ಟಿ20 ವಿಶ್ವಕಪ್: ಅಭಿಷೇಕ್, ಹಾರ್ದಿಕ್ ಸ್ಫೋಟಕ ಆಟ; ಜಿಂಬಾಬ್ವೆ ಎದುರು ಭಾರತ ದಾಖಲೆಯ ಮೊತ್ತ

Date:

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಟೂರ್ನಿಯ ಸೂಪರ್-8 ಹಂತದ (ಗುಂಪು 1) 48ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 256 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿದೆ.

- Advertisement -

ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಗರಿಷ್ಠ ಮೊತ್ತವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಜಿಂಬಾಬ್ವೆ ನಾಯಕ ಸಿಕಂದರ್ ರಾಜಾ ಅವರ ನಿರ್ಧಾರವನ್ನು ಭಾರತದ ಬ್ಯಾಟರ್‌ಗಳು ಸಂಪೂರ್ಣವಾಗಿ ತಲೆಕೆಳಗಾಗುವಂತೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇನಿಂಗ್ಸ್ ಆರಂಭಿಸಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಬಿರುಸಿನ ಆರಂಭ ಒದಗಿಸಿದರು. ಸಂಜು ಸ್ಯಾಮ್ಸನ್ ಕೇವಲ 15 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ 24 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ಆರಂಭಿಕನಾಗಿ ಕಣಕ್ಕಿಳಿದ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಅಭಿಷೇಕ್ ಕೇವಲ 30 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಒಳಗೊಂಡ 55 ರನ್‌ಗಳನ್ನು ಚಚ್ಚಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಇದನ್ನು ಓದಿದ್ದೀರಾ? ‘ಚಿನ್ನಸ್ವಾಮಿ’ಯಲ್ಲಿ ಐಪಿಎಲ್ ಪಂದ್ಯಗಳು ಇನ್ನೂ ಅತಂತ್ರ: ಬೇಷರತ್ ಅನುಮತಿಗೆ ಆರ್‌ಸಿಬಿ ಪಟ್ಟು

ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದ ಇಶಾನ್ ಕಿಶನ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಜಿಂಬಾಬ್ವೆ ಬೌಲರ್‌ಗಳನ್ನು ದಂಡಿಸುವಲ್ಲಿ ಹಿಂದೆ ಬೀಳಲಿಲ್ಲ. ಇಶಾನ್ ಕಿಶನ್ 24 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 38 ರನ್‌ಗಳ ಅತ್ಯಮೂಲ್ಯ ಕಾಣಿಕೆ ನೀಡಿದರು. ಕ್ರೀಸ್‌ಗೆ ಬರುತ್ತಿದ್ದಂತೆಯೇ ಬಿರುಸಿನ ಆಟವಾಡಿದ ಸೂರ್ಯಕುಮಾರ್ ಯಾದವ್ ಕೇವಲ 13 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ 33 ರನ್ ಗಳಿಸಿ ರನ್‌ರೇಟ್ ಹೆಚ್ಚಿಸುವಲ್ಲಿ ಯಶಸ್ವಿಯಾದರು.

ಇನಿಂಗ್ಸ್‌ನ ಕೊನೆಯ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಅವರ ಸ್ಫೋಟಕ ಜುಗಲ್‌ಬಂದಿ ಭಾರತದ ಮೊತ್ತವನ್ನು 250ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಕೇವಲ 23 ಎಸೆತಗಳನ್ನು ಎದುರಿಸಿದ ಹಾರ್ದಿಕ್ ಪಾಂಡ್ಯ ಅಜೇಯ 50 ರನ್ ಚಚ್ಚಿದರೆ, ಅವರಿಗೆ ಅತ್ಯುತ್ತಮ ಸಾಥ್ ನೀಡಿದ ತಿಲಕ್ ವರ್ಮಾ ಕೇವಲ 16 ಎಸೆತಗಳಲ್ಲಿ ಅಜೇಯ 44 ರನ್ ಸಿಡಿಸಿ ಜಿಂಬಾಬ್ವೆ ಪಾಳಯದಲ್ಲಿ ನಡುಕ ಹುಟ್ಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...