VIDEO | ಅಂತಾರಾಷ್ಟ್ರೀಯ ಪಂದ್ಯ ನಡೆಯುವಾಗ ಮೈದಾನಕ್ಕೆ ನುಗ್ಗಿದ 7 ಅಡಿ ಉದ್ದದ ಹಾವು

Date:

ಕ್ರೀಡಾ ಪಂದ್ಯಗಳು ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವಾಗ ಆಡಳಿತ ಮಂಡಳಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುತ್ತದೆ. ಬಾಂಗ್ಲಾದೇಶ-ಶ್ರೀಲಂಕಾ ನಡುವಣ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದ ವೇಳೆ ಹಾವು ಏಕಾಏಕಿ ಮೈದಾನಕ್ಕೆ ನುಗ್ಗಿದೆ.

- Advertisement -

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿದ್ದ ಮೊದಲ ಏಕದಿನ ಪಂದ್ಯದ ವೇಳೆ ಮೈದಾನಕ್ಕೆ ಹಾವು ನುಗ್ಗಿದೆ. ಅಲ್ಲದೆ ಕೆಲ ಹೊತ್ತು ಮೈದಾನದಲ್ಲೇ ಓಡಾಡಿಕೊಂಡಿದೆ. ಹಾವು ಬಂದ ಕಾರಣ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತು. ಆಟಗಾರರು ಸ್ವಲ್ಪ ಗಾಬರಿಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆ ಬಳಿಕ ಭದ್ರತಾ ಸಿಬ್ಬಂದಿಗಳು ಆಗಮಿಸಿ, ಹಾವನ್ನು ಮೈದಾನದಿಂದ ಹೊರಹಾಕುವಲ್ಲಿ ಯಶಸ್ವಿಯಾದರು. ಆ ನಂತರ ಪಂದ್ಯವನ್ನು ಮುಂದುವರೆಸಲಾಯಿತು. ಇದೀಗ ಮೈದಾನದಲ್ಲಿ ಓಡಾಡುತ್ತಿದ್ದ ಹಾವಿನ ವಿಡಿಯೋ ವೈರಲ್ ಆಗಿದೆ.

ಇದನ್ನು ಓದಿದ್ದೀರಾ? ಅಮನ್ಜೋತ್‌ ಆಲ್‌ರೌಂಡರ್ ಆಟ: ಇಂಗ್ಲೆಂಡ್‌ ವಿರುದ್ಧ ಭಾರತದ ವನಿತೆಯರಿಗೆ ಸತತ 2ನೇ ಜಯ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್​ಗಳಲ್ಲಿ 244 ರನ್​ಗಳಿಸಿ ಆಲೌಟ್ ಆಗಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ 167 ರನ್​ಗಳಿಗೆ ಆಲೌಟ್ ಆಗಿತು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ 77 ರನ್​ಗಳ ಭರ್ಜರಿ ಜಯ ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...