ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಆಯ್ಕೆ

Date:

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಟೂರ್ನಿಯ ‘ಎ’ ಗುಂಪಿನ 36ನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟಾಸ್ ಗೆದ್ದಿರುವ ಭಾರತ ತಂಡವು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

- Advertisement -

ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ಈ ಮುಖಾಮುಖಿ ನಡೆಯುತ್ತಿದೆ. ಈಗಾಗಲೇ ಆಡಿರುವ ಸತತ ಮೂರು ಪಂದ್ಯಗಳಲ್ಲಿ (ಪಾಕಿಸ್ತಾನ, ಅಮೆರಿಕ ಮತ್ತು ನಮೀಬಿಯಾ ವಿರುದ್ಧ) ಭರ್ಜರಿ ಜಯ ದಾಖಲಿಸಿರುವ ಭಾರತ ತಂಡ, ‘ಎ’ ಗುಂಪಿನಿಂದ ಅಜೇಯವಾಗಿ ‘ಸೂಪರ್-8’ ಹಂತಕ್ಕೆ ಲಗ್ಗೆಯಿಟ್ಟಿದೆ. ಗುಂಪು ಹಂತದ ಈ ಅಂತಿಮ ಪಂದ್ಯದಲ್ಲೂ ಗೆಲುವಿನ ಲಯ ಕಾಯ್ದುಕೊಂಡು, ಸಂಪೂರ್ಣ ಆತ್ಮವಿಶ್ವಾಸದೊಂದಿಗೆ ಮುಂದಿನ ಹಂತಕ್ಕೆ ಹೆಜ್ಜೆಹಾಕುವುದು ಟೀಮ್ ಇಂಡಿಯಾದ ಪ್ರಮುಖ ಗುರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮತ್ತೊಂದೆಡೆ, ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಕ್ಕೆ ಇದು ಪ್ರತಿಷ್ಠೆಯ ಕಣವಾಗಿದೆ. ಬಲಿಷ್ಠ ಭಾರತೀಯ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕುವುದು ಡಚ್ ಬೌಲರ್‌ಗಳಿಗೆ ದೊಡ್ಡ ಸವಾಲಾಗಲಿದೆ. ಬ್ಯಾಟಿಂಗ್‌ಗೆ ಉತ್ತಮ ನೆರವು ನೀಡುವ ಅಹಮದಾಬಾದ್ ಪಿಚ್‌ನಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಭಾರತ ತಂಡವು ಬೃಹತ್ ಮೊತ್ತ ಕಲೆಹಾಕಿ ಎದುರಾಳಿಗಳ ಮೇಲೆ ಆರಂಭದಿಂದಲೇ ಒತ್ತಡ ಹೇರುವ ರಣತಂತ್ರ ರೂಪಿಸಿದೆ.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಭಾರತದ ವಿರುದ್ಧ ಸೋತರೂ ವಿಶಿಷ್ಟ ದಾಖಲೆ ನಿರ್ಮಿಸಿದ ಪಾಕ್‌ ತಂಡ

ಇತ್ತಂಡಗಳ 11ರ ಬಳಗ

ಭಾರತ:
ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬೂಮ್ರಾ ಮತ್ತು ವರುಣ್ ಚಕ್ರವರ್ತಿ.

ನೆದರ್ಲೆಂಡ್ಸ್:
ಮೈಕೆಲ್ ಲೆವಿಟ್, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ಸ್ಕಾಟ್ ಎಡ್ವರ್ಡ್ಸ್ (ನಾಯಕ ಮತ್ತು ವಿಕೆಟ್ ಕೀಪರ್), ಝಾಕ್ ಲಯನ್-ಕ್ಯಾಚೆಟ್, ಲೋಗನ್ ವಾನ್ ಬೀಕ್, ಆರ್ಯನ್ ದತ್, ರೋಲೊಫ್ ವಾನ್ ಡೆರ್ ಮೆರ್ವೆ, ಪಾಲ್ ವಾನ್ ಮೀಕೆರೆನ್ ಮತ್ತು ಫ್ರೆಡ್ ಕ್ಲಾಸೆನ್.

ಪಂದ್ಯದ ಸಮಯ ಮತ್ತು ನೇರ ಪ್ರಸಾರ
ಪಂದ್ಯ ಆರಂಭ:
ಸಂಜೆ 7:00 ಗಂಟೆಗೆ (ಭಾರತೀಯ ಕಾಲಮಾನ)
ನೇರ ಪ್ರಸಾರ (ಟಿವಿ): ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋ ಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...