ಐಪಿಎಲ್ 16ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಜಯ ಸಾಧಿಸಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ಒಡ್ಡಿದ್ದ 122 ರನ್‌ಗಳ ಸುಲಭ ಸವಾಲನ್ನು ರಾಹುಲ್ ಪಡೆ 16 ಓವರ್‌ಗಳಲ್ಲೇ ಚೇಸ್ ಮಾಡಿತು.
ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಆಡಿದ 3ನೇ ಪಂದ್ಯದಲ್ಲಿ 2ನೇ ಗೆಲುವು ದಾಖಲಿಸಿತು. ಆದರೆ ನೀರಸ ಪ್ರದರ್ಶನ ಮುಂದುವರಿಸಿದ ಸನ್ ರೈಸರ್ಸ್ ಹೈದರಾಬಾದ್ ಸತತವಾಗಿ ಎರಡನೇ ಪಂದ್ಯದಲ್ಲೂ ಸೋಲು ಕಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಏಡನ್ ಮಾರ್ಕಮ್ ಪಡೆ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 121 ರನ್‌ಗಳಿಸಿತ್ತು.
ಆರಂಭಿಕ ಆನ್ ಮೋಲ್ ಪ್ರೀತ್ 31 ಮತ್ತು ರಾಹುಲ್ ತ್ರಿಪಾಠಿ 34 ರನ್‌ಗಳ ಕೊಡುಗೆ ನೀಡಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದವರು ಪೆವಿಲಿಯನ್ ಪರೇಡ್ ನಡೆಸಿದರು.