ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಈ ವರ್ಷ ಸ್ಥಾನ ಪಡೆದಿದ್ದಾರೆ.
ಗುತ್ತಿಗೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಜಸ್‌ಪ್ರೀತ್ ಬೂಮ್ರಾ ಎ + ನಲ್ಲಿ ಸ್ಥಾನ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಪರೂಪದ ಸಚಿನ್ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್
ಶ್ರೇಯಸ್ ಅಯ್ಯರ್ ‘ಬಿ’ ಸ್ಥಾನವನ್ನು ಪಡೆದರೆ, ಇಶಾನ್ ಕಿಶನ್ ‘ಸಿ’ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷದಲ್ಲಿ ರಣಜಿ ಟೂರ್ನಿ ಆಡಲು ಆಸಕ್ತಿ ತೋರದ ಈ ಆಟಗಾರರನ್ನು ಬಿಸಿಸಿಐ ತನ್ನ ಗುತ್ತಿಗೆ ಪಟ್ಟಿಯಿಂದ ಕೈಬಿಟ್ಟಿತ್ತು. ಪಟ್ಟಿಯಲ್ಲಿ ಇಬ್ಬರು ಕನ್ನಡಿಗರಾದ ಕೆ ಎಲ್ ರಾಹುಲ್, ಹಾಗೂ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ
ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.
‘ಎ’: ಮೊಹಮ್ಮದ್ ಸಿರಾಜ್, ಕೆ ಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮದ್ ಶಮಿ, ರಿಷಭ್ ಪಂತ್.
‘ಬಿ’: ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್.
‘ಸಿ’: ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ರಶ್ವರ್ಣ, ಅಭಿಷೇಕ್ ದೀವರ ಶರ್ಮಾ
ಯಾರಿಗೆ ಎಷ್ಟು ಹಣ ?
ಎ+ – 7 ಕೋಟಿ ರೂ.
ಎ – 5 ಕೋಟಿ ರೂ.
ಬಿ – 3 ಕೋಟಿ ರೂ.
ಸಿ – 1 ಕೋಟಿ ರೂ.