10 ವರ್ಷದ ಹಿಂದಿನ ವಿವಾದಾತ್ಮಕ ಟ್ವೀಟ್: ಭಾರತ ತೊರೆದ ಪಾಕ್‌ ಮೂಲದ ಕ್ರೀಡಾ ನಿರೂಪಕಿ

Date:

10 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿ, ಕ್ರಿಕೆಟ್‌ ವಿಶ್ವಕಪ್‌ಗಾಗಿ ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಬಂದಿದ್ದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರು ಭಾರತ ತೊರೆದಿರುವ ಘಟನೆ ವರದಿಯಾಗಿದೆ.

- Advertisement -

‘ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರನ್ನು ವಿವಾದಿತ ಪ್ರಕರಣದಲ್ಲಿ ಭಾರತದಿಂದ ಗಡಿಪಾರು ಮಾಡಲಾಗಿದೆ’ ಎಂದು ಸೋಮವಾರ ಮಧ್ಯಾಹ್ನ ಪಾಕಿಸ್ತಾನಿ ಟಿವಿ ನ್ಯೂಸ್ ಚಾನೆಲ್ ‘ಸಮಾ’ ಹೇಳಿಕೊಂಡಿತ್ತು. ಆ ಬಳಿಕ ವಿವಾದಾತ್ಮಕ ಟ್ವೀಟ್‌ಗಳ ಕಾರಣಕ್ಕೆ ಭದ್ರತೆಯ ದೃಷ್ಟಿಯಿಂದ ಭಾರತ ತೊರೆದಿದ್ದಾರೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌, 2023ರ ಕ್ರಿಕೆಟ್‌ ಏಕದಿನ ವಿಶ್ವಕಪ್‌ ಟೂರ್ನಿಯ ನಿರೂಪಣೆಗಾಗಿ ಇತ್ತೀಚೆಗೆ ಭಾರತಕ್ಕೆ ಬಂದಿದ್ದರು.

10 ವರ್ಷಗಳ ಹಿಂದೆ ಅವರು ತಮ್ಮ ಟ್ವಿಟರ್‌ ಹ್ಯಾಂಡಲ್‌ನಿಂದ ಭಾರತ ಮತ್ತು ಹಿಂದೂ ಧರ್ಮವನ್ನು ಟೀಕಿಸಿ ಮಾಡಿದ್ದ ಟ್ವೀಟ್‌ಗಳೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

‘ನಾವು ಅತಿಥಿ ದೇವೋಭವ ಎಂದು ಎಲ್ಲ ಅತಿಥಿಗಳನ್ನು ಸ್ವಾಗತಿಸುತ್ತೇವೆ. ಆದರೆ ಕೆಲವೊಂದು ಅತಿಥಿಗಳು ಅದಕ್ಕೆ ಅರ್ಹರಲ್ಲ. ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ನಾವೂ ಗೌರವ ನೀಡುತ್ತೇವೆ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳಿಗೆ ಸ್ವಾಗತವಿಲ್ಲ. ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರು ಈ ಹಿಂದೆ ಭಾರತ ವಿರೋಧಿ ಹಾಗೂ ಹಿಂದೂ ಧರ್ಮದ ವಿರುದ್ಧವಾಗಿ ಟ್ವೀಟ್ ಮಾಡಿ ಅವಮಾನಿಸಿದ್ದಾರೆ. ಹಾಗಾಗಿ, ಅವರಿಗೂ ಸ್ವಾಗತವಿಲ್ಲ. 2023ರ ವಿಶ್ವಕಪ್‌ ನಿರೂಪಣೆಯಿಂದ ಅವರನ್ನು ತೆಗೆದು ಹಾಕಬೇಕು’ ಎಂದು ಹಳೆಯ ವಿವಾದಾತ್ಮಕ ಟ್ವೀಟ್‌ಗಳನ್ನು ಉಲ್ಲೇಖಿಸಿ ವಿನೀತ್ ಜಿಂದಾಲ್ ಎಂಬ ವಕೀಲ ಬಿಸಿಸಿಐಗೆ ದೂರು ಸಲ್ಲಿಸಿದ್ದರು.

ಆ ಬಳಿಕ ಈ ಕುರಿತಾಗಿ ದೆಹಲಿಯ ಸೈಬರ್‌ ಕ್ರೈಮ್‌ ಪೊಲೀಸರಿಗೂ ವಿನೀತ್ ಜಿಂದಾಲ್ ದೂರು ನೀಡಿದ ಹಿನ್ನೆಲೆಯಲ್ಲಿ ಅವರು ಭಾರತ ತೊರೆದಿದ್ದಾರೆ ಎಂದು ತಿಳಿದುಬಂದಿದೆ.

35 ವರ್ಷದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರ ವಿರುದ್ಧ ಈ ದೂರು ಬಂದ ಬೆನ್ನಲ್ಲೇ, ಸುರಕ್ಷತೆಯ ದೃಷ್ಟಿಯಿಂದ ಭಾರತ ಬಿಟ್ಟು ತೆರಳುವಂತೆ ಬಿಸಿಸಿಐ ಸೂಚಿಸಿರುವುದಾಗಿ ತಿಳಿದುಬಂದಿದೆ.

ಮೊದಲು ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದ ಪಾಕಿಸ್ತಾನದ ಸಮಾ ಟಿವಿ ಆ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದು, ಭದ್ರತೆಯ ದೃಷ್ಟಿಯಿಂದ ಜೈನಬ್ ಭಾರತವನ್ನು ತೊರೆದಿದ್ದಾರೆ. ಪ್ರಸ್ತುತ ಅವರು ದುಬೈನಲ್ಲಿದ್ದಾರೆ’ ಎಂದು ವರದಿ ಮಾಡಿದೆ.

ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸುವ ಮೊದಲು ಟ್ವೀಟ್‌ ಮಾಡಿದ್ದ ಜೈನಾಬ್ ಅಬ್ಬಾಸ್, ‘ಎರಡೂ ದೇಶಗಳ ವ್ಯತಿರಿಕ್ತ ನಂಬಿಕೆಗಳ ಹೊರತಾಗಿಯೂ ಭಾರತದ ಸಂಸ್ಕೃತಿಯನ್ನು ಅನ್ವೇಷಿಸಲು ಉತ್ಸುಕನಾಗಿದ್ದೇನೆ. ಮುಂದಿನ ಆರು ವಾರಗಳ ಕಾಲ ಅದಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು. ಈ ನಡುವೆಯೇ ಈ ರೀತಿಯ ಬೆಳವಣಿಗೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...