ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯವಾಗಿದ್ದಾರೆ.
ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಯಾಗಿದೆ.
ಅಸಹಜ ಸಾವು ಎಂದು ಪ್ರಕರಣ ದಾಖಲು
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಯುಡಿಆರ್ (ಅಸಹಜ ಸಾವು) ಪ್ರಕರಣಗಳು ದಾಖಲಾಗಿವೆ.
ಕಾಲ್ತುಳಿತ ಘಟನೆಯಲ್ಲಿ ಭೂಮಿಕ್ (20), ಸಹನಾ (19), ಪೂರ್ಣಚಂದ್ರ (32), ಚಿನ್ಮಯಿ (19), ದಿವ್ಯಾಂಶಿ (13), ಶ್ರವಣ್ (20), ದೇವಿ (19) ಶಿವಲಿಂಗ್ (17) ಮನೋಜ್ (33), ಅಕ್ಷತಾ ಸೇರಿ 11 ಮಂದಿ ಮೃತಪಟ್ಟಿದ್ದರು. ಪ್ರತ್ಯೇಕ ಯುಡಿಆರ್ ಪ್ರಕರಣಗಳು ದಾಖಲಾಗಿವೆ.
ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಹೊಣೆ ಮಾಡಿಲ್ಲ. ಅಸಹಜ ಸಾವು ಪ್ರಕರಣ ಎಂದಷ್ಟೇ ದಾಖಲು ಮಾಡಿಕೊಂಡಿದ್ದಾರೆ. ಕ್ರಮ ಕೈಗೊಳ್ಳದೇ ಕಾರ್ಯಕ್ರಮ ಆಯೋಜಿಸಿದ್ದರವನ್ನು ಹೊಣೆ ಮಾಡಿ ಎಫ್‌ಐಆರ್ ದಾಖಲಿಸಬೇಕು ಎಂದು ಮೃತರ ಕುಟುಂಬದವರು ಆಗ್ರಹಿಸಿದ್ದಾರೆ.