ಏಕದಿನ ವಿಶ್ವಕಪ್ | ನೆದರ್‌ಲ್ಯಾಂಡ್ಸ್‌ ವಿರುದ್ಧ ಅಫ್ಘಾನಿಸ್ತಾನಕ್ಕೆ ಭರ್ಜರಿ ಜಯ; ಸೆಮಿಫೈನಲ್ ಆಸೆ ಇನ್ನೂ ಜೀವಂತ

Date:

ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಇಂದು ನಡೆದ ನೆದರ್‌ಲ್ಯಾಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಸೆಮಿಫೈನಲ್ ತಲುಪುವ ಆಸೆಯನ್ನೂ ಇನ್ನೂ ಜೀವಂತವಾಗಿರಿಸಿದೆ.

- Advertisement -

ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ತಂಡ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ 5ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಈವರೆಗೆ ಆಡಿದ ಏಳು ಪಂದ್ಯಗಳ ಪೈಕಿ ನಾಲ್ಕನ್ನು ಗೆದ್ದು, ಮೂರರಲ್ಲಿ ಸೋಲುವ ಮೂಲಕ ಎಂಟು ಅಂಕಗಳನ್ನು ಗಳಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಂದು ನಡೆದ ಟೂರ್ನಿಯ 34ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡ ಟಾಸ್ ಗೆದ್ದುಕೊಂಡು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ, ಅಫ್ಘಾನಿಸ್ತಾನ ತಂಡದ ಸರ್ವಾಂಗೀಣ ಆಟಕ್ಕೆ ಮಂಡಿಯೂರಿದ ನೆದರ್‌ಲ್ಯಾಂಡ್ಸ್‌ ಕೇವಲ 179 ರನ್‌ ಗಳಿಸಿ ಆಲೌಟ್ ಆಗಿತ್ತು.

180 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ, 31.3 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಅಫ್ಘಾನ್ ಪರ ರಹ್ಮತ್ ಶಾ 52(54 ಎಸೆತ, 8 ಬೌಂಡರಿ), ನಾಯಕ ಹಶ್ಮತುಲ್ಲಾ ಶಾಹಿದಿ ಔಟಾಗದೆ 56(64 ಎಸೆತ, 6 ಬೌಂಡರಿ) ಗಳಿಸುವ ಮೂಲಕ ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಅಝ್ಮತುಲ್ಲಾ ಒಮರ್ ಝಾಯ್ ಔಟಾಗದೆ 31(28 ಎಸೆತ, 3 ಬೌಂಡರಿ), ಝದ್ರಾನ್ 20 ಹಾಗೂ ಗುರ್ಬಾಝ್ 10 ರನ್ ಗಳಿಸಿದರು.

ನೆದರ್‌ಲ್ಯಾಂಡ್ಸ್‌ ಪರ ಬೌಲಿಂಗ್‌ನಲ್ಲಿ ಸಾಕಿಬ್, ವ್ಯಾನ್ ಬೀಕ್, ವ್ಯಾನ್ ಡರ್ವ್ ಮರ್ವೆ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಟಾಸ್ ಗೆದ್ದಿದ್ದ ನೆದರ್‌ಲ್ಯಾಂಡ್ಸ್‌
ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಟಾಸ್ ಗೆದ್ದಿದ್ದ ನೆದರ್‌ಲ್ಯಾಂಡ್ಸ್‌ ಬ್ಯಾಟಿಂಗ್ ಆಯ್ದುಕೊಂಡಿತ್ತು. ಕಠಿಣ ಗುರಿ ನೀಡಬೇಕು ಎಂಬ ಉದ್ದೇಶದಿಂದ ಬ್ಯಾಟಿಂಗ್ ಆಯ್ದುಕೊಂಡಿದ್ದ ಡಚ್ ಪಡೆ, ಅಫ್ಘಾನ್ ನ ಅದ್ಭುತ ಫೀಲ್ಡಿಂಗ್ ಗೆ ಪೆವಿಲಿಯನ್ ಸೇರಿಕೊಂಡಿತು.

ತಂಡ ನೂರೈವತ್ತು ದಾಟುವಲ್ಲಿ ಏಕಾಂಗಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೈಬ್ರಾಂಡ್ ಎಂಗಲ್ ಬ್ರೆಕ್ಟ್ 6 ಬೌಂಡರಿ ಸಹಿತ 58 ರನ್ ಬಾರಿಸಿ ತಂಡದ ಪರ ಅರ್ಧಶತಕ ದಾಖಲಿಸಿದರು. ಕೊನೆಯಲ್ಲಿ 46.3 ಓವರ್‌ಗಳಲ್ಲಿ ನೆದರ್‌ಲ್ಯಾಂಡ್ಸ್‌ ಕೇವಲ 179 ರನ್‌ ಗಳಿಸಿ ಆಲೌಟ್ ಆಗಿತ್ತು.

ಅಫ್ಘಾನಿಸ್ತಾನ ಪರ ಬೌಲಿಂಗ್‌ನಲ್ಲಿ ಮುಹಮ್ಮದ್ ನಬಿ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ಹಾಗೂ ಮುಜೀಬ್ ಉರ್ ರಹ್ಮಾನ್ 1 ಒಂದು ವಿಕೆಟ್ ಪಡೆದರು. ನಾಲ್ವರು ನೆದರ್‌ಲ್ಯಾಂಡ್ಸ್‌ ಆಟಗಾರರು ರನೌಟ್‌ಗೆ ಬಲಿಯಾಗಿದ್ದರು.

28 ರನ್ ನೀಡಿ ಮೂರು ವಿಕೆಟ್ ಗಳಿಸಿದ್ದ ಅಫ್ಘಾನಿಸ್ತಾನದ ಮುಹಮ್ಮದ್ ನಬಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...