ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂತನ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

Date:

ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ 10 ಸಾವಿರ ಅಂತಾರಾಷ್ಟ್ರೀಯ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾದರು. ಜತೆಗೆ ಅತ್ಯಂತ ವೇಗವಾಗಿ 10 ಸಾವಿರ ರನ್ ಗಳ ಮೈಲುಗಲ್ಲು ಸ್ಥಾಪಿಸಿದ ಮಹಿಳೆ ಎಂಬ ಹೆಗ್ಗಳಿಕೆಯೂ ಅವರದ್ದಾಯಿತು.

- Advertisement -

ಬಾಂಗ್ಲಾದೇಶ ವಿರುದ್ಧ 2013ರಲ್ಲಿ ಭಾರತ ಪರ ಪದಾರ್ಪಣೆ ಮಾಡಿದ್ದ ಮಂಧಾನ, ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಈ ಮೈಲುಗಲ್ಲು ತಲುಪಲು 27 ರನ್ ಗಳಿಸಬೇಕಿತ್ತು. ಕೇವಲ 20 ಎಸೆತಗಳಲ್ಲೇ 27 ರನ್ ಗಳಿಸಿದ ಅವರು, ಬಳಿಕ 11 ಬೌಂಡರಿ ಮತ್ತು ಮೂರು ಸಿಕ್ಸರ್ ಗಳೊಂದಿಗೆ 48 ಎಸೆತಗಳಲ್ಲಿ 80 ರನ್ ಗಳನ್ನು ಸಿಡಿಸಿದರು. 170.2 ಸ್ಟ್ರೈಕ್ ರೇಟ್ ನೊಂದಿಗೆ 32ನೇ ಅಂತಾರಾಷ್ಟ್ರೀಯ ಅರ್ಧಶತಕ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಈ ಸಾಧನೆಯೊಂದಿಗೆ ಮಂಧಾನ, ಈಗಾಗಲೇ 10 ಸಾವಿರ ಅಂತಾರಾಷ್ಟ್ರೀಯ ರನ್ ಗಳಿಸಿದ ನ್ಯೂಜಿಲೆಂಡ್ ನ ಸೂಝಿ ಬೇಟ್ಸ್ ಮತ್ತು ಇಂಗ್ಲೆಂಡ್‌ನ ಮಾಜಿ ನಾಯಕಿ ಚಾರ್ಲೊಟ್ ಎಡ್ವರ್ಡ್ ಅವರ ಸಾಲಿಗೆ ಸೇರಿದರು.

ಇದನ್ನು ಓದಿದ್ದೀರಾ? ಏಕದಿನದಲ್ಲಿ ವಿಶ್ವದಾಖಲೆಯ 574 ರನ್: ವೈಭವ್ ಸೇರಿ ಮೂವರ ಶತಕ, ಸಿಕ್ಸರ್‌ಗಳ ಸುರಿಮಳೆ

ಏಳು ಟೆಸ್ಟ್ ಪಂದ್ಯಗಳಿಂದ 629 ರನ್ ಕಲೆ ಹಾಕಿರುವ ಅವರು, 117 ಏಕದಿನ ಪಂದ್ಯಗಳಲ್ಲಿ 5322 ರನ್ ಗಳಿಸಿದ್ದಾರೆ. ಅಂತೆಯೇ ಟಿ20 ಕ್ರಿಕೆಟ್ ನಲ್ಲಿ 4000 ಅಂತಾರಾಷ್ಟ್ರೀಯ ರನ್‌ಳನ್ನು ಗಳಿಸಿದ ಭಾರತದ ಮೊಟ್ಟಮೊದಲ ಹಾಗೂ ವಿಶ್ವದ ಎರಡನೇ ಆಟಗಾರ್ತಿ ಎಂಬ ದಾಖಲೆಯನ್ನು ಸರಣಿಯ ಮೊದಲ ಪಂದ್ಯದಲ್ಲಿ ಇವರು ಸೃಷ್ಟಿಸಿದ್ದರು.

ಎಡಗೈ ಆರಂಭಿಕ ಆಟಗಾರ್ತಿ ಏಕದಿನ ವಿಶ್ವಕಪ್ ನಲ್ಲಿ ಒಂಬತ್ತು ಇನಿಂಗ್ಸ್ ಗಳಲ್ಲಿ 54.25 ಸರಾಸರಿಯೊಂದಿಗೆ 434 ರನ್ ಗಳಿಸಿದ್ದರು. 2025ರಲ್ಲಿ ಏಕದಿನ ಪಂದ್ಯಗಳ 23 ಇನಿಂಗ್ಸ್ ಗಳಲ್ಲಿ 1362 ರನ್ ಗಳಿಸಿರುವ ಅವರು ಅತಿಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ಐದು ಅರ್ಧಶತಕ ಹಾಗೂ ಐದು ಶತಕಗಳನ್ನು ಅವರು 2025ರಲ್ಲಿ ಸಿಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ: 23 ವರ್ಷಗಳ ಸುದೀರ್ಘ ಪಯಣ ಅಂತ್ಯ

ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಕ್ರಿಸ್ಟಿಯಾನೊ ರೊನಾಲ್ಡೊ ಅವರು...

ಭಾರತ-ನ್ಯೂಜಿಲೆಂಡ್‌ ODI: ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್‌; ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ...

ಭಾರತ – ನ್ಯೂಜಿಲೆಂಡ್ ಏಕದಿನ ಸರಣಿ: ಸಚಿನ್ ತೆಂಡೂಲ್ಕರ್ ದಾಖಲೆ ಮುರಿವ ಉತ್ಸಾಹದಲ್ಲಿ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ತಂಡ...

ಯುವ ಪಡೆಗೆ ಗಿಲ್ ಸಾರಥ್ಯ: ಕಿವೀಸ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಸಜ್ಜು

ಇತ್ತೀಚೆಗಷ್ಟೇ ಮುಕ್ತಾಯವಾದ ಐದು ಪಂದ್ಯಗಳ ಟಿ20 ಸರಣಿಯನ್ನು 3-2 ಅಂತರದಿಂದ ರೋಚಕವಾಗಿ...