ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶುಭಮನ್ ಗಿಲ್‌ಗೆ 12 ಲಕ್ಷ ರೂ. ದಂಡ

Date:

ಚೆನ್ನೈನಲ್ಲಿ ಸಿಎಸ್‌ಕೆ ತಂಡದ ವಿರುದ್ಧ ನಡೆದ ನಿನ್ನೆಯ(ಮಾ.26) ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ ನಿಧಾನಗತಿಯ ಓವರ್‌ ಮಾಡಿದ ಕಾರಣಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಐಪಿಎಲ್,ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2014ನೇ ಸಾಲಿನ ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್‌ ಮಾಡಿದ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದು ಟೂರ್ನಮೆಂಟ್‌ನ 17ನೇ ಆವೃತ್ತಿಯ ಒಂದು ತಂಡದ ಪರವಾಗಿ ಓವರ್‌ದರಕ್ಕೆ ಸಂಬಂಧಿಸಿದ ಅಪರಾಧವಾಗಿದೆ ಎಂದು ತಿಳಿಸಿದೆ.

ನಿಗದಿತ ಸಮಯದಲ್ಲಿ ಕನಿ‍ಷ್ಠ ಓವರ್‌ಗಳನ್ನು ಪೈರೈಸದ ಕಾರಣ ಐಪಿಎಲ್ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ಕಾರಣಕ್ಕಾಗಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

17ನೇ ಆವೃತ್ತಿಯಲ್ಲಿ ಗುಜರಾತ್‌ ತಂಡದ ನಾಯಕನಾಗಿ ಶುಭಮನ್‌ ಗಿಲ್‌ ಜವಾಬ್ದಾರಿ ವಹಿಸಿಕೊಂಡಿದ್ದು, ತಮ್ಮ ನೇತೃತ್ವದಲ್ಲಿ ನಡೆದ ಮೊದಲ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿತ್ತು.

ನಿನ್ನೆ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧದ ಎರಡನೇ ಪಂದ್ಯದಲ್ಲಿ 63 ರನ್‌ಗಳ ಸೋಲು ಅನುಭವಿಸಿತ್ತು. ನ್ಯೂಜಿಲೆಂಡ್‌ನ ರಚಿನ್ ರವೀಂದ್ರ(46), ಶಿವಂ ದುಬೆ(51) ಹಾಗೂ ನಾಯಕ ರುತುರಾಜ್ ಗಾಯಕ್‌ವಾಡ್(46) ಅವರ ಅಮೋಘ ಆಟದಿಂದ ಸಿಎಎಸ್‌ಕೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 206 ರನ್‌ ಗಳಿಸಿತ್ತು.

207 ರನ್‌ಗಳ ಸವಾಲನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್‌ಗಳನಷ್ಟೆ ಗಳಿಸಲು ಸಾಧ್ಯವಾಯಿತು. ಚೆನ್ನೈ ಪರ ದೀಪಕ್‌ ಚಹಾರ್, ಮುಸ್ತಫಿಜೂರ್ ಹಾಗೂ ತುಷಾರ್ ದೇಶಪಾಂಡೆ ತಲಾ 2 ವಿಕೆಟ್‌ಗಳನ್ನು ಪಡೆದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ....

2025ರ ಐಪಿಎಲ್‌ನಲ್ಲೂ ಎಂಎಸ್ ಧೋನಿ ಆಡುವುದು ಅವರಿಗೆ ಬಿಟ್ಟ ವಿಚಾರ: ಚೆನ್ನೈ ಸಿಇಓ ಕಾಸಿ ವಿಶ್ವನಾಥನ್

ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ...

ಭಾರತ – ಪಾಕ್ ಟಿ20 ವಿಶ್ವಕಪ್ ಪಂದ್ಯದ ಪ್ರತಿ ಟಿಕೆಟ್ ಬೆಲೆ ಬರೋಬ್ಬರಿ 17 ಲಕ್ಷ ರೂ!

ಐಪಿಎಲ್ ಮುಗಿಯುತ್ತಾ ಬಂತು, ಇನ್ನೇನಿದ್ದರೂ ಕ್ರಿಕೆಟ್ ಅಭಿಮಾನಿಗಳಲ್ಲಿ ಟಿ20 ವಿಶ್ವಕಪ್ ಹುಚ್ಚು...