ್ಯದಲ್ಲಿ ವೇಗವಾಗಿ ದ್ವಿಶತಕ ದಾಖಲಿಸುವ ಮೂಲಕ ಶಫಾಲಿ ವರ್ಮಾ ದಾಖಲೆ ಬರೆದಿದ್ದಾರೆ.

ಶಫಾಲಿ ಕೇವಲ 196 ಎಸೆತಗಳಲ್ಲಿ 200 ರನ್‌ಗಳ ಗಡಿಯನ್ನು ತಲುಪಿದರು. ಆ ಮೂಲಕ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್‌ಲ್ಯಾಂಡ್ಸ್ ಅವರನ್ನು ಹಿಂದಿಕ್ಕಿದರು. ಅನ್ನಾಬೆಲ್ ಅವರು 248 ಎಸೆತಗಳಲ್ಲಿ ಈ ಸಾಧನೆಗೈದಿದ್ದರು. ಅವರ ಹೆಸರಿನಲ್ಲಿದ್ದ ದ್ವಿಶತಕದ ಸಾಧನೆಯನ್ನು ಶಫಾಲಿ ಮುರಿದಿದ್ದಾರೆ.

292 ರನ್‌ಗಳ ಜೊತೆಯಾಟ ನಡೆಸಿದ ಮಂಧಾನ-ಶಫಾಲಿ ಜೋಡಿ

ಏಕೈಕ ಟೆಸ್ಟ್‌ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತಕ್ಕೆ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಶತಕದ ಆಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿದರು. ಈ ಜೋಡಿಯು ಮೊದಲ ವಿಕೆಟ್‌ಗೆ 292 ರನ್‌ಗಳ ಜೊತೆಯಾಟ ನಡೆಸಿದರು. ಇದು ಮಹಿಳಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇದುವರೆಗಿನ ಬೃಹತ್ ಆರಂಭಿಕ ಜೋಡಿಯ ಜೊತೆಯಾಟವಾಗಿದೆ.

197 ನಿಮಿಷಗಳ ಕಾಲ ಕ್ರೀಸ್‌ನಲ್ಲಿದ್ದ ಸ್ಮೃತಿ ಮಂಧಾನ, 161 ಎಸೆತಗಳನ್ನು ಎದುರಿಸಿ 149 ರನ್(27 ಬೌಂಡರಿ ಹಾಗೂ 1 ಸಿಕ್ಸರ್) ಗಳಿಸಿದ್ದಾಗ ಟಕರ್ ಎಸೆತದಲ್ಲಿ ಡರ್ಕ್‌ಸನ್‌ಗೆ ಕ್ಯಾಚಿತ್ತು ಔಟಾದರು. ಆ ಮೂಲಕ 150ರ ಗಡಿ ದಾಟಲು 1 ರನ್‌ನಿಂದ ವಂಚಿತರಾದರು.

ಒಟ್ಟು 197 ಎಸೆತಗಳನ್ನು ಎದುರಿಸಿದ ಶಫಾಲಿ ವರ್ಮಾ, 23 ಬೌಂಡರಿ ಹಾಗೂ 8 ಸಿಕ್ಸರ್‌ನ ನೆರವಿನಿಂದ 205 ರನ್ ಗಳಿಸಿ ಮುಂದುವರಿಯುತ್ತಿದ್ದಾಗ ರನೌಟ್ ಆದರು. ಸದ್ಯ ಟೀಮ್ ಇಂಡಿಯಾವು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಕಳೆದುಕೊಂಡು 494 ರನ್ ದಾಖಲಿಸಿ, ಮೊದಲ ದಿನವೇ ಮೇಲುಗೈ ಸಾಧಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...