ಐಪಿಎಲ್ | ಮಳೆಯಿಂದ ರದ್ದಾದ ಪಂದ್ಯ; 3ನೇ ತಂಡವಾಗಿ ಪ್ಲೇ-ಆಫ್ ಪ್ರವೇಶಿಸಿದ ಹೈದರಾಬಾದ್

Date:

ಮೇ 16ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ನಿರ್ಣಾಯಕ ಪಂದ್ಯವು ನಿರಂತರ ಮಳೆಯಿಂದಾಗಿ ರದ್ದುಗೊಂಡಿದೆ.

- Advertisement -

ಪಂದ್ಯ ರದ್ದಾದರೂ ಕೂಡ, ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ಲೇ-ಆಫ್ ಪ್ರವೇಶಿಸಿದೆ. ಆ ಮೂಲಕ ಮೂರನೇ ತಂಡವಾಗಿ ಪ್ಲೇ-ಆಫ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ-ಆಫ್ ಪ್ರವೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ 15 ಅಂಕಗಳೊಂದಿಗೆ ಐಪಿಎಲ್ 2024ರ ಪ್ಲೇಆಫ್‌ಗೆ ಪ್ರವೇಶಿಸಿದ ಮೂರನೇ ತಂಡವೆನಿಸಿತು. ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದ್ದ ಗುಜರಾತ್ ಟೈಟನ್ಸ್ ತಂಡ ಲೀಗ್ ಹಂತದಲ್ಲಿ 12 ಅಂಕಗಳೊಂದಿಗೆ ಅಭಿಯಾನ ಮುಗಿಸಿತು. ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ಮಳೆಯಿಂದಾಗಿ ರದ್ದಾದ ಎರಡನೇ ಪಂದ್ಯ ಇದಾಗಿದೆ. ಅದರಲ್ಲೂ ಗುಜರಾತ್ ತಂಡದ ವಿರುದ್ಧದ ಪಂದ್ಯವೇ ರದ್ದಾಗಿರುವುದು ವಿಪರ್ಯಾಸ.‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಕೆಆರ್ ವಿರುದ್ಧ ಮೇ 13ರಂದು ನಡೆಯಬೇಕಿದ್ದ ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು.

ಹೈದರಾಬಾದ್‌ನಲ್ಲಿ ಗುರುವಾರದಂದು ಸತತವಾಗಿ ಮಳೆಯಾಗುತ್ತಿದ್ದು, ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿತ್ತು. ಅಂತಿಮವಾಗಿ, ಪಂದ್ಯದ ಅಂಪೈರ್‌ಗಳು ಉಭಯ ತಂಡಗಳ ನಾಯಕರನ್ನು ಕರೆದು, ಕೈ ಕುಲುಕಿಸಿ ಅವರ ಒಪ್ಪಿಗೆಯೊಂದಿಗೆ ಒಂದೂ ಎಸೆತ ಕಾಣದೆ ರದ್ದುಗೊಳಿಸಬೇಕಾಯಿತು.

ಪಂದ್ಯ ಮಳೆಯಿಂದಾಗಿ ರದ್ದುಗೊಂಡ ನಂತರ, 13 ಪಂದ್ಯಗಳಿಂದ 15 ಪಾಯಿಂಟ್‌ಗಳನ್ನು ತಲುಪಿ ಐಪಿಎಲ್ 2024 ಅಂಕಪಟ್ಟಿಯಲ್ಲಿ ಅಗ್ರ-4 ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಬೆಂಗಳೂರಿನಲ್ಲಿ ಶನಿವಾರ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಎರಡು ತಂಡಗಳಲ್ಲಿ ಒಂದು ತಂಡ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ. ಆರ್‌ಸಿಬಿ ಕೇವಲ ಗೆದ್ದರೆ ಸಾಕಾಗುವುದಿಲ್ಲ. ‌ಚೆನ್ನೈಗಿಂತ ಹೆಚ್ಚು ನೆಟ್ ರನ್ ರೇಟ್ ಗಳಿಸಬೇಕಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...