ಟಿ20 ವಿಶ್ವಕಪ್ | ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಶತಕ ಬಾರಿಸಿದ ಕೆನಡಾದ ಆಟಗಾರ

Date:

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಕೆನಡಾ ತಂಡದ ಆರಂಭಿಕ ಆಟಗಾರ ಯುವರಾಜ್‌ ಸಾಮ್ರಾ ಭರ್ಜರಿ ಶತಕ ಸಿಡಿಸುವ ಇತಿಹಾಸ ನಿರ್ಮಿಸಿದ್ದಾರೆ. ಸಾಮ್ರಾ ಭಾರತದ ಕ್ರಿಕೆಟ್‌ ದಿಗ್ಗಜ ಯುವರಾಜ್‌ ಸಿಂಗ್‌ ಅವರ ಅಪ್ಪಟ ಅಭಿಮಾನಿ ಎಂಬುದು ಕೂಡ ವಿಶೇಷ.

- Advertisement -

ಸೂಪರ್‌ – 8ಗೆ ಲಗ್ಗೆಯಿಡಲು ನ್ಯೂಜಿಲೆಂಡ್‌ ತಂಡಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕೆನಡಾ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಆರಂಭಿಕನಾಗಿ ಕಣಕ್ಕಿಳಿದ ಸಾಮ್ರಾ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ್ರೂ ಸ್ಫೋಟಕ ಶತಕ ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 19 ವರ್ಷದ ಸಾಮ್ರಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಭಾರತ–ಪಾಕ್ ಟಿ20 ಕದನ: ಟಾಸ್ ಬಳಿಕ ಹಸ್ತಲಾಘವ ನೀಡದ ಉಭಯ ತಂಡಗಳ ನಾಯಕರು

ಬಲಿಷ್ಠ ತಂಡದ ವಿರುದ್ಧ ದಿಟ್ಟ ಬ್ಯಾಟಿಂಗ್‌ ನಡೆಸಿದ ಸಾಮ್ರಾ 36 ಎಸೆತಗಳಲ್ಲಿ 2 ಸಿಕ್ಸರ್‌, 6 ಬೌಂಡರಿಯೊಂದಿಗೆ ಅರ್ಧಶತಕ ಬಾರಿಸಿದ್ದರು. ಬಳಿಕ ಸ್ಫೋಟಕ ಪ್ರದರ್ಶನಕ್ಕೆ ಮುಂದಾದ ಅವರು ಮುಂದಿನ 22 ಎಸೆತಗಳಲ್ಲಿ 50 ರನ್‌ ಬಾರಿಸಿ ಶತಕ ಪೂರೈಸಿದರು. ಒಟ್ಟು 65 ಎಸೆತಗಳನ್ನು ಎದುರಿಸಿದ ಸಾಮ್ರಾ 110 ರನ್‌ (6 ಸಿಕ್ಸರ್‌, 11 ಬೌಂಡರಿ) ಚಚ್ಚಿ ಔಟಾದರು

ಮಿಚೆಲ್‌ ಸ್ಯಾಂಟ್ನರ್‌ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ನ್ಯೂಜಿಲೆಂಡ್‌ ತಂಡಕ್ಕೆ ಡೇರಿಲ್‌ ಮಿಚೆಲ್‌ ಇಂದಿನ ನಾಯಕತ್ವ ವಹಿಸಿದ್ದರು. ಮ್ಯಾಟ್‌ ಹೆನ್ರಿ ಸಾರಥ್ಯದ ಬಲಿಷ್ಠ ಬೌಲಿಂಗ್‌ ಪಡೆ ಹೊಂದಿರುವ ನ್ಯೂಜಿಲೆಂಡ್‌ ತಂಡ ಎದುರಾಳಿ ಕೆನಡಾ ತಂಡವನ್ನ ಗರಿಷ್ಠ 150 ರನ್‌ ಒಳಗೆ ಕಟ್ಟಿಹಾಕುತ್ತದೆ ಎಂದು ನಿರೀಕ್ಷಿಸಲಾಗುತ್ತು. ಆದ್ರೆ ಕೆನಡಾ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿತು. 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿರುವ ಕೆನಡಾ ಕಿವೀಸ್‌ಗೆ 174 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...