KKR-SRH ನಡುವೆ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ; ಗೆದ್ದವರು ಫೈನಲ್‌ಗೆ; ಸೋತವರಿಗೆ ಮತ್ತೆ ಅವಕಾಶ!

Date:

ಈಗಾಗಲೇ 17ನೇ ಆವೃತ್ತಿಯ ಐಪಿಎಲ್​ನ ಎಲ್ಲ ಲೀಗ್‌ ಪಂದ್ಯಗಳು ಕೊನೆಗೊಂಡಿದ್ದು, ಚಾಂಪಿಯನ್ ಪಟ್ಟಕ್ಕಾಗಿ ನಡೆಯಲಿರುವ ಫೈನಲ್ ಪಂದ್ಯ ಸೇರಿ ಒಟ್ಟು ನಾಲ್ಕು ಮಹತ್ವದ ಪಂದ್ಯಗಳಷ್ಟೇ ಬಾಕಿ ಇದೆ.

- Advertisement -

ಈಗಾಗಲೇ 70 ಲೀಗ್ ಪಂದ್ಯಗಳ ಪೈಕಿ 67 ಲೀಗ್ ಪಂದ್ಯಗಳು ಫಲಿತಾಂಶ ಕಂಡಿದ್ದರೆ, ಮಳೆಯಿಂದಾಗಿ ಮೂರು ಪಂದ್ಯಗಳು ರದ್ದಾಗಿದ್ದವು. ಗುಜರಾತ್-ಕೆಕೆಆರ್, ಲಕ್ನೋ-ಗುಜರಾತ್ ಮತ್ತು ಕೆಕೆಆರ್-ರಾಜಸ್ಥಾನ ತಂಡಗಳ ನಡುವೆ ನಡೆಯಬೇಕಿದ್ದ ಲೀಗ್ ಪಂದ್ಯಗಳು ಮಳೆಗಾಹುತಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲೀಗ್ ಪಂದ್ಯಗಳ ಬಳಿಕ ಒಟ್ಟು ನಾಲ್ಕು ತಂಡಗಳು ಪ್ಲೇ ಆಫ್‌ಗೆ ಪ್ರವೇಶಿಸಿದೆ. ಮೊದಲ ತಂಡವಾಗಿ ಕೊಲ್ಕತ್ತಾ ನೈಟ್ ರೈಡರ್ಸ್‌ ಪ್ರವೇಶಿಸಿದ್ದರೆ, ಸನ್‌ರೈಸರ್ಸ್‌ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ರಮವಾಗಿ 2,3,4ನೇ ತಂಡವಾಗಿ ಈಗಾಗಲೇ ಪ್ಲೇ ಆಫ್‌ ಪ್ರವೇಶಿಸಿದೆ.

ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್​ ತಂಡ ಕಣಕ್ಕಿಳಿಯಲಿದೆ. ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು, ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯ ಹಾಗೂ ಎಲಿಮಿನೇಟರ್ ಎರಡೂ ಪಂದ್ಯಗಳು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂದು (ಮೇ 21) ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದವರು ಫೈನಲ್‌ಗೆ ಹೋದರೆ, ಸೋತವರಿಗೆ ಮತ್ತೊಂದು ಅವಕಾಶ ಸಿಗಲಿದೆ. ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದವರು ನೇರವಾಗಿ ಫೈನಲ್ ಪ್ರವೇಶಿಸಿದರೆ, ಸೋತವರಿಗೆ ಮತ್ತೊಂದು ಅವಕಾಶ ಸಿಗಲಿದೆ. ನಾಳೆ(ಮೇ 22) ಇದೇ ಮೈದಾನದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್‌ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಜಯ ಗಳಿಸಿದವರು, ಮೇ 24ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡವನ್ನು ಎದುರಿಸಲಿದ್ದಾರೆ.

ಮಳೆಯ ಭೀತಿ ಇದೆಯೇ?

ಅಹಮದಾಬಾದ್‌ನಲ್ಲಿ ಪಂದ್ಯ ನಡೆಯುವ ಮಂಗಳವಾರ ಯಾವುದೇ ಮಳೆ ಇಲ್ಲ. ಪಂದ್ಯದ ವೇಳೆ ಅಹಮಾದಾಬಾದ್‌ನಲ್ಲಿ 31 ರಿಂದ 37 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಆದರೆ, ಪಂದ್ಯದ ಎರಡನೇ ಇನಿಂಗ್ಸ್‌ನ ವೇಳೆ ಇಬ್ಬನಿ ಇರಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ನಡುವಿನ ಮೊದಲನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಯಾವುದೇ ಮೀಸಲು ದಿನ ನಿಗದಿಪಡಿಸಿಲ್ಲ. ಒಂದು ವೇಳೆ ಅನಿರೀಕ್ಷಿತವಾಗಿ ಮಳೆಯಾಗಿ ಪಂದ್ಯ ರದ್ದಾದರೆ, ಲೀಗ್‌ ಹಂತದಲ್ಲಿ ಹೆಚ್ಚಿನ ಅಂಕಗಳನ್ನು ಕಲೆ ಹಾಕಿರುವ ತಂಡ ಫೈನಲ್‌ಗೆ ಪ್ರವೇಶಿಸಲಿದೆ. ಅಂದರೆ 20 ಅಂಕ ಕಲೆ ಹಾಕಿರುವ ಕೆಕೆಆರ್‌, 17 ಅಂಕ ಹೊಂದಿರುವ ಎಸ್‌ಆರ್‌ಎಚ್‌ ತಂಡವನ್ನು ಹಿಂದಿಕ್ಕಿ ಫೈನಲ್‌ಗೇರಲಿದೆ.

2023ರಲ್ಲಿ ಪ್ಲೇ ಆಫ್‌ಗೇರಿದ್ದ 4 ತಂಡಗಳೂ ಈ ಬಾರಿ ಪ್ಲೇ-ಆಫ್‌ಗೇರಲು ವಿಫಲ!

2023ರ ಐಪಿಎಲ್‌ನಲ್ಲಿ ಪ್ಲೇ-ಆಫ್ ಪ್ರವೇಶಿದ್ದ 4 ತಂಡಗಳೂ ಈ ಬಾರಿ ಪ್ಲೇ-ಆಫ್‌ಗೇರಲು ವಿಫಲವಾಗಿದೆ. ಬೇರೆ 4 ತಂಡಗಳು ನಾಕೌಟ್ ಪ್ರವೇಶಿಸಿವೆ.

ಕಳೆದ ವರ್ಷ ಗುಜರಾತ್, ಚೆನ್ನೈ, ಲಕ್ನೋ ಹಾಗೂ ಮುಂಬೈ ಅಗ್ರ ನಾಲ್ಕರಲ್ಲಿ ಸ್ಥಾನ ಗಿಟ್ಟಿಸಿ ಪ್ಲೇ-ಆಫ್‌ಗೇರಿದ್ದವು. ಫೈನಲ್‌ನ ಗುಜರಾತ್‌ನ ಮಣಿಸಿ ಚೆನ್ನೈ ಚಾಂಪಿಯನ್ ಆಗಿತ್ತು.

ಈ ಬಾರಿ ಕೋಲ್ಕತಾ, ರಾಜಸ್ಥಾನ, ಹೈದರಾಬಾದ್ ಹಾಗೂ ಆರ್‌ಸಿಬಿ ಪ್ಲೇ-ಆಫ್‌ಗೇರಿವೆ. ಈ ಪೈಕಿ ಕೋಲ್ಕತಾ 2, ರಾಜಸ್ಥಾನ, ಹೈದರಾಬಾದ್ ತಲಾ 1 ಬಾರಿ ಪ್ರಶಸ್ತಿ ಗೆದ್ದಿದೆ. ಆರ್‌ಸಿಬಿ ತಂಡವು 2009, 2011 ಹಾಗೂ 2016ರಲ್ಲಿ ಸೇರಿ ಒಟ್ಟು ಮೂರು ಬಾರಿ ಫೈನಲ್ ಪ್ರವೇಶಿಸಿದ್ದರೂ, ಒಂದು ಬಾರಿಯೂ ಚಾಂಪಿಯನ್ ಆಗಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...