ವಿಶಾಖಪಟ್ಟಣದಲ್ಲಿ ಶಿವಂ ದುಬೆ ಅಬ್ಬರದ ಆಟ: ಭಾರತ ಸೋತರೂ ಒಲಿದ ಐತಿಹಾಸಿಕ ದಾಖಲೆ

Date:

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಬುಧವಾರ ವಿಶಾಖಪಟ್ಟಣದಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 50 ರನ್‌ಗಳ ಸೋಲು ಕಂಡಿದೆ. ಆದರೆ, ಈ ಸೋಲಿನ ನಡುವೆಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಇತಿಹಾಸದ ಪುಟ ಸೇರಿದೆ. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ದುಬೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ‘ಮೂರನೇ ವೇಗದ ಅರ್ಧಶತಕ’ ಬಾರಿಸಿದ ಕೀರ್ತಿಗೆ ಭಾಜನರಾದರು.

- Advertisement -

ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಭಾರತಕ್ಕೆ ದುಬೆ ಆಸರೆಯಾದರು. ಇಶ್ ಸೋಧಿ ಅವರ ಒಂದೇ ಓವರ್‌ನಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿ ಸೇರಿ 26 ರನ್ ಚಚ್ಚಿದ ಅವರು, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೇವಲ 15 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ, ಯುವರಾಜ್ ಸಿಂಗ್ (12 ಎಸೆತ) ಮತ್ತು ಅಭಿಷೇಕ್ ಶರ್ಮಾ (14 ಎಸೆತ) ಅವರ ನಂತರದ ಸ್ಥಾನವನ್ನು ದುಬೆ ಅಲಂಕರಿಸಿದರು.

ಒಟ್ಟು 23 ಎಸೆತಗಳನ್ನು ಎದುರಿಸಿದ ಅವರು 3 ಬೌಂಡರಿ ಹಾಗೂ ಬರೋಬ್ಬರಿ 7 ಸಿಕ್ಸರ್‌ಗಳ ನೆರವಿನಿಂದ 65 ರನ್ ಕಲೆಹಾಕಿದರು. ದುರಾದೃಷ್ಟವಶಾತ್ ನಾನ್-ಸ್ಟ್ರೈಕರ್ ತುದಿಯಲ್ಲಿ ರನ್ ಔಟ್ ಆಗುವ ಮೂಲಕ ಅವರ ಅಬ್ಬರಕ್ಕೆ ಬ್ರೇಕ್ ಬಿತ್ತು. ದುಬೆ ಅವರ ವಿರೋಚಿತ ಹೋರಾಟದ ಹೊರತಾಗಿಯೂ, ನ್ಯೂಜಿಲೆಂಡ್ ನೀಡಿದ್ದ ಬೃಹತ್ ಗುರಿಯನ್ನು ಮುಟ್ಟುವಲ್ಲಿ ಟೀಂ ಇಂಡಿಯಾ ವಿಫಲವಾಯಿತು.

ಇದನ್ನು ಓದಿದ್ದೀರಾ? ದಾಖಲೆಗಳ ಕಿರೀಟಕ್ಕೆ ಮತ್ತೊಂದು ಗರಿ: ಕಿವೀಸ್ ಸದೆಬಡಿದ ಭಾರತಕ್ಕೆ ಟಿ20 ಸರಣಿ ಕಿರೀಟ

​ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ, ಟಿಮ್ ಸೀಫರ್ಟ್ (62) ಮತ್ತು ಡೆವೊನ್ ಕಾನ್ವೆ (44) ಅವರ ಸ್ಫೋಟಕ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 215/7 ರನ್ ಕಲೆಹಾಕಿತು.

216 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತ, ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ರಿಂಕು ಸಿಂಗ್ (39) ಮತ್ತು ಶಿವಂ ದುಬೆ ಮಾತ್ರ ದಿಟ್ಟ ಹೋರಾಟ ಪ್ರದರ್ಶಿಸಿದರು. ಉಳಿದ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಭಾರತ 18.4 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಆಯಿತು. ​ಈ ಸೋಲಿನ ಹೊರತಾಗಿಯೂ 5 ಪಂದ್ಯಗಳ ಸರಣಿಯಲ್ಲಿ ಭಾರತ ಇನ್ನೂ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

​ಸಂಕ್ಷಿಪ್ತ ಸ್ಕೋರ್:
ನ್ಯೂಜಿಲೆಂಡ್: 20 ಓವರ್‌ಗಳಲ್ಲಿ 215/7 (ಟಿಮ್ ಸೀಫರ್ಟ್ 62, ದೀಪಕ್ ಚಹಾರ್ 2/33).
​ಭಾರತ: 18.4 ಓವರ್‌ಗಳಲ್ಲಿ 165/10 (ಶಿವಂ ದುಬೆ 65, ಮಿಚೆಲ್ ಸ್ಯಾಂಟ್ನರ್ 3/26).

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...