ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಹೈದರಾಬಾದ್: ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್!

Date:

ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡ ನಸೀಬೇ ಸರಿ ಇಲ್ಲದಂತೆ ಕಂಡು ಬರುತ್ತಿದೆ. ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಪಡೆದಿದ್ದು, ಐದರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

- Advertisement -

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ನಡೆದ 7ನೇ ಪಂದ್ಯದಲ್ಲೂ ಕೂಡ ಬೌಲಿಂಗ್ ವಿಭಾಗ ಕೈಕೊಟ್ಟಿದೆ. ಪರಿಣಾಮವಾಗಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 287 ರನ್‌ಗಳನ್ನು ಕಲೆ ಹಾಕಿದೆ. ಆ ಮೂಲಕ ಇದೇ ಸೀಸನ್‌ನಲ್ಲಿ ಮುಂಬೈ ವಿರುದ್ಧ ದಾಖಲಿಸಿದ್ದ 277 ರನ್‌ಗಳ ದಾಖಲೆಯನ್ನು ಮುರಿದು ಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಂದು ನಡೆಯುತ್ತಿರುವ ಐಪಿಎಲ್‌ನ 30ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿದ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ, ಹೈದರಾಬಾದ್‌ ಅನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರ ಉಲ್ಟಾ ಹೊಡೆಯಿತು.

ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ತಂಡದ ಬ್ಯಾಟರ್‌ಗಳ ಅಬ್ಬರದಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 287 ರನ್‌ಗಳನ್ನು ದಾಖಲಿಸಿದೆ. ಇದು 17 ವರ್ಷದ ಐಪಿಎಲ್‌ನ ಇತಿಹಾಸದಲ್ಲೇ ತಂಡ ಬೃಹತ್ ಮೊತ್ತವಾಗಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಮಾ.27ರಂದು ನಡೆದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಇತಿಹಾಸ ಸೃಷ್ಟಿಸಿತ್ತು. ಈಗ ತಮ್ಮದೇ ದಾಖಲೆಯನ್ನು ಹೈದರಾಬಾದ್ ತಂಡ ಮುರಿದು ಹಾಕಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಆರ್‌ಸಿಬಿ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 41 ಎಸೆತಗಳಲ್ಲಿ 102(9 ಬೌಂಡರಿ, 8 ಸಿಕ್ಸರ್) ಗಳಿಸಿದರು. ಇದು ಐಪಿಎಲ್ ಇತಿಹಾಸದಲ್ಲೇ 4ನೇ ಅತಿ ವೇಗದ ಶತಕವಾಗಿದೆ.

ಅಭಿಷೇಕ್‌ ಶರ್ಮಾ ಜೊತೆಗೆ ಇನ್ನಿಂಗ್ಸ್‌ ಆರಂಭಿಸಿದ್ದ ಹೆಡ್, ಮೊದಲ ವಿಕೆಟ್‌ಗೆ 108 ರನ್‌ಗಳ ಜೊತೆಯಾಟ ನಡೆಸುವ ಮೂಲಕ ಭರ್ಜರಿ ಆರಂಭ ಒದಗಿಸಿದರು. ಅಲ್ಲದೆ ಪವರ್ ಪ್ಲೇನಲ್ಲಿ ಈ ಇಬ್ಬರು 76 ರನ್ ಕಲೆಹಾಕಿದರು.

ಹೆನ್ರಿಕ್ ಕ್ಲಾಸೆನ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 67 ರನ್ ಬಾರಿಸಿದರು. ಉಳಿದಂತೆ ಹೈದರಾಬಾದ್ ಪರ ಅಭಿ‍ಷೇಕ್ ಶರ್ಮಾ 34 ರನ್, ಐಡೆನ್ ಮಾರ್ಕ್ರಾಮ್ 17 ಎಸೆತಗಳಲ್ಲಿ 32 ರನ್ ಹಾಗೂ ಅಬ್ದುಲ್ ಸಮದ್ 10 ಎಸೆತಗಳಲ್ಲಿ 37 ರನ್ ಕಲೆ ಹಾಕಿದರು.

ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಎಲ್ಲ ಬೌಲರ್‌ಗಳು ದುಬಾರಿ ಎನಿಸಿಕೊಂಡರು. ರೀಸ್ ಟಾಪ್ಲಿ 68 ರನ್ ನೀಡಿ 1 ವಿಕೆಟ್ ಪಡೆದುಕೊಂಡರೆ, ಫರ್ಗೂಸನ್ 52ಕ್ಕೆ 2 ವಿಕೆಟ್ ಪಡೆಯುವಲ್ಲಿ ಸಫಲರಾದರು. ವಿಜಯ್‌ ಕುಮಾರ್ ವೈಶಾಖ್ 64 ರನ್ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...