ವಿಶ್ವಕಪ್ ಕ್ರಿಕೆಟ್ | ಹೋರಾಡಿ ಹೀನಾಯ ಸೋಲು ತಪ್ಪಿಸಿಕೊಂಡ ಲಂಕನ್ನರು: ದೆಹಲಿಯಲ್ಲಿ ರನ್‌ಗಳ ಸುರಿಮಳೆ

Date:

ದಕ್ಷಿಣ ಆಫ್ರಿಕಾ ನೀಡಿದ್ದ 429 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ, ಸಮರ್ಥವಾದ ಹೋರಾಟ ನೀಡಿದ ಹೊರತಾಗಿಯೂ 102 ರನ್‌ಗಳಿಂದ ಸೋಲನುಭವಿಸಿದೆ.

- Advertisement -

ಬೃಹತ್ ಗುರಿಯನ್ನು ಬೆನ್ನಟ್ಟಿದ ಲಂಕನ್ನರು 44.5 ಓವರ್‌ಗಳಲ್ಲಿ 326 ರನ್‌ ಗಳಿಸಿ ಆಲೌಟಾಗುವುದರೊಂದಿಗೆ 102 ರನ್‌ಗಳಿಂದ ಸೋಲನುಭವಿಸಿದರು. ವಿಶ್ವಕಪ್‌ನ ಇಂದಿನ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಗಿದ್ದು, ಇದಕ್ಕೆ ದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣವು ಸಾಕ್ಷಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಶ್ರೀಲಂಕಾ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದ ನಿಸ್ಸಾಂಕ ಹಾಗೂ ಕುಸಾಲ್ ಪೆರೇರಾ ಜೋಡಿ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ಎರಡನೇ ಇನ್ನಿಂಗ್ಸ್‌ನ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ನಿಸ್ಸಾಂಕ ಕ್ಲೀನ್ ಬೌಲ್ದ್ ಆಗುವ ಮೂಲಕ ಜಾನ್‌ಸೆನ್‌ಗೆ ವಿಕೆಟ್ ಒಪ್ಪಿಸಿದರು.

ಆ ಬಳಿಕ ಕ್ರೀಸ್‌ಗೆ ಬಂದ ಕುಸಾಲ್ ಮೆಂಡಿಸ್ ಭರ್ಜರಿ ಸಿಕ್ಸ್, ಬೌಂಡರಿಗಳ ಮೂಲಕ ದಕ್ಷಿಣ ಆಫ್ರಿಕಾ ಬೌಲರ್‌ಗಳ ಬೆವರಿಳಿಸಿದರು. ಕೊನೆಗೆ 42 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 8 ಸಿಕ್ಸ್‌ನ ನೆರವಿನಿಂದ 76 ರನ್ ಗಳಿಸಿ ಔಟಾದರು. ಆ ಬಳಿಕ ಚರಿತ್ ಅಸಲಂಕ 79, ನಾಯಕ ದಾಸುನ್ ಶಾನಕ 68 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಆ ಮೂಲಕ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಹೀನಾಯ ಸೋಲಿನಿಂದ ತಪ್ಪಿಸಿಕೊಂಡರು.

ಕೊನೆಯಲ್ಲಿ ಶ್ರೀಲಂಕಾ 44.5 ಓವರ್‌ಗಳಲ್ಲಿ 326 ರನ್‌ಗಳಿಗೆ ಆಲೌಟಾಯಿತು.


ದಕ್ಷಿಣ ಆಫ್ರಿಕಾ 428 ರನ್ ಹಾಗೂ ಶ್ರೀಲಂಕಾದ 326 ರನ್‌ ಒಟ್ಟು 754 ರನ್‌ ದಾಖಲಾಗಿದ್ದು, ಇದು ವಿಶ್ವಕಪ್‌ನ ಒಂದೇ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...