ಟಿ20 ವಿಶ್ವಕಪ್ | ಆಸ್ಟ್ರೇಲಿಯಾಕ್ಕೆ ಶಾಕ್ ನೀಡಿದ ಅಫ್ಘಾನಿಸ್ತಾನ; ರಶೀದ್ ಖಾನ್ ಬಳಗಕ್ಕೆ ರೋಚಕ ಜಯ

Date:

ಭಾನುವಾರ ತಡರಾತ್ರಿ ಕಿಂಗ್‌ಸ್ಟೌನ್‌ನ ಅರ್ನೋಸ್ ವೇಲ್ ಗ್ರೌಂಡ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ರಶೀದ್ ಖಾನ್ ನೇತೃತ್ವದ ಅಫ್ಘಾನಿಸ್ತಾನ ತಂಡವು ರೋಚಕ ಗೆಲುವು ದಾಖಲಿಸಿ, ಶಾಕ್ ನೀಡಿದೆ.

ಸೂಪರ್ 8ನ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಆಸ್ಟ್ರೇಲಿಯಾ ತಂಡದ ವಿರುದ್ಧ 21 ರನ್‌ಗಳಿಂದ ಗೆದ್ದು ಬೀಗಿದೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ ತಂಡಕ್ಕೆ ಮೊದಲ ಗೆಲುವಾಗಿದೆ.

ಅಲ್ಲದೆ, ಭಾರತದಲ್ಲಿ ನಡೆದಿದ್ದ 2023ರ ಏಕದಿನ ವಿಶ್ವಕಪ್‌ನಲ್ಲಿ ಗೆಲುವು ಕಸಿದುಕೊಂಡಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಇದೀಗ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್‌ನಲ್ಲಿ ಗೆದ್ದು ಸೇಡು ತೀರಿಸಿಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡ ರಹಮಾನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝದ್ರಾನ್ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್‌ಗಳನ್ನು ಗಳಿಸಿ, ಸಾಧಾರಣ ಗುರಿ ನೀಡಿತ್ತು.


149 ರನ್‌ಗಳ ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅರ್ಧ ಶತಕದ ಹೊರತಾಗಿಯೂ 19.2 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಗಿದ್ದರಿಂದ 21 ರನ್‌ಗಳ ಅಂತರದಿಂದ ಸೋತಿತು.

ಕರಾರುವಾಕ್ಕಾದ ಬೌಲಿಂಗ್‌‌ ದಾಳಿ ನಡೆಸಿದ ಉದಯೋನ್ಮುಖ ಅಫ್ಘಾನಿಸ್ತಾನವು 21 ರನ್‌ಗಳ ರೋಚಕ ಜಯ ದಾಖಲಿಸುವ ಮೂಲಕ, ಏಕದಿನ ವಿಶ್ವಕಪ್ ಚಾಂಪಿಯನ್ನರಿಗೆ ಆಘಾತ ನೀಡಿದೆ.

ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಡೇವಿಡ್ ವಾರ್ನರ್ ಉತ್ತಮ ಆರಂಭ ನೀಡಲಿಲ್ಲ. ಟ್ರಾವಿಸ್ ಹೆಡ್, ನವೀನ್ ಉಲ್ ಹಕ್ ಎಸೆದ ಮೊದಲ ಓವರ್‌ನಲ್ಲಿ ಶೂನ್ಯಕ್ಕೆ ಔಟಾದರು.

ಡೇವಿಡ್ ವಾರ್ನರ್ 3 ರನ್ ಮತ್ತು ಮಿಚೆಲ್ ಮಾರ್ಷ್ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾ ತಂಡದ ರಕ್ಷಣೆ ಬಂದರು ಮತ್ತು ಅಫ್ಘಾನ್ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದರು.

ಗ್ಲೆನ್ ಮ್ಯಾಕ್ಸ್‌ವೆಲ್ 41 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 59 ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಮತ್ತೆ ಆಟಕ್ಕೆ ತಂದರು.

ಉಳಿದಂತೆ ಮಾರ್ಕಸ್ ಸ್ಟೋಯಿನಿಸ್ 11 ರನ್, ಟಿಮ್ ಡೇವಿಡ್ 2, ಮ್ಯಾಥ್ಯೂ ವೇಡ್ 5, ಪ್ಯಾಟ್ ಕಮ್ಮಿನ್ಸ್ 3, ಆಶ್ಟನ್ ಆಗರ್ 2, ಆಡಮ್ ಝಂಪಾ 9 ಮತ್ತು ಜೋಶ್ ಹೇಜಲ್‌ವುಡ್ 5 ರನ್ ಗಳಿಸಿದರು.

149 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅಧಶತಕದ ಹೊರತಾಗಿಯೂ 19.2 ಓವರ್‌ಗಳಲ್ಲಿ 127 ರನ್‌ಗಳಿಗೆ ಸರ್ವಪತನ ಕಂಡಿತು.

ಗುಲ್ಬದಿನ್ ನೈಬ್ 4 ಓವರ್‌ಗಳಲ್ಲಿ 20 ರನ್ ನೀಡಿ 4 ವಿಕೆಟ್ ಪಡೆದರೆ, ನವೀನ್ ಉಲ್ ಹಕ್ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರು. ಅಲ್ಲದೆ ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್ ಮತ್ತು ರಶೀದ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ತಂಡದ ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 15.5 ಓವರ್‌ಗಳಲ್ಲಿ 118 ರನ್‌ಗಳ ಜೊತೆಯಾಟ ನೀಡಿತ್ತು.

ರಹಮಾನುಲ್ಲಾ ಗುರ್ಬಾಜ್ 49 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 60 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 48 ಎಸೆತಗಳಲ್ಲಿ 6 ಬೌಂಡರಿ ಸಮೇತ 51 ರನ್ ಬಾರಿಸಿದರು. ಉಳಿದಂತೆ ಕರೀಂ ಜನತ್ 13 ರನ್, ಮೊಹಮ್ಮದ್ ನಬಿ 10 ರನ್ ಗಳಿಸಿ ತಂಡದ ಮೊತ್ತವನ್ನು 140ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾ ಪರ ಪ್ಯಾಟ್ ಕಮ್ಮಿನ್ಸ್ 3 ವಿಕೆಟ್ ಪಡೆದರೆ, ಆಡಮ್ ಝಂಪಾ 2 ವಿಕೆಟ್ ಮತ್ತು ಮಾರ್ಕಸ್ ಸ್ಟೋಯಿನಿಸ್ 1 ವಿಕೆಟ್ ಪಡೆದರು.

ಇದೇ ವೇಳೆ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಟಿ20 ಪಂದ್ಯಗಳಲ್ಲಿ ಸತತ ಹ್ಯಾಟ್ರಿಕ್ ದಾಖಲಿಸಿದ ಮೊದಲ ಬೌಲರ್ ಎನಿಸಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ವಿಂಬಲ್ಡನ್ ಫೈನಲ್: ಜಾಸ್ಮಿನ್ ಪಾವೊಲಿನಿ ಸೋಲಿಸಿ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್

ಲಂಡನ್‌ನಲ್ಲಿ ನಡೆದ 2024ರ ವಿಂಬಲ್ಡನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಜಾಸ್ಮಿನ್...

ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ...

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....