ಟಿ20 ಮಹಿಳಾ ವಿಶ್ವಕಪ್‌: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 95 ರನ್‌ಗಳ ಭರ್ಜರಿ ಜಯ

Date:

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯ ಗುಂಪು-1ರ 10ನೇ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಭಾರತ ತಂಡ, ನೆದರ್ಲೆಂಡ್ಸ್ ವಿರುದ್ಧ 95 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ಭಾರತ ತನ್ನ 2ನೇಯದಾಗಿ ಪಾರಮ್ಯ ಮೆರೆದಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್‌ಪ್ರೀತ್ ಕೌರ್ ಬಳಗವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಇದು ಮಹಿಳಾ ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತದ ಗರಿಷ್ಠ ಮೊತ್ತವಾಗಿದೆ. ಈ ಕಠಿಣ ಗುರಿಯನ್ನು ಬೆನ್ನತ್ತಿದ ನೆದರ್ಲೆಂಡ್ಸ್ ತಂಡವು ಕೇವಲ 17.3 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಗಿ ಶರಣಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂದಾನ ಮತ್ತು ಶಫಾಲಿ ವರ್ಮಾ ನೆದರ್ಲೆಂಡ್ಸ್ ಬೌಲರ್‌ಗಳನ್ನು ಕಾಡಿದರು. ಇಬ್ಬರೂ ಸೇರಿ ಮೊದಲ ವಿಕೆಟ್‌ಗೆ 115 ರನ್‌ಗಳ ಭದ್ರ ಬುನಾದಿ ಹಾಕಿಕೊಟ್ಟರು. ಬಿರುಸಿನ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂದಾನ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 74 ರನ್ ಸಿಡಿಸಿ ಮಿಂಚಿದರು. ಮತ್ತೊಂದೆಡೆ, ಶಫಾಲಿ ವರ್ಮಾ 38 ಎಸೆತಗಳಲ್ಲಿ 55 ರನ್ (10 ಬೌಂಡರಿ) ಗಳಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಅರ್ಧಶತಕ ದಾಖಲಿಸಿದರು. ಕೊನೆಯ ಓವರ್‌ಗಳಲ್ಲಿ ರಿಚಾ ಘೋಷ್ (8 ಎಸೆತಗಳಲ್ಲಿ 20 ರನ್) ಮತ್ತು ದೀಪ್ತಿ ಶರ್ಮಾ ಬಿರುಸಿನ ಆಟವಾಡಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

210 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭದಿಂದಲೇ ಆಘಾತ ನೀಡಿದರು. ನಾಯಕಿ ಬಾಬೆಟ್ ಡಿ ಲೀಡೆ (28 ರನ್) ಮತ್ತು ಹೆದರ್ ಸೀಗರ್ಸ್ (21 ರನ್) ಹೊರತುಪಡಿಸಿ ಉಳಿದ ಯಾವುದೇ ಆಟಗಾರ್ತಿಯರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ಭಾರತದ ಪರ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಯುವ ಬೌಲರ್ ಶ್ರೀ ಚರಣಿ ಕೇವಲ 19 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದರು. ಬ್ಯಾಟಿಂಗ್‌ನಲ್ಲಿ ಮಿಂಚಿದ್ದ ಶಫಾಲಿ ವರ್ಮಾ ಬೌಲಿಂಗ್‌ನಲ್ಲೂ ಕಮಾಲ್ ಮಾಡಿ 20 ರನ್‌ಗಳಿಗೆ 3 ವಿಕೆಟ್ ಪಡೆದರೆ, ನಂದಿನಿ ಶರ್ಮಾ 2 ವಿಕೆಟ್ ಪಡೆದು ನೆದರ್ಲೆಂಡ್ಸ್ ಪತನವನ್ನು ಪೂರ್ಣಗೊಳಿಸಿದರು.

ಸಂಕ್ಷಿಪ್ತ ಸ್ಕೋರ್:
ಭಾರತ : 20 ಓವರ್‌ಗಳಲ್ಲಿ 5 ವಿಕೆಟ್‌ಗೆ 209 (ಸ್ಮೃತಿ ಮಂದಾನ 74, ಶಫಾಲಿ ವರ್ಮಾ 55, ರಿಚಾ ಘೋಷ್ 20; ಕ್ಯಾರೋಲಿನ್ ಡಿ ಲ್ಯಾಂಗ್ 32ಕ್ಕೆ 2).
ನೆದರ್ಲೆಂಡ್ಸ್ : 17.3 ಓವರ್‌ಗಳಲ್ಲಿ 114 ಆಲೌಟ್ (ಬಾಬೆಟ್ ಡಿ ಲೀಡೆ 28, ಹೆದರ್ ಸೀಗರ್ಸ್ 21; ಶ್ರೀ ಚರಣಿ 19ಕ್ಕೆ 4, ಶಫಾಲಿ ವರ್ಮಾ 20ಕ್ಕೆ 3, ನಂದಿನಿ ಶರ್ಮಾ 22ಕ್ಕೆ 2).

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...