ಇಂದಿನಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ : ಟೀಮ್ ಇಂಡಿಯಾದ ಪ್ರಮುಖ ಬೌಲರ್ ಸಿರಾಜ್ ಔಟ್!

Date:

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಇಂದಿನಿಂದ(ಜು.27) ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿರುವ ಮುನ್ನವೇ ಪ್ರಮುಖ ಬೌಲರ್ ಮೊಹಮ್ಮದ್ ಸಿರಾಜ್ ಸರಣಿಯಿಂದಲೇ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

- Advertisement -

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ಮೊಹಮ್ಮದ್ ಸಿರಾಜ್ ಪಾದದ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಸಿಸಿಐ ವೈದ್ಯಕೀಯ ತಂಡ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ಹಾಗಾಗಿ, ತಂಡದಿಂದ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಏಕದಿನ ತಂಡದಿಂದ ಟೀಂ ಇಂಡಿಯಾದ ಬಲಗೈ ವೇಗಿ ಮೊಹಮ್ಮದ್ ಸಿರಾಜ್ ಅವರು ಮೂರು ಪಂದ್ಯಗಳಿಗೂ ಲಭ್ಯವಿರುವುದಿಲ್ಲ ಹಾಗೂ ಜುಲೈ 27ರಂದು ಬಾರ್ಬಡೋಸ್‌ನಲ್ಲಿ ಪ್ರಾರಂಭವಾಗುವ ಏಕದಿನ ಸರಣಿಗೆ ಬದಲಿ ಆಟಗಾರನನ್ನು ತಂಡವು ಕರೆದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಹಾಗಾಗಿ, ಸದ್ಯ ವೇಗಿಗಳಾದ ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ತಂಡದಲ್ಲಿದ್ದಾರೆ. ಇವರಲ್ಲಿ ನಾಯಕ ರೋಹಿತ್ ಶರ್ಮಾ ಯಾರಿಗೆ ಅವಕಾಶ ನೀಡಲಿದ್ದಾರೆ ಎಂದು ಕಾದು ನೋಡಬೇಕಿದೆ.

ಜುಲೈ 27 ಮತ್ತು 29ರಂದು ಬಾರ್ಬಡೋಸ್‌ನಲ್ಲೇ ಮೊದಲ ಮತ್ತು ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಟ್ರಿನಿಡಾಡ್‌ನಲ್ಲಿ ಆಗಸ್ಟ್ ಒಂದರಂದು ಮೂರನೇ ಪಂದ್ಯ ನಡೆಯಲಿದೆ. ನಂತರ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 03 ರಿಂದ ಆರಂಭಗೊಳ್ಳಲಿದೆ.

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಅಂತಿಮ ದಿನ ದಿನವಿಡೀ ಮಳೆ ಸುರಿದ ಕಾರಣ ಡ್ರಾನಲ್ಲಿ ಅಂತ್ಯಗೊಂಡಿತ್ತು. ರೋಹಿತ್‌ ಶರ್ಮಾ ನೇತೃತ್ವದ ಭಾರತದ ತಂಡ ಮೊದಲ ಟೆಸ್ಟ್‌ ಪಂದ್ಯದಲ್ಲಿ ಜಯಿಸಿದ್ದರಿಂದ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ಟೆಸ್ಟ್‌ನಲ್ಲಿ ಐದು ವಿಕೆಟ್ ಕಬಳಿಸಿದ್ದ ವೇಗಿ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಈಗ ಗಾಯದ ಸಮಸ್ಯೆಯಿಂದ ಏಕದಿನ ಸರಣಿಯಿಂದಲೇ ಹೊರಗುಳಿಯುವಂತಾಗಿದೆ.

ಭಾರತದ ನವೀಕೃತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...