ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಗುಜರಾತ್‌ನ ಅಹ್ಮದಾಬಾದ್‌ನಲ್ಲಿ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಬಳಗವು ಟಾಸ್ ಸೋತಿದ್ದರಿಂದ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ, ಬಳಿಕ ಸೋತಿತ್ತು. ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ.
🚨 Toss Update from Barbados
Captain Rohit Sharma has won the toss & #TeamIndia have elected to bat against South Africa in the #T20WorldCup Final.
Follow The Match ▶️ https://t.co/c2CcFqY7Pa#SAvIND | @ImRo45 pic.twitter.com/Hb7ctLLiBT
— BCCI (@BCCI) June 29, 2024
ಸೆಮಿಫೈನಲ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಎರಡೂ ತಂಡಗಳು ಫೈನಲ್ ಪಂದ್ಯದಲ್ಲಿ ಆಡುತ್ತಿವೆ. ಹಾಗಾಗಿ, ಎರಡೂ ತಂಡದಲ್ಲಿ ಯಾವುದೇ ಬದಲಾವಣೆಗಳು ಮಾಡಿಲ್ಲ.
ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ ಫೈನಲ್ | ಸೋಲಿಲ್ಲದವರ ನಡುವೆ ಇಂದು ‘ಚಾಂಪಿಯನ್’ ಪಟ್ಟಕ್ಕಾಗಿ ಸೆಣಸಾಟ
ಭಾರತ ಪ್ಲೇಯಿಂಗ್-11
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
Here’s our Playing XI 🔽
Follow The Match ▶️ https://t.co/c2CcFqY7Pa#T20WorldCup | #TeamIndia | #SAvIND pic.twitter.com/7YQ0D3tr7E
— BCCI (@BCCI) June 29, 2024
ದಕ್ಷಿಣ ಆಫ್ರಿಕಾ ಪ್ಲೇಯಿಂಗ್-11
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕರಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜೆನ್ಸನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೇಝ್ ಶಮ್ಸಿ.
🪙 TOSS | #SAvIND 🇿🇦🇮🇳
The Proteas will field first. India won the toss & elected to bat.
No changes to our XI. 👊 #WozaNawe #BePartOfIt #OutOfThisWorld #T20WorldCup pic.twitter.com/XzueCPN56x
— Proteas Men (@ProteasMenCSA) June 29, 2024
