ಸಿಡಿಲಬ್ಬರದ ಬ್ಯಾಟಿಂಗ್‌: ಹೊಸ ದಾಖಲೆ ಬರೆದ ಸ್ಮೃತಿ ಮಂಧಾನ

Date:

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 60 ರನ್‌ಗಳ ಭಾರಿ ಅಂತರದಿಂದ ಗೆದ್ದಿದೆ. ಆ ಗೆಲುವಿನಲ್ಲಿ 77 ರನ್ ಬಾರಿಸಿದ ಸ್ಮೃತಿ ಮಂಧಾನ ಪಾಲು ದೊಡ್ಡದಿದೆ. ಜೊತೆಗೆ ಚುಟುಕು ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೂಡ ಆಕೆಯ ಪಾಲಾಗಿದೆ.

- Advertisement -

ವಿಂಡೀಸ್ ವಿರುದ್ಧದ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕ ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತ್ಯಧಿಕ ಅರ್ಧ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎಂಬ ವಿಶ್ವ ದಾಖಲೆ ಸ್ಮೃತಿ ಮಂಧಾನ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮಿಥಾಲಿ ರಾಜ್ ಹೆಸರಿನಲ್ಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಮೊದಲು ಅತಿ ಹೆಚ್ಚು ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದ ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ಆಟಗಾರ್ತಿಯರು ಬರೆದಿದ್ದ ವಿಶ್ವ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

ಶ್ರೀಲಂಕಾ ಆಟಗಾರ್ತಿ ಚಾಮರಿ ಅಟಪಟ್ಟು ಈ ವರ್ಷ 21 ಪಂದ್ಯಗಳಲ್ಲಿ 720 ರನ್ ಕಲೆಹಾಕಿದ್ದಾರೆ. ಹಾಗೆಯೇ ನ್ಯೂಜಿಲೆಂಡ್‌ನ ಸುಝಿ ಬೆಟ್ಸ್, 29 ಬಾರಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಇದೀಗ ಈ ಇಬ್ಬರನ್ನೂ ಹಿಂದಿಕ್ಕಿ 30ನೇ ಬಾರಿ ಐವತ್ತಕ್ಕಿಂತ ಹೆಚ್ಚು ರನ್ ಕಲೆಹಾಕುವ ಮೂಲಕ ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನು ಓದಿದ್ದೀರಾ?: ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ಈ ವರ್ಷ 23 ಟಿ20 ಇನಿಂಗ್ಸ್ ಆಡಿರುವ ಸ್ಮೃತಿ ಮಂಧಾನ 8 ಅರ್ಧಶತಕಗಳೊಂದಿಗೆ 42.4 ಸರಾಸರಿಯಲ್ಲಿ ಒಟ್ಟು 763 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಸ್ಮೃತಿ ಮಂಧಾನ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ನ್ಯಾಟ್ ಸ್ಕಿವರ್-ಬ್ರಂಟ್, ಸೋಫಿ ಡಿವೈನ್ ಸೇರಿದಂತೆ 7 ಬ್ಯಾಟರ್​ಗಳು ಒಂದೇ ವರ್ಷ 3 ಏಕದಿನ ಶತಕಗಳನ್ನು ಬಾರಿಸಿದ್ದರು. ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಒಂದೇ ವರ್ಷ 4 ಏಕದಿನ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...