ಏಕದಿನ ವಿಶ್ವಕಪ್ 2023 | ದಕ್ಷಿಣ ಆಫ್ರಿಕಾ ಮಾರಕ ಬೌಲಿಂಗ್; ಆಸ್ಟ್ರೇಲಿಯಾಗೆ 2ನೇ ಸೋಲು

Date:

ದಕ್ಷಿಣ ಆಫ್ರಿಕಾ ತಂಡದ ಸಂಘಟನಾತ್ಮಕ ಬೌಲಿಂಗ್‌ ದಾಳಿಯಿಂದ ತತ್ತರಗೊಂಡ ಆಸ್ಟ್ರೇಲಿಯಾ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ 10ನೇ ಪಂದ್ಯದಲ್ಲಿ ಸತತ ಎರಡನೇ ಸೋಲು ಕಂಡಿತು.

ಲಖನೌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 312 ರನ್‌ಗಳ ದೊಡ್ಡ ಮೊತ್ತದ ಸವಾಲನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 40.5 ಓವರ್‌ಗಳಲ್ಲಿ 177 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. 134 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಏಕದಿನ ವಿಶ್ವಕಪ್ ಟೂರ್ನಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದೆ.

ಮಾರಕ ಬೌಲಿಂಗ್‌ ಮಾಡಿದ ಕಗಿಸೊ ರಬಾಡ 33/3, ಕೇಶವ್ ಮಹಾರಾಜ್ 30/2, ತಬ್ರೈಜ್ ಶಮ್ಸಿ 38/2 ಹಾಗೂ 54/2 ವಿಕೆಟ್ ಕಬಳಿಸಿ ತಂಡದ ಗೆಲುವಿನ ರೂವಾರಿಯಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ನಸ್ ಲ್ಯಾಬುಸ್ಚಾಗ್ನೆ(46) ಹಾಗೂ ಮಿಚೆಲ್ ಸ್ಟಾರ್ಕ್ (27) ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಹರಿಣಗಳ ಬೌಲಿಂಗ್‌ ಮುಂದೆ ಆಟವಾಡಲು ಪರದಾಡಿದರು.

ಸತತ ಎರಡು ಶತಕ ಬಾರಿಸಿದ ಕ್ವಿಂಟನ್ ಡಿ ಕಾಕ್

ಈ ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫೀಲ್ಡಿಂಗ್‌ ಆಯ್ದುಕೊಂಡು ದಕ್ಷಿಣ ಆಫ್ರಿಕಾವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಆಸೀಸ್ ಬೌಲರ್‌ಗಳ ಬೆವರಿಳಿಸಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 311 ರನ್‌ ಕಲೆ ಹಾಕಿತು.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಜಯ್ ಶಾ ಪ್ರತಿಷ್ಠೆಯಿಂದ ಪ್ರೇಕ್ಷಕರಿಲ್ಲದ ಕ್ರೀಡಾಂಗಣಗಳು, ಕಳೆಗುಂದಿದ ಕ್ರಿಕೆಟ್

ಆರಂಭದಿಂದಲೇ ರಕ್ಷಣಾತ್ಮಕ ಆಟವಾಡಿದ ದಕ್ಷಿಣ ಆಫ್ರಿಕಾ ತಂಡದ ಬ್ಯಾಟ್ಸಮನ್‌ಗಳು ರನ್‌ ವೇಗ ಹೆಚ್ಚಿಸುತ್ತಾ ಹೋದರು. ಆರಂಭಿಕರಾದ ನಾಯಕ ಟೆಂಬಾ ಬವುಮಾ ಮತ್ತು ಕ್ವಿಂಟನ್‌ ಡಿಕಾಕ್‌ ಉತ್ತಮ ಅಡಿಪಾಯ ಹಾಕಿ ಕೊಟ್ಟರು. 35 ರನ್‌ ಗಳಿಸಿ ಬವುಮಾ 19.4 ಓವರ್‌ನಲ್ಲಿ ಮ್ಯಾಕ್ಸ್‌ವೆಲ್‌ಗೆ ವಿಕೆಟ್‌ ಒಪ್ಪಿಸಿದರು. ಆ ಮೂಲಕ ಡಿಕಾಕ್‌ ಜೊತೆಗಿನ ಶತಕದ (108) ಜೊತೆಯಾಟ ಅಂತ್ಯವಾಯಿತು.

ಮೂರನೇ ಕ್ರಮಾಂಕದಲ್ಲಿ ಬಂದ ಡಸ್ಸೆನ್ 26 ರನ್‌ ಗಳಿಸಿ ಆಡಂ ಜಂಪಾಗೆ ವಿಕೆಟ್‌ ನೀಡಿದರು. ಸ್ಪೋಟಕ ಆಟ ಮುಂದುವರೆಸಿದ ಕ್ವಿಂಟನ್‌ ಡಿಕಾಕ್‌ ಕೇವಲ 91 ಎಸೆತಗಳಲ್ಲಿ 100 ರನ್‌ ಪೂರೈಸುವ ಮೂಲಕ ವಿಶ್ವಕಪ್‌ನಲ್ಲಿ ಸತತ ಎರಡನೇ ಶತಕ ಬಾರಿಸಿದರು. ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧವೂ ಶತಕ ಸಿಡಿಸಿದ್ದ ಡಿಕಾಕ್‌, ಇಂದು ಮತ್ತೆ ಆಸೀಸ್‌ ವಿರುದ್ಧವು ಶತಕ ಗಳಿಸಿ 109(106) ಔಟಾದರು.

ಡಿಕಾಕ್‌ ಔಟಾದ ಬಳಿಕ ಅಬ್ಬರಿಸಿದ ಐಡೆನ್‌ ಮರ್ಕ್ರಾಮ್‌, ಆಕರ್ಷಕ ಅರ್ಧಶತಕ (56) ಸಿಡಿಸಿ ಪೆವಿಲಿಯನ್‌ ಸೇರಿಕೊಂಡರು. ಕ್ಲಾಸೆನ್‌ ಆಟ 29 ರನ್‌ಗಳಿಗೆ ಅಂತ್ಯವಾಯಿತು. ಜಾನ್ಸೆನ್‌ 26 ರನ್‌ ಗಳಿಸಿದರೆ, ಮಿಲ್ಲರ್‌ 17 ರನ್‌ ಗಳಿಸಿದ ಪರಿಣಾಮ ದಕ್ಷಿಣ ಆಫ್ರಿಕಾ 300ರ ಗಡಿ ದಾಟಲು ಸಾಧ್ಯವಾಯಿತು.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 53/2 ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 34/2 ವಿಕೆಟ್ ಗಳಿಸಿದರೆ ಆಡಮ್ ಝಂಪಾ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...