ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

Date:

ಭಾರತದ ಮಹಿಳಾ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಭಾನುವಾರ ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪ್ರಥಮ ಟಿ20 ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದರು. ಎಡಗೈ ಆರಂಭಿಕ ಆಟಗಾರ್ತಿ ವೃತ್ತಿಜೀವನದಲ್ಲಿ ಪ್ರಮುಖ ಮೈಲುಗಲ್ಲು ಸಾಧಿಸಿ, ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‍ನ ಎಲೈಟ್ ಕ್ಲಬ್‍ನಲ್ಲಿ ಸ್ಥಾನ ಪಡೆದರು.

- Advertisement -

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ 4,000 ರನ್ ಪೂರೈಸಿದ ಮೊಟ್ಟಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ಭಾರತೀಯ ಕ್ರಿಕೆಟ್‍ನಲ್ಲಿ ಬಲುದೊಡ್ಡ ಸಾಧನೆಯಾಗಿದೆ. ಒಟ್ಟಾರೆಯಾಗಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಮೈಲುಗಲ್ಲು ಸಾಧಿಸಿದ ಎರಡನೇ ಆಟಗಾರ್ತಿ ಎನಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ‘ಟೀಂ ಇಂಡಿಯಾ’ ಅಧಿಕೃತವಾಗಿ ಭಾರತವನ್ನು ಪ್ರತಿನಿಧಿಸದ ಖಾಸಗಿ ತಂಡ; ಬಿಸಿಸಿಐಗೆ ಬೀಳುವುದೇ ಸರ್ಕಾರಿ ಮೂಗುದಾರ?

ನ್ಯೂಜಿಲೆಂಡ್‍ನ ಆಟಗಾರ್ತಿ ಸೂಝಿ ಬೇಟ್ಸ್ 4,716 ರನ್‍ಗಳನ್ನು ಚುಟುಕು ಕ್ರಿಕೆಟ್‍ನಲ್ಲಿ ಕಲೆಹಾಕಿದ್ದು, ವಿಶ್ವದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸ್ಮೃತಿ ಮಂಧಾನ ಅವರ ದಾಖಲೆ ಮತ್ತೂ ವಿಶೇಷ ಎನಿಸಿರುವುದು ಏಕೆಂದರೆ ಅತ್ಯಂತ ವೇಗವಾಗಿ ಭಾರತೀಯ ಆಟಗಾರ್ತಿ ಈ ಸಾಧನೆ ಮಾಡಿದ್ದಾರೆ. ಸ್ಮೃತಿ ಮಂಧಾನ ಕೇವಲ 3,227 ಎಸೆತಗಳಲ್ಲಿ 4,000 ರನ್ ಗಳಿಸಿದ್ದು, ಬೇಟ್ಸ್ ಈ ಮೈಲುಗಲ್ಲು ತಲುಪಲು 3,675 ಎಸೆತಗಳನ್ನು ತೆಗೆದುಕೊಂಡಿದ್ದರು.

ಇದು ಟಿ20 ಕ್ರಿಕೆಟ್‍ನಲ್ಲಿ ಭಾರತೀಯ ಆಟಗಾರ್ತಿಯ ಸ್ಫೋಟಕ ಬ್ಯಾಟಿಂಗ್ ನಿರಂತರತೆಯನ್ನು ಸೂಚಿಸುತ್ತದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅವರು 25 ಎಸೆತಗಳಲ್ಲಿ 25 ರನ್ ಗಳಿಸಿದರು. 1,22 ರನ್‍ಗಳ ಗುರಿ ಬೆನ್ನಟ್ಟುವ ವೇಳೆ 9ನೇ ಓವರ್ ನಲ್ಲಿ ವಿಕೆಟ್ ಒಪ್ಪಿಸಿದರು. ಅವರ ಇನಿಂಗ್ಸ್ ಚುಟುಕಾದರೂ, ಐತಿಹಾಸಿಕ ಮೈಲುಗಲ್ಲು ತಲುಪಿರುವುದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...