ಕೃತಿಸ್ವಾಮ್ಯ ಉಲ್ಲಂಘನೆ: ಸಿಎಸ್‌ಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸನ್ ಟಿವಿ

Date:

ಮುಂಬರುವ ಐಪಿಎಲ್ 2026ರ ಜೆರ್ಸಿ ಬಿಡುಗಡೆಯ ಪ್ರೋಮೋ ವಿಡಿಯೊದಲ್ಲಿ ತಮ್ಮ ಒಡೆತನದ ‘ಜೈಲರ್’, ‘ಜೈಲರ್-2’ ಮತ್ತು ‘ಕೂಲಿ’ ಚಿತ್ರಗಳ ಸಂಗೀತ ಹಾಗೂ ಸಂಭಾಷಣೆಯನ್ನು ಅಕ್ರಮವಾಗಿ ಬಳಸಲಾಗಿದೆ ಎಂದು ಆರೋಪಿಸಿ ಸನ್ ಟಿವಿ ನೆಟ್‌ವರ್ಕ್, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.

- Advertisement -

ಸನ್ ಟಿವಿ ನೆಟ್‌ವರ್ಕ್ ಲಿಮಿಟೆಡ್‌ ಹೂಡಿರುವ ಈ ಸಿವಿಲ್ ದಾವೆಯಲ್ಲಿ ಸಿಎಸ್‌ಕೆ ಕ್ರಿಕೆಟ್ ಲಿಮಿಟೆಡ್ (CSKL) ಹಾಗೂ ಅದರ ಪ್ರಮುಖ ಅಧಿಕಾರಿಗಳಾದ ಸಿಇಒ ಕಾಶಿ ವಿಶ್ವನಾಥನ್, ಹಣಕಾಸು ಮುಖ್ಯಸ್ಥ ಅವಿನಾಶ್ ಶ್ರೀಧರನ್ ಮತ್ತು ಕಂಟೆಂಟ್ ಮುಖ್ಯಸ್ಥ ರಾಧಾಕೃಷ್ಣನ್ ಶ್ರೀನಿವಾಸನ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಸೂಕ್ತ ಪರವಾನಗಿ ಪಡೆಯದೆ, ತಮ್ಮ ಕೃತಿಸ್ವಾಮ್ಯ (ಕಾಪಿರೈಟ್) ಹೊಂದಿರುವ ಸಂಗೀತವನ್ನು ಸಿಎಸ್‌ಕೆ ಬಳಸಿಕೊಂಡಿದೆ ಎಂಬುದು ಸನ್ ಟಿವಿಯ ಪ್ರಮುಖ ಆರೋಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಾರ್ಚ್ 1ರಂದು ಸಿಎಸ್‌ಕೆ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಾದ ಇನ್‌ಸ್ಟಾಗ್ರಾಮ್, ಎಕ್ಸ್ (ಟ್ವಿಟರ್), ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ 2026ರ ಐಪಿಎಲ್ ಜೆರ್ಸಿ ಬಿಡುಗಡೆಯ ಪ್ರೋಮೋವನ್ನು ಹಂಚಿಕೊಂಡಿತ್ತು. ಈ ವಿಡಿಯೊದಲ್ಲಿ ಎಂ.ಎಸ್. ಧೋನಿ ಆಗಮನದ ದೃಶ್ಯಗಳಿಗೆ ಸನ್ ಪಿಕ್ಚರ್ಸ್ ನಿರ್ಮಾಣದ, ಅನಿರುದ್ಧ್ ರವಿಚಂದರ್ ಸಂಗೀತವಿರುವ ರಜನಿಕಾಂತ್ ಅಭಿನಯದ ‘ಜೈಲರ್’, ‘ಜೈಲರ್-2’ ಹಾಗೂ ‘ಕೂಲಿ’ ಚಿತ್ರಗಳ ಹಾಡುಗಳು, ಹಿನ್ನೆಲೆ ಸಂಗೀತ ಮತ್ತು ಡೈಲಾಗ್ಸ್‌ಗಳನ್ನು ಬಳಸಿಕೊಳ್ಳಲಾಗಿತ್ತು. ಆನ್‌ಲೈನ್‌ನಲ್ಲಿ ಸುಮಾರು ₹2,399 ಬೆಲೆ ಹೊಂದಿರುವ ಈ ಜೆರ್ಸಿಯ ಪ್ರಚಾರದ ತೂಕವನ್ನು ಹೆಚ್ಚಿಸಲು ಮತ್ತು ವಾಣಿಜ್ಯ ಲಾಭಕ್ಕಾಗಿ ಸಿಎಸ್‌ಕೆ ಈ ಕೃತಿಸ್ವಾಮ್ಯ ಉಲ್ಲಂಘನೆ ಮಾಡಿದೆ ಎಂದು ಸನ್ ಟಿವಿ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ನೆತನ್ಯಾಹು ಬದುಕಿದ್ದಾರಾ? ಇರಾನ್ ರಣಕಹಳೆಗೆ ತತ್ತರಿಸಿದ ಇಸ್ರೇಲ್

ಈ ಕೃತಿಸ್ವಾಮ್ಯ ಉಲ್ಲಂಘನೆಯ ಹಿನ್ನೆಲೆಯಲ್ಲಿ, ಸಿಎಸ್‌ಕೆ ಯಾವುದೇ ಮಾಧ್ಯಮಗಳಲ್ಲಿ ತಮ್ಮ ಚಿತ್ರದ ಹಾಡುಗಳು, ಸಂಭಾಷಣೆ ಅಥವಾ ಹಿನ್ನೆಲೆ ಸಂಗೀತವನ್ನು ಬಳಸದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂದು ಸನ್ ಟಿವಿ ಮನವಿ ಮಾಡಿದೆ. ಜೊತೆಗೆ ₹1 ಕೋಟಿ ನಷ್ಟಪರಿಹಾರ ನೀಡಬೇಕು ಹಾಗೂ ಈ ಪ್ರಚಾರ ಅಭಿಯಾನದಿಂದ ಗಳಿಸಿದ ಆದಾಯವನ್ನು ನ್ಯಾಯಾಲಯಕ್ಕೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದೆ.

ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರು ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಆಕ್ಷೇಪಿತ ಹಾಡುಗಳನ್ನು ಐಪಿಎಲ್ ಪ್ರೋಮೋ ವಿಡಿಯೊಗಳಿಂದ ಈಗಾಗಲೇ ಕೈಬಿಡಲಾಗಿದೆ ಎಂಬ ಹೇಳಿಕೆಯನ್ನು ದೃಢೀಕರಿಸಿ ಅಧಿಕೃತ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಾಲಯವು ಸಿಎಸ್‌ಕೆಗೆ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸನ್ ಟಿವಿ ಪರ ಹಿರಿಯ ವಕೀಲ ಜೆ. ರವೀಂದ್ರನ್ ವಾದ ಮಂಡಿಸಿ, ಆಕ್ಷೇಪಣಾ ಇ-ಮೇಲ್ ಕಳುಹಿಸಿದ ಬಳಿಕ ಸಿಎಸ್‌ಕೆ ಹಾಡುಗಳ ಬಳಕೆಯನ್ನು ನಿಲ್ಲಿಸಿದೆಯಾದರೂ, ಮುಂದಿನ ದಿನಗಳಲ್ಲಿ ಈ ರೀತಿಯ ಉಲ್ಲಂಘನೆ ಆಗದಂತೆ ನ್ಯಾಯಾಲಯ ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸಿಎಸ್‌ಕೆ ಪರ ಹಾಜರಾಗಿದ್ದ ಹಿರಿಯ ವಕೀಲ ಪಿ.ಎಸ್. ರಾಮನ್ ಅವರು, ಪ್ರೋಮೋ ವಿಡಿಯೊಗಳಿಂದ ಹಾಡುಗಳನ್ನು ಈಗಾಗಲೇ ತೆಗೆದುಹಾಕಲಾಗಿದೆ ಮತ್ತು ಸೂಕ್ತ ಪರವಾನಗಿ ಇಲ್ಲದೆ ಈ ಹಾಡುಗಳನ್ನು ಭವಿಷ್ಯದಲ್ಲಿ ಮರುಬಳಕೆ ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...