ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಾದ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್

Date:

ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದಲ್ಲಿ ಪಕ್ಕೆಲುಬಿನ ಗಾಯದಿಂದ ಆಂತರಿಕ ರಕ್ತಸ್ರಾವವಾಗಿ ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲಾಗಿದ್ದಾರೆ.

- Advertisement -

ಮೂರನೇ ಏಕದಿನ ಪಂದ್ಯದ ವೇಳೆ ಆಸೀಸ್‌ ಬ್ಯಾಟರ್ ಅಲೆಕ್ಸ್ ಕ್ಯಾರಿಯ ವಿಕೆಟ್ ಪಡೆಯಲು ಓಡುವ ಸಂದರ್ಭದಲ್ಲಿ ಅವರ ಎಡಗಡೆ ಪಕ್ಕೆಲುಬಿಗೆ ಗಾಯವಾಗಿತ್ತು. ಪಂದ್ಯದ ನಂತರ ಡ್ರೆಸ್ಸಿಂಗ್ ರೂಂಗೆ ಮರಳಿದ ತಕ್ಷಣ ಅವರ ಆರೋಗ್ಯ ಪರಿಸ್ಥಿತಿ ಏರಿಳಿತಗೊಂಡಿದ್ದರಿಂದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಶ್ರೇಯಸ್ ಕಳೆದ ಎರಡು ದಿನಗಳಿಂದ ಐಸಿಯುನಲ್ಲಿದ್ದಾರೆ. ಅವರಿಗೆ ಆಂತರಿಕ ರಕ್ತಸ್ರಾವ ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಚೇತರಿಕೆಯನ್ನು ಅವಲಂಬಿಸಿ ಎರಡರಿಂದ ಏಳು ದಿನಗಳವರೆಗೆ ಅವರು ವೈದ್ಯರ ಗಮನದಲ್ಲಿರುತ್ತಾರೆ” ಎಂದು ಹೆಸರು ಬಹಿರಂಗಗೊಳಿಸದ ಮೂಲವೊಂದು ತಿಳಿಸಿದೆ.

ಇದನ್ನು ಓದಿದ್ದೀರಾ? ICC Women’s World Cup: ನ್ಯೂಜಿಲೆಂಡ್‌ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

ಬಿಸಿಸಿಐ ವೈದ್ಯಕೀಯ ತಂಡವು ಶ್ರೇಯಸ್‌ ಅವರ ಆರೋಗ್ಯದಲ್ಲಿ ಏರಿಳಿತ ಕಂಡುಬಂದ ತಕ್ಷಣ ಕ್ರಮ ಕೈಗೊಂಡಿತು. “ತಂಡದ ವೈದ್ಯ ಮತ್ತು ಫಿಸಿಯೋ ಯಾವುದೇ ಅಪಾಯವನ್ನು ತೆಗೆದುಕೊಳ್ಳದೆ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಈಗ ಪರಿಸ್ಥಿತಿ ಸ್ಥಿರವಾಗಿದೆ, ಆದರೆ ಇದು ಗಂಭೀರವಾಗಬಹುದಿತ್ತು. ಶ್ರೇಯಸ್ ಗಟ್ಟಿಗನಾಗಿದ್ದು, ಶೀಘ್ರವೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ” ಎಂದು ಮೂಲವು ಹೇಳಿದೆ.

31 ವರ್ಷದ ಶ್ರೇಯಸ್‌ಗೆ ಆಂತರಿಕ ರಕ್ತಸ್ರಾವದಿಂದಾಗಿ ಚೇತರಿಕೆಗೆ ಹೆಚ್ಚಿನ ಸಮಯ ಬೇಕಾಗಬಹುದು. ಪ್ರಸ್ತುತ, ಅವರು ಕ್ರಿಕೆಟ್‌ಗೆ ಮರಳುವ ಸಮಯವನ್ನು ನಿಖರವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಅವರು ಕನಿಷ್ಠ ಒಂದು ವಾರ ಸಿಡ್ನಿಯ ಆಸ್ಪತ್ರೆಯಲ್ಲಿರುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...