ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

Date:

Advertisements

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಟಿ20 ಲೀಗ್ “ಎಸ್‌ಎ20” ಮುಂದಿನ ಆವೃತ್ತಿಯಲ್ಲಿ ಗಂಗೂಲಿಯನ್ನು “ಪ್ರಿಟೋರಿಯಾ ಕ್ಯಾಪಿಟಲ್ಸ್” ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಇದಕ್ಕೂ ಮುನ್ನ ಗಂಗೂಲಿ ಐಪಿಎಲ್ ಹಾಗೂ ಡಬ್ಲ್ಯುಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಇದರ ಜೊತೆಗೆ ಅವರು ಬಿಸಿಸಿಐ ಅಧ್ಯಕ್ಷರ ಹುದ್ದೆಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದರು. ಆದರೆ, ಇದೇ ಮೊದಲ ಬಾರಿಗೆ ಗಂಗೂಲಿ ವೃತ್ತಿಪರ ಕ್ರಿಕೆಟ್ ತಂಡವೊಂದಕ್ಕೆ ಪೂರ್ಣಕಾಲಿಕ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಜೊನಾಥನ್ ಟ್ರಾಟ್ ಕೋಚ್ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಗಂಗೂಲಿಯವರನ್ನು ನೇಮಕ ಮಾಡಲಾಗಿದೆ. “ಕೋಲ್ಕತ್ತಾ ರಾಜಕುಮಾರರಿಗೆ ಹೊಸ ಆರಂಭ. ನಮ್ಮ ಹೊಸ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿಯನ್ನು ಘೋಷಿಸುವಲ್ಲಿ ನಮಗೆ ತುಂಬಾ ಸಂತೋಷವಾಗಿದೆ” ಎಂದು ಪ್ರಿಟೋರಿಯಾ ಕ್ಯಾಪಿಟಲ್ಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಕಟಿಸಿದೆ.

Advertisements

ಇದನ್ನು ಓದಿದ್ದೀರಾ? ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

2012ರಲ್ಲಿ ಐಪಿಎಲ್ ನಿವೃತ್ತಿ ಘೋಷಿಸಿದ ನಂತರ, ಗಂಗೂಲಿ 2015ರಿಂದ 2019ರವರೆಗೆ ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು. 2019ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿ ನೇಮಕಗೊಂಡ ಅವರು ಅದೇ ವರ್ಷ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2022ರವರೆಗೆ ಆ ಹುದ್ದೆ ನಿರ್ವಹಿಸಿದ ನಂತರ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿ ಕ್ರಿಕೆಟ್ ನಿರ್ದೇಶಕರಾದರು.

ಮುಂದಿನ ಎಸ್‌ಎ20 ಟೂರ್ನಿ ಡಿಸೆಂಬರ್ 26, 2025ರಿಂದ ಜನವರಿ 25, 2026ರವರೆಗೆ ನಡೆಯಲಿದೆ. ಪ್ಲೇಆಫ್ ಪಂದ್ಯಗಳನ್ನು ಡರ್ಬನ್, ಸೆಂಚುರಿಯನ್ ಹಾಗೂ ಜೋಹಾನ್ಸ್‌ಬರ್ಗ್‌ನಲ್ಲಿ ಆಯೋಜಿಸಲಾಗಿದ್ದು, ಅಂತಿಮ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

Download Eedina App Android / iOS

X