ಟಿ20 ವಿಶ್ವಕಪ್ | ಸೂಪರ್ 8ರ ಮೊದಲ ಪಂದ್ಯ; ಅಫ್ಘಾನಿಸ್ತಾನ ವಿರುದ್ಧ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

Date:

ಟಿ20 ವಿಶ್ವಕಪ್‌ನ ಸೂಪರ್ 8ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ ಬಳಗ, ಆರಂಭಿಕ ಆಘಾತದ ಹೊರತಾಗಿಯೂ ಸೂರ್ಯ ಕುಮಾರ್ ಬಾರಿಸಿದ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತ್ತು. ಆ ಮೂಲಕ ಅಫ್ಘಾನಿಸ್ತಾನ ತಂಡಕ್ಕೆ ಸವಾಲಿನ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಶೀದ್ ಖಾನ್ ನೇತೃತ್ವದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ 134 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಟೀಮ್ ಇಂಡಿಯಾವು 47 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಸ್ಪೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾದ ಬೌಲರ್‌ಗಳ ದಾಳಿಗೆ ರನ್ ಗಳಿಸಲು ಪರದಾಡಿದ ಅಫ್ಘಾನಿಸ್ತಾನದ ಬ್ಯಾಟರ್‌ಗಳು, 47 ರನ್‌ಗಳಿಂದ ಸೋಲೊಪ್ಪಿಕೊಂಡರು. ಅಫ್ಘಾನ್ ಪರ 26 ರನ್ ಗಳಿಸುವ ಮೂಲಕ ಅಝ್ಮತುಲ್ಲಾ ಒಮರ್ ಝಾಯ್ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಉಳಿದಂತೆ ನಜೀಬುಲ್ಲಾ ಝದ್ರಾನ್ 19, ಗುಲಾಮ್ ನೈಬ್ 17 ಹಾಗೂ ಮೊಹಮ್ಮದ್ ನಬಿ 14 ರನ್ ಗಳಿಸಲಷ್ಟೇ ಶಕ್ತರಾದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಜಸ್ಪೀತ್ ಬುಮ್ರಾ ಕೇವಲ 7 ರನ್ ನೀಡಿ ಮೂರು ವಿಕೆಟ್ ಕಿತ್ತು ಮಿಂಚಿದರು. ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 36ಕ್ಕೆ 3 ವಿಕೆಟ್ ಕಿತ್ತರೆ, ಕುಲ್‌ದೀಪ್ ಯಾದವ್ 2 ವಿಕೆಟ್ ಪಡೆಯುವಲ್ಲಿ ಸಫಲರಾದರು. ಉಳಿದಂತೆ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಅರ್ಧಶತಕ ಗಳಿಸಿ ಮಿಂಚಿದ ಸೂರ್ಯಕುಮಾರ್ ಯಾದವ್

ಟಾಸ್ ಗೆದ್ದು ಮೊದಲು ಬ್ಯಾಟ್ ಬೀಸಿದ ಟೀಮ್ ಇಂಡಿಯಾ, ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೂರನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ ಔಟಾದರು. 13 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿ ಫಜಲ್‍ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು.

ಇನ್ನೂ ರೋಹಿತ್ ವಿಕೆಟ್ ಪತನದ ಬೆನ್ನಲ್ಲೇ ಕ್ರೀಸ್‍ಗಿಳಿದ ರಿಷಭ್ ಪಂತ್ ಕೇವಲ 11 ಎಸೆತಗಳಲ್ಲಿ 20 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಶಿವಂ ದುಬೆ ಕೇವಲ 10 ರನ್ ಗಳಿಸಿದರು.

90 ರನ್‍ಗಳಿಸಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾಕ್ಕೆ 5ನೇ ವಿಕೆಟ್‍ಗೆ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 60 ರನ್‍ಗಳ ಅಮೂಲ್ಯ ಜೊತೆಯಾಟವಾಡುವ ಮೂಲಕ ತಂಡಕ್ಕೆ ಉತ್ತಮ ರನ್‍ಗಳ ಕೊಡುಗೆ ಕೊಟ್ಟರು.

ಕೇವಲ 28 ಎಸೆತಗಳನ್ನು ಎದುರಿಸಿದ ಸೂರ್ಯ ಕುಮಾರ್ 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 53 ರನ್ ಸಿಡಿಸಿ, ಫಜಲ್‍ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು.

ಇದನ್ನು ಓದಿದ್ದೀರಾ? UGC-NET ಪರೀಕ್ಷೆಯಂತೆ ನೀಟ್ ಪರೀಕ್ಷೆ ರದ್ದು ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಹಾರ್ದಿಕ್ ಪಾಂಡ್ಯ 24 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 32 ರನ್ ಬಾರಿಸಿ ನವೀನ್ ಉಲ್ ಹಕ್‍ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ 12 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 180ರ ಗಡಿ ಮುಟ್ಟಿಸುವಲ್ಲಿ ಯಶಸ್ವಿಯಾದರು.

ಅಫ್ಘಾನಿಸ್ತಾನ ಪರ ನಾಯಕ ರಶೀದ್ ಖಾನ್ ಹಾಗೂ ಫಜಲ್‍ಹಕ್ ಫಾರೂಕಿ ತಲಾ 3 ವಿಕೆಟ್ ಪಡೆದರೆ, ನವೀನ್ ಉಲ್ ಹಕ್ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು,...