ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಮೆರಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
India have won the toss and they’ve decided to bowl first. pic.twitter.com/6nMSZxB8LJ
— Mufaddal Vohra (@mufaddal_vohra) June 12, 2024
ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕವು ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೆ ಕೆಡವಿದೆ. ಯುಎಸ್‌ಎ ತನ್ನ ಆರಂಭಿಕ ಪಂದ್ಯದಲ್ಲಿ ಕೆನಡಾ ತಂಡವನ್ನು ಸೋಲಿಸುವಾಗ 195ರ ಬೃಹತ್ ಗುರಿಯನ್ನು ಬೆನ್ನಟ್ಟಿ, ಗೆದ್ದಿತ್ತು.
ನಂತರ, ತಮ್ಮ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ರೋಚಕವಾಗಿ ಸೋಲಿಸುವ ಮೂಲಕ ಮತ್ತಷ್ಟು ನಿಬ್ಬೆರಗಾಗಿಸಿದರು. ಟೈ ಪಂದ್ಯದ ನಂತರ ಸೂಪರ್ ಓವರ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಹೀನಾಯ ಸೋಲನ್ನು ನೀಡಿ, ಆಘಾತ ನೀಡಿದ್ದರು.
A look at #TeamIndia‘s Playing XI 🔽
Follow The Match ▶️ https://t.co/HTV9sVyS9Y#T20WorldCup | #USAvIND pic.twitter.com/iljf2ozCjn
— BCCI (@BCCI) June 12, 2024
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ತಂಡ ಕೂಡ ಈಗಾಗಲೇ ಎರಡು ಪಂದ್ಯಗಳನ್ನಾಡಿದ್ದು, ಎರಡರಲ್ಲೂ ಜಯ ಗಳಿಸಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿದ್ದರೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದಿದ್ದ ಅಲ್ಪಮೊತ್ತದ ಪಂದ್ಯದಲ್ಲಿ 6 ರನ್‌ಗಳಿಂದ ರೋಚಕ ಜಯ ಗಳಿಸಿತ್ತು. ಆ ಮೂಲಕ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು ತಮ್ಮ ಕೈಯ್ಯಲ್ಲಿದ್ದ ಪಂದ್ಯವನ್ನು ಸೋಲುವ ಮೂಲಕ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.
ಇಂದು ಒಂದು ವೇಳೆ ಅಮೆರಿಕ ಗೆದ್ದರೆ, ಪಾಕಿಸ್ತಾನ ತಂಡವು ಬಹುತೇಕ ಸೂಪರ್ 8ರ ಘಟ್ಟಕ್ಕೆ ತಲುಪುವುದು ಅಸಾಧ್ಯದ ಮಾತಾಗಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಗೆಲ್ಲುವಂತೆ ಪಾಕಿಸ್ತಾನದ ಅಭಿಮಾನಿಗಳು ಪ್ರಾರ್ಥನೆ ನಡೆಸುತ್ತಿದ್ದಾರೆ.
ಅಮೆರಿಕ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾವು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಮೆರಿಕದಲ್ಲಿ ಒಂದೆರಡು ಬದಲಾವಣೆಗಳಾಗಿದೆ.
Our Playing XI for today’s match against India! 💪🔥
India won the toss and elected to field first. #T20WorldCup | #USAvIND 🇺🇸 pic.twitter.com/SI6XnkjiJw
— USA Cricket (@usacricket) June 12, 2024
