T20 ವಿಶ್ವಕಪ್ | ಕೊನೆಗೂ ‘ಚೋಕರ್ಸ್’ ಹಣೆಪಟ್ಟಿಯಿಂದ ಮುಕ್ತಗೊಂಡ ದಕ್ಷಿಣ ಆಫ್ರಿಕಾ: ಅಫ್ಘಾನ್ ಸೋಲಿಸಿ ಫೈನಲ್‌ಗೆ

Date:

ಐಸಿಸಿಯ ಪ್ರಮುಖ ಟೂರ್ನಿಯ ಮಹತ್ವದ ಪಂದ್ಯಗಳಲ್ಲಿ ಸೋಲುವ ಮೂಲಕ ‘ಚೋಕರ್ಸ್’ ಹಣೆಪಟ್ಟಿ ತಲೆಗೆ ಕಟ್ಟಿಕೊಂಡಿದ್ದ ದಕ್ಷಿಣ ಆಫ್ರಿಕಾ ಕೊನೆಗೂ ಅದರಿಂದ ಮುಕ್ತಗೊಂಡಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಬರೆದಿದೆ.

- Advertisement -

ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಆಯೋಜನೆ ಆಗಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನದ ಎದುರು 9 ವಿಕೆಟ್‌ಗಳ ಗೆಲುವು ಕಾಣುವ ಮೂಲಕ ಫೈನಲ್‌ಗೆ ಚೊಚ್ಚಲ ಪ್ರವೇಶ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ?  T20 ವಿಶ್ವಕಪ್ | ಅಫ್ಘಾನಿಸ್ತಾನ ಕೈ ಹಿಡಿದ ಅದೃಷ್ಟ: ಬಾಂಗ್ಲಾ‌ ಮಣಿಸಿ ಸೆಮಿಫೈನಲ್‌ಗೆ ರಶೀದ್ ಖಾನ್ ಪಡೆ

ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟ್ ಮಾಡಿದ್ದು ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲವಾಗಿದ್ದು 11.5 ಓವರ್‌ಗಳಲ್ಲಿ 56 ರನ್‌ಗಳಿಗೆ ಆಲೌಟ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾರ್ಕೊ ಜಾನ್ಸೆನ್ ಮತ್ತು ತಬ್ರೇಜ್ ಶಮ್ಸಿ ತಲಾ 3 ವಿಕೆಟ್ ಪಡೆದರು.


ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 8.5 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಜಯ ಪಡೆದಿದೆ. ದಕ್ಷಿಣ ಆಫ್ರಿಕಾ ಪರ ರೆಜಾ ಹೆಂಡ್ರಿಕ್ಸ್‌ (ಅಜೇಯ 29) ಹಾಗೂ ಐಡೆನ್ ಮಾರ್ಕ್ರಾಮ್ (ಅಜೇಯ 23) ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ನೆರವಾಗಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ ಯಾವುದೇ ಮಾದರಿಯ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವುದು ಇದೇ ಮೊದಲು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...